ಕಾರವಾರ ಬಂದರು ವಿಸ್ತರಣೆ ಶುರು

Team Udayavani, Dec 23, 2018, 3:15 PM IST

23-december-17.gif

ಕಾರವಾರ: ಸರ್ವಋತು ಬಂದರು ಎಂದೇ ಹೆಸರಾದ ಕಾರವಾರ ವಾಣಿಜ್ಯ ಬಂದರಿನ ಎರಡನೇ ಹಂತದ ನಿರ್ಮಾಣಕ್ಕೆ ಪ್ರಕ್ರಿಯೆ ಪ್ರಾರಂಭವಾಗಿವೆ. ಅವಶ್ಯವಾದ ಅಲೆ ತಡೆಗೋಡೆ (ಬ್ರೇಕ್‌ ವಾಟರ್‌) ನಿರ್ಮಾಣಕ್ಕೆ ಈಗಾಗಲೇ ರಾಜ್ಯ ಪರಿಸರ ಹಾನಿ ಅಂದಾಜೀಕರಣ ತಜ್ಞರ ಸಮಿತಿ ಪ್ರಾಥಮಿಕ ಹಂತದ ಒಪ್ಪಿಗೆ ನೀಡಿದೆ.

ಇಲ್ಲಿನ ವಾಣಿಜ್ಯ ಬಂದರಿನಲ್ಲಿ ಸರಕು ಸಾಗಾಣಿಕೆ ಹಡಗುಗಳ ಸಂಚಾರ ಹೆಚ್ಚುತ್ತಿದ್ದು ಆಮದು ಮತ್ತು ರಫ್ತು ಹೆಚ್ಚಿಸಲು ಸಾಕಷ್ಟು ಅವಕಾಶವಿದೆ. ಮುಂಬಯಿ, ಗೋವಾ ಮತ್ತು ನವಮಂಗಳೂರು ವಾಣಿಜ್ಯ ಬಂದರುಗಳ ವಹಿವಾಟು ವೇಗ ಹಾಗೂ ಇಲ್ಲಿನ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಾಗಿ ಕಾರವಾರ ಬಂದರು 5 ದಶಕಗಳಿಂದ ನನೆಗುದಿಗೆ ಬಿದ್ದಿದೆ. ಈಗ ಸರ್ಕಾರವೇ ಬಂದರು ವಿಸ್ತರಣೆಗೆ ಮುಂದಾಗಿದೆ. ಸಂಬಂಧಿ ಸಿದ ಅಧ್ಯಯನಗಳು ಮುಗಿದಿವೆ. ಬಜೆಟ್‌ನಲ್ಲಿ ಅನುದಾನವೂ ಸಿಕ್ಕಿದೆ. ಅನುಷ್ಠಾನ ಮಾತ್ರ ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಂದರು ವಿಸ್ತರಣೆಗೆ ಒಳನಾಡು ಜಲಸಾರಿಗೆ ಮತ್ತು ಬಂದರು ಇಲಾಖೆಯು 1170 ಕೋಟಿ ರೂ. ಯೋಜನೆಯ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿತ್ತು.

ಆ ನಂತರ 2018ರ ಪ್ರಾರಂಭದಲ್ಲೇ ಫೆ.9 ರಂದು ಕಾರವಾರ ಬಂದರಿನಲ್ಲಿ ಸಾರ್ವಜನಿಕ ಅಹವಾಲು ಸಭೆ ಸಹ ನಡೆದುಹೋಗಿದೆ. ಆಗ ಕೆಲವರು ಬಂದರು ವಿಸ್ತರಣೆ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರು. ಕೆಲವರು ಪರಿಸರದ ಕಾರಣ ನೀಡಿದರೆ, ಕೆಲವರು ಉದ್ಯೋಗದ ಬೇಡಿಕೆ ಇಟ್ಟಿದ್ದರು. ಬೈತಖೋಲ ನಿವಾಸಿಗಳು ಈಗಿನ ಮಾರುಕಟ್ಟೆ ದರಕ್ಕೆ ಅನ್ವಯಿಸಿ ಹೊಸದಾಗಿ ಪರಿಹಾರ ನೀಡಬೇಕೆಂಬ ಬೇಡಿಕೆ ಸಹ ಸಲ್ಲಿಸಿದ್ದರು. ಆ ಬಳಿಕ ನಾಗಣ್ಣ ಅವರ ಅಧ್ಯಕ್ಷತೆಯ 13 ಸದಸ್ಯರ ಸಮಿತಿ ಡಿ.3 ರಂದು ಬೆಂಗಳೂರಿನಲ್ಲಿ ಸಭೆ ನಡೆಸಿದೆ. ಪರಿಸರ ಹಾನಿ ವರದಿ ಹಾಗೂ ಸಾರ್ವಜನಿಕ ಅಹವಾಲು ಸಭೆಯ ಅಂಶಗಳನ್ನು ಚರ್ಚಿಸಲಾಗಿದೆ.

