ಶಿಕ್ಷಕಿಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳ : ಬ್ರಾಹ್ಮಣ ಮಂಚಾಲೆ ಶಾಲೆ ಬಳಿ ನಡೆದ ಘಟನೆ
Team Udayavani, Mar 23, 2022, 2:42 PM IST
ಸಾಗರ: ತಾಲೂಕಿನ ಬ್ರಾಹ್ಮಣ ಮಂಚಾಲೆ ಬಳಿ ಅಪರಿಚಿತ ವ್ಯಕ್ತಿಯೋರ್ವ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಘಟನೆ ಬುಧವಾರ ನಡೆದಿದೆ.
ಬ್ರಾಹ್ಮಣ ಮಂಚಾಲೆ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರಭಾವತಿ ಅವರು ಬಸ್ಸಿನಿಂದ ಇಳಿದು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ 35 ಗ್ರಾಂ. ಬಂಗಾರದ ಮಾಂಗಲ್ಯ ಸರ ಹಾಗೂ ಇನ್ನೊಂದು ಚಿನ್ನದ ಸರ ಕಿತ್ತುಕೊಂಡು ಶಿಕ್ಷಕಿಯನ್ನು ತಳ್ಳಿ ಪರಾರಿಯಾಗಿದ್ದಾನೆ.
ಏಕಾಏಕಿ ಚರಂಡಿಗೆ ಬಿದ್ದ ಹಿನ್ನೆಲೆಯಲ್ಲಿ ಪ್ರಭಾವತಿಯವರ ತಲೆ ಭಾಗದಲ್ಲಿ ತೀವ್ರ ಪೆಟ್ಟಾಗಿದ್ದು, ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ಪ್ರಭಾವತಿಯವರು ಸಾಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ : 6 ನೇ ತರಗತಿ ಬಳಿಕ ಹುಡುಗಿಯರಿಗೆ ಶಿಕ್ಷಣ ಇಲ್ಲ : ತಾಲಿಬಾನ್ ಘೋಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ
Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