ಸೊಸೈಟಿ ವ್ಯವಸ್ಥಾಪಕಿ ಆತ್ಮಹತ್ಯೆ ಪ್ರಕರಣ; ಸಹೋದ್ಯೋಗಿಗಳ ಒತ್ತಡ ಆತ್ಮಹತ್ಯೆಗೆ ಕಾರಣ: ದೂರು

ಸಿದ್ದಾಪುರ ಸೊಸೈಟಿ ವ್ಯವಸ್ಥಾಪಕಿ ಆಶಾ ಆತ್ಮಹತ್ಯೆ ಪ್ರಕರಣ

Team Udayavani, Mar 27, 2024, 6:15 AM IST

13-siddapura

ಸಿದ್ದಾಪುರ: ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿ ಆಶಾ ಎಸ್‌. (52) ಅವರು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್‌ ರಾವ್‌, ಸಿಬಂದಿ ಮಂಜುನಾಥ, ವಲಯ ಮೇಲ್ವಿಚಾರಕ ಉದಯ ಕುಮಾರ ಶೆಟ್ಟಿ ಅವರೇ ಪ್ರೇರಣೆ ಎಂದು ಪತಿ ವಿಜಯ (52) ಮಾ. 25ರಂದು ಪೊಲೀಸರಿಗೆ ಮರು ದೂರು ನೀಡಿದ್ದಾರೆ.

ಆಶಾ ಮಾ. 20ರ ಮಧ್ಯಾಹ್ನ ಮನೆಯಲ್ಲಿ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಿಗೆ ಕಚೇರಿಯ ಸಿಬಂದಿ ನಿರಂತರ ಕಿರುಕುಳ ನೀಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಆಕೆ ಮನೆಯಲ್ಲಿ ಯಾರೊಂದಿಗೂ ಹೆಚ್ಚಾಗಿ ಮಾತನಾಡುತ್ತಿರಲಿಲ್ಲ. ವಿಚಾರಿಸಿದಾಗ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್‌ ರಾವ್‌, ಸಿಬಂದಿ ಮಂಜುನಾಥ, ವಲಯ ಮೇಲ್ವಿಚಾರಕ ಉದಯಕುಮಾರ ಶೆಟ್ಟಿ ಅವರು ಸಂಘದಲ್ಲಿ ನಡೆದ ವಂಚನೆಯನ್ನು ಒಪ್ಪಿಕೊಳ್ಳುವಂತೆ ಒತ್ತಡ ಹೇರುತ್ತಿದ್ದರು. “ಬ್ಯಾಂಕಿನ ಹಣವನ್ನು ವಂಚನೆ ಮಾಡಿದ್ದಿ. ಅದನ್ನು ಮರಳಿ ಕೊಡು. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೋ’ ಎಂದು ಪ್ರೇರಣೆ ನೀಡುತ್ತಿದ್ದರು. ಮಾ. 20ರಂದು ಪೂರ್ವಾಹ್ನ 11.30ರ ಸಮಯದಲ್ಲಿ ಆಶಾ ಮನೆಗೆ ಬಂದಿದ್ದರು. ಅವರ ತಾಯಿ ಕೂಡ ಮನೆಯಲ್ಲಿ ಇದ್ದರು. 11.50ರ ಸಮಯದಲ್ಲಿ ಮಹೇಶ್‌ ರಾವ್‌, ಮಂಜುನಾಥ, ಉದಯಕುಮಾರ ಶೆಟ್ಟಿ ಕಾರಿನಲ್ಲಿ ಮನೆಗೆ ಬಂದು ಆವಾಚ್ಯ ಶಬ್ದಗಳಿಂದ ಬೈದು ಮನೆಯ ಒಳಗೆ ಆಕ್ರಮವಾಗಿ ಪ್ರವೇಶ ಮಾಡಿ, ಆತ್ಮಹತ್ಯೆಗೆ ಪ್ರರàಪಿಸಿದ್ದಾರೆ. ಆಗ ಆಶಾ ಮಹಡಿಯ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡು ನೇಣು ಬಿಗಿದುಕೊಂಡಿದ್ದಾರೆ ಎಂದು ಪತಿ ದೂರಿನಲ್ಲಿ ತಿಳಿಸಿದ್ದಾರೆ.

ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಶಾ 28 ವರ್ಷಗಳ ಕಾಲ ಸೊಸೈಟಿಯಲ್ಲಿ ವಿವಿಧ ಹುದ್ಧೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಭಾರ ವ್ಯವಸ್ಥಾಪಕಿಯಾಗಿದ್ದರು. ಎಂದಿನಂತೆ ಮಾ. 20ರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಸಂಘದಲ್ಲಿ ಆಡಿಟ್‌ ನಡೆಯುತ್ತಿತ್ತು. ಮಧ್ಯಾಹ್ನದ ಸಮಯದಲ್ಲಿ ಕಚೇರಿಯಿಂದ ಯಾರಿಗೂ ತಿಳಿಸದೇ ನೇರವಾಗಿ ಮನೆಗೆ ಹೋಗಿದ್ದರು.

ಸಂಘದ ಇಬ್ಬರು ಆತ್ಮಹತ್ಯೆ

ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರದ ಆರೋಪಗಳು ಕೇಳಿಬರುತ್ತಿವೆ. ಇದರ ಬಗ್ಗೆ ಇಲಾಖೆಗಳ ತನಿಖೆ ಹಾಗೂ ಸರಕಾರಿ ಸಂಸ್ಥೆಗಳ ಆಡಿಟ್‌ನಿಂದ ವಿಚಾರಗಳು ಹೊರಬರುತ್ತವೆ. ಈಗಲೂ ಆಡಿಟ್‌ ಹಾಗೂ ತನಿಖೆಗಳು ನಡೆಯುತ್ತಿವೆ. ಹೀಗಿರುವಾಗ ಕಳೆದ 2 ವರ್ಷದ ಹಿಂದೆ ಶಾಖಾ ವ್ಯವಸ್ಥಾಪಕರಾಗಿದ್ದ ಸಂಪತ್‌ ಕಾಮತ್‌ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗ ಆಶಾ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆಗಳು ನಡೆಯಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.