ಬಂದರು ವಿಸ್ತರಣೆಯಿಂದ ಪರಿಸರದ ಮೇಲಾಗುವ ಪರಿಣಾಮದ ಬಗ್ಗೆ ಚೆನ್ನೈನ ಖಾಸಗಿ ಕಂಪನಿ ವರದಿ ಸಿದ್ಧಪಡಿಸಿದೆ. ಈ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಯೋಜನೆಗೆ ಪ್ರಾಥಮಿಕ ಒಪ್ಪಿಗೆ ಸೂಚಿಸಲಾಗಿದೆ. ಆದರೆ, ಕೆಲವು ಸ್ಪಷ್ಟನೆಗಳನ್ನು ಸಮಿತಿ ಕೇಳಿದ್ದು, ಮಾಹಿತಿ ಪೂರೈಸುವಂತೆ ಬಂದರು ಇಲಾಖೆಗೆ ಕೇಳಲಾಗಿದೆ. ನಂತರ ಪರಿಸರ ಹಾನಿ ಅಂದಾಜೀಕರಣ ಪ್ರಾಧಿಕಾರಕ್ಕೆ ಕಡತಗಳು ರವಾನೆಯಾಗಲಿವೆ ಎಂದು ಬಂದರು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬಂದರು ವಿಸ್ತರಣೆ ನೀಲನಕ್ಷೆ: ಬೈತಖೋಲ್‌ ಬಂದರಿನ ವಿಸ್ತರಣೆಯಿಂದ ಏಕಕಾಲದಲ್ಲಿ ಐದು ಹಡಗುಗಳು ನಿಲ್ಲಲು ವ್ಯವಸ್ಥೆ ಮಾಡುವುದು, ಹೊಸದಾಗಿ ಗೋದಾಮುಗಳನ್ನು ನಿರ್ಮಿಸುವುದು ಹಾಗೂ 1,160 ಮೀಟರ್‌ ಉದ್ದದ ಹೊಸ ಅಲೆ ತಡೆಗೋಡೆ ನಿರ್ಮಾಣ ಕಾಮಗಾರಿಗಳು ಯೋಜನೆಯಲ್ಲಿ ಸೇರಿವೆ. 125 ಕೋಟಿ ರೂ. ವೆಚ್ಚದ 880 ಮೀಟರ್‌ ಜಟ್ಟಿ ವಿಸ್ತರಣೆಗೆ ಟೆಂಡರ್‌ ಮುಗಿದಿದೆ. ಮುಂಬೈನ ಡಿಟಿಇ ಕಂಪನಿ ಟೆಂಡರ್‌ ಪಡೆದುಕೊಂಡಿದೆ.

ವಾಕ್‌ಪಾಥ್‌: ಯೋಜನೆ ಪ್ರಕಾರ ಅಲೆ ತಡೆಗೋಡೆ ಇಲ್ಲಿನ ಟ್ಯಾಗೋರ್‌ ಬೀಚ್‌ನ ನಗರಸಭೆ ಉದ್ಯಾನದ ತುದಿಯಿಂದ ಪ್ರಾರಂಭವಾಗಲಿದೆ. ಉದ್ಯಾನದ ಪಕ್ಕದಿಂದ ಪೂರ್ವ ಭಾಗಕ್ಕೆ ಅಲೆ ತಡೆಗೋಡೆ ನಿರ್ಮಾಣವಾಗಲಿದೆ. ಅಲೆತಡೆಗೋಡೆ ಮೇಲೆ ವಾಕ್‌ ಮಾಡುವಂತೆ ಯೋಜನೆ ರೂಪಿಸಲಾಗಿದ್ದು, ಸಮುದ್ರದಲ್ಲಿ ವಾಕ್‌ ಪಾತ್‌ ಅಲೆ ತಡೆಯಗೋಡೆಯಲ್ಲೇ ಒಳಗೊಂಡಿದೆ. ಇದು ಪ್ರವಾಸಿಗರ ಮತ್ತೊಂದು ಆಕರ್ಷಣೆಯಾಗಲಿದೆ.

ಯೋಜನೆಗೆ ರಾಜ್ಯಮಟ್ಟದ ಪರಿಸರ ಹಾನಿ ಅಂದಾಜೀಕರಣ ಪ್ರಾಧಿಕಾರ ಹಾಗೂ ಕರಾವಳಿ ನಿಯಂತ್ರಣ ವಲಯದ ಜಿಲ್ಲಾ ಮಟ್ಟದ ಸಮಿತಿಯ ಅಂತಿಮ ಅನುಮೋದನೆ ಸಿಗಬೇಕಿದೆ. ನಂತರ ವಿಸ್ತರಣೆ ಪ್ರಕ್ರಿಯೆಗಳು ಆರಂಭವಾಗಲಿವೆ.
ಕ್ಯಾಪ್ಟನ್‌ ಸಿ.ಸ್ವಾಮಿ, ನಿರ್ದೇಶಕರು.
ಕಾರವಾರ ವಾಣಿಜ್ಯ ಬಂದರು.

„ನಾಗರಾಜ ಹರಪನಹಳ್ಳಿ 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.