ವಿದ್ಯಾರ್ಥಿಗಳ ಬಸ್ ಸಮಸ್ಯೆ ಶೀಘ್ರ ಪರಿಹಾರಕ್ಕೆ ಭರವಸೆ

Team Udayavani, Sep 21, 2019, 11:17 AM IST

uk-tdy-1

ಸಿದ್ದಾಪುರ: ಪಟ್ಟಣದ ತಾಪಂ ಸಭಾಭವನದಲ್ಲಿ ತಾಪಂ ಅಧ್ಯಕ್ಷ ಸುಧೀರ್‌ ಗೌಡರ್‌ ಅಧ್ಯಕ್ಷತೆಯಲ್ಲಿ ಸಾರಿಗೆ ಅದಾಲತ್‌ ನಡೆಯಿತು.

ವಾಯವ್ಯ ಕರ್ನಾಟಕ ಸಾರಿಗೆ ಇಲಾಖೆ ಶಿರಸಿ ವಿಭಾಗದ ಡಿಟಿಒ ಸುರೇಶ ನಾಯ್ಕ ಮಾತನಾಡಿ ಹೊಸ ಬಸ್‌ ಮಾರ್ಗಗಳನ್ನು ಹೊರತುಪಡಿಸಿ ಉಳಿದ ಬಸ್‌ ಮಾರ್ಗಗಳ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಬಸ್‌ ವ್ಯವಸ್ಥೆಯನ್ನು ಮುಂದಿನ ಹತ್ತುದಿನಗಳಲ್ಲಿ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ತಾಪಂ ಅಧ್ಯಕ್ಷ ಸುದೀರ್‌ ಗೌಡರ್‌ ಮಾತನಾಡಿ, ಈ ಸಾರಿಗೆ ಅದಾಲತ್‌ ಸಭೆಗೆ ಕೆಎಸ್‌ಆರ್‌ಟಿಸಿ ಡಿಸಿಯವರೇ ಬರಬೇಕೆಂದು ಆಗ್ರಹಿಸಿದ್ದೆವು. ಆದರೆ ಅವರ ಬದಲಾಗಿ ಬಂದಿರುವ ಅಧಿಕಾರಿಗಳು ಎಷ್ಟರ ಮಟ್ಟಿಗೆ ಸಮಸ್ಯೆ ಪರಿಹರಿಸುತ್ತಾರೆ ನೋಡೊಣ. ತಾಲೂಕಿನ ಸಾರ್ವಜನಿಕರು, ಕಾಲೇಜು ವಿದ್ಯಾರ್ಥಿಗಳು ತಮಗೆ ಆಗಿರುವ ತೊಂದರೆಗಳ ಬಗ್ಗೆ ಹಾಗೂ ಆಗಬೇಕಾಗಿರುವ ವ್ಯವಸ್ಥೆ ಕುರಿತು ತಿಳಿಸಬೇಕು ಎಂದರು. ನಂತರ ವಿವಿಧ ಕಾಲೇಜು ವಿದ್ಯಾರ್ಥಿಗಳು ಬಸ್‌ ಸಮಸ್ಯೆಗಳಿಂದ ಆಗುವ ತೊಂದರೆಗಳ ಕುರಿತಾಗಿ ಅಳಲನ್ನು ತೋಡಿಕೊಂಡರು.

ಬೇಡ್ಕಣಿಯ ತ್ಯಾರ್ಸಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂತೋಷ ನಮ್ಮ ಕಾಲೇಜು ಪಟ್ಟಣದಿಂದ ಬಹಳ ದೂರ ಇದೆ. ಸಮಯಕ್ಕೆ ಸರಿಯಾಗಿ ಬಸ್‌ ವ್ಯವಸ್ಥೆ ಇಲ್ಲ. ಕುಳಿತುಕೊಳ್ಳುವುದಕ್ಕೂ ಬಸ್‌ ನಿಲ್ದಾಣ ಇಲ್ಲ. ಸಾವಿರಾರು ವಿದ್ಯಾರ್ಥಿಗಳಿದ್ದಾರೆ. ತುಂಬಾ ತೊಂದರೆ ಆಗುತ್ತಿದೆ. ಈ ಕುರಿತು ಎಷ್ಟೋ ಮನವಿ ನೀಡಿ, ಪ್ರತಿಭಟನೆ ಮಾಡಿದ್ದೇವೆ. ಆದರೂ ಏನೂ ಪ್ರಯೋಜನ ಆಗಿಲ್ಲ. ನಮಗೆ ಸಮಪರ್ಕ ಬಸ್‌ ವ್ಯವಸ್ಥೆ ಮಾಡದಿದ್ದರೆ ನಾವು ಕಾಲೇಜನ್ನು ಬಹಿಷ್ಕಾರ ಮಾಡುತ್ತೇವೆ ಎಂದರು.

ಇದಕ್ಕೆ ಸಾರಿಗೆ ಅಧಿಕಾರಿ ಕಾಲೇಜು ಸಮಯಕ್ಕೆ ಬಸ್‌ ಬಿಡಲಾಗುವುದು. ಮಿನಿ ಬಸ್‌ ಬದಲಾಯಿಸಿ ದೊಡ್ಡ ಬಸ್ಸನ್ನು ಕಾಲೇಜು ವಿದ್ಯಾರ್ಥಿಗಳ ಸಮಯ ಕ್ಕೆ ಬದಲಾಯಿಸಿ ಕೊಡುವುದಾಗಿ ಹೇಳಿದರು. ಹರೀಶ ದೇವಾಡಿಗ ಮಾತನಾಡಿ ಶಿರಸಿ-ಸಿದ್ದಾಪುರ ಹಾಲ್ಕಣಿ ಮಾರ್ಗವಾಗಿ ಓಡಿಸುವ ಬಸ್‌ ಸರಿಯಾಗಿ ಬರುತ್ತಿಲ.ಇದರಿಂದ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ ಎಂದು ಗಮನ ಸೆಳೆದರು. ಹಲಗೇರಿ ಕಾಲೇಜಿನ ಹೇಮಂತ ಮಾತನಾಡಿ, ಕೆಲವು ಬಸ್‌ಗಳನ್ನು ಹಲಗೇರಿಯಲ್ಲಿ ನಿಲ್ಲಿಸುವುದಿಲ್ಲ. ಇನ್ನು ಕೆಲವು ಬಸ್‌ ಬರುವುದಿಲ್ಲ. ಇದರಿಂದ ಕಾಲೇಜು ವಿದ್ಯಾರ್ಥಿಗಳು ಮನೆಗೆ ಹೋಗುವುದಕ್ಕೆ ರಾತ್ರಿಯಾಗುತ್ತದೆ. ಇದನ್ನು ನಿಯಮಿತವಾಗಿ ಓಡಿಸುವ ವ್ಯವಸ್ಥೆ ಮಾಡುವಂತೆ ಕೇಳಿಕೊಂಡರು.

ಕೋಲಶಿರ್ಸಿ ಗ್ರಾಪಂ ಉಪಾಧ್ಯಕ್ಷ ಕೆ.ಆರ್‌. ವಿನಾಯಕ, ಹಲಗೇರಿ ಗ್ರಾಪಂ ಸದಸ್ಯ ಶ್ರೀಧರ ನಾಯ್ಕ, ವಾಜಗೋಡ ಗ್ರಾಪಂ ಅಧ್ಯಕ್ಷ ಕೃಷ್ಣಮೂರ್ತಿ ಸಮಸ್ಯೆಗಳ ಕುರಿತು ವಿವರಿಸಿದರು. ಜಿಪಂ ಸದಸ್ಯ ಎಂ.ಜಿ. ಹೆಗಡೆ ಗೆಜ್ಜೆ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ಮಾತನಾಡಿದರು. ಸದಸ್ಯರಾದ ವಿವೇಕ ಭಟ್‌, ರಘಪತಿ ಹೆಗಡೆ, ಶಿರಸಿ ಡಿಪೊ ವ್ಯವಸ್ಥಾಪಕ ರವೀಂದ್ರ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.