9ರಂದು ಶಿಕ್ಷಕರ ಜಿಲ್ಲಾಮಟ್ಟದ ಪ್ರತಿಭಟನೆ

Team Udayavani, Jul 6, 2019, 12:42 PM IST

ಶಿರಸಿ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಮಾಹಿತಿ ನೀಡಲಾಯಿತು.

ಶಿರಸಿ: ಶಿಕ್ಷಕರ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಿರಸಿಯಲ್ಲೂ ನಾಲ್ಕು ಸಾವಿರದಷ್ಟು ಶಿಕ್ಷಕರು ಜು.9 ರಂದು ಬೀದಿಗೆ ಇಳಿದು ಪ್ರತಿಭಟನೆ ನಡೆಸಲಿದ್ದಾರೆ.

ಈ ಕುರಿತು ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಸರಕಾರಿ ನೌಕರರ ಭವನದಲ್ಲಿ ಸುದ್ದಿಗೋಷ್ಠಿ ನಡಸಿ, ಈಗಾಗಲೇ ಸರಕಾರಕ್ಕೆ ಸಾಕಷ್ಟು ಸಲ ನಮ್ಮ ಬೇಡಿಕೆ ಇಟ್ಟರೂ ಪ್ರಯೋಜನ ಆಗಿಲ್ಲ. ಈ ಕಾರಣದಿಂದ ಜು.9 ರಂದು ರಜೆ ಹಾಕಿ ಶಿರಸಿ ಶೈಕ್ಷಣಿಕ ಜಿಲ್ಲಾ ಉಪ ನಿರ್ದೇಶಕರ ಕಚೇರಿ ಎದುರು ಬೆಳಗ್ಗೆ 9ರಿಂದ ಪ್ರತಿಭಟನೆ ನಡೆಸಲಿದ್ದು, ಬಳಿಕ ಮೆರವಣಿಗೆ ಮೂಲಕ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ಸರಕಾರಕ್ಕೆ ಎಚ್ಚರಿಕೆ ಹಕ್ಕೊತ್ತಾಯ ಮಾಡಲಿದ್ದೇವೆ. ಒಮ್ಮೆ ಇದಕ್ಕೂ ಸ್ಪಂದನೆ ಸಿಗದೇ ಇದ್ದರೆ ಸೆ.5ರ ಶಿಕ್ಷಕರ ದಿನಾಚರಣೆ ಬಹಿಷ್ಕರಿಸಿ ಬೆಂಗಳೂರು ಚಲೋ ಮಾಡಲಿದ್ದೇವೆ ಎಂದೂ ಹೇಳಿದರು.

ಸತೀಶ ಹೆಗಡೆ, ಸುರೇಶ ಪಟಗಾರ, ಮಾರುತಿ ನಾಯ್ಕ, ಅಶೋಕ ಭಜಂತ್ರಿ, ಎ.ಬಿ. ಹಂಚಿನ, ಬಾಲಚಂದ್ರ ಪಟಗಾರ, ಉದಯ ಭಟ್ಟ, ಸುಮನಾ ಹೆಗಡೆ, ಭಾಗೀರಥಿ ನಾಯಕ, ಗಣೇಶ ನಾಯ್ಕ, ಇಂದಿರಾ ನಾಯ್ಕ ಇತರರು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಶಿರಸಿ: ಶಿವಮೊಗ್ಗ ಜಿಲ್ಲೆ ಶರಾವತಿ ಅಭಯಾರಣ್ಯಕ್ಕೆ ತಾಲೂಕಿನ ಹೆಬ್ರೆ, ಹುಸೂರು, ಬುಗುಡಿ ಗ್ರಾಮಗಳ ಅರಣ್ಯವಾಸಿಗಳ ಪ್ರದೇಶವನ್ನು ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ...

  • ಹಳಿಯಾಳ: ಅಪ್ರತೀಮ ವೀರ ಛತ್ರಪತಿ ಶಿವಾಜಿ ಮಹಾರಾಜರು ದೇಶದ ಭವಿಷ್ಯಕ್ಕಾಗಿ ಹೋರಾಡಿದ ಅಗ್ರಗಣ್ಯ ನಾಯಕರಾಗಿದ್ದು ಸರ್ವರನ್ನು ಒಂದೂಗೂಡಿಸಿಕೊಂಡು ಹೋಗುತ್ತಿದ್ದ...

  • ಕಾರವಾರ: ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಜನಸಂಖ್ಯೆ ಆಧರಿಸಿ ಶೇ.15 ರಿಂದ ಶೇ. 22.5ಗೆ ಹೆಚ್ಚಿಸಬೇಕು ಹಾಗೂ ಪರಿಶಿಷ್ಟ ವರ್ಗದ ಮೀಸಲಾತಿಯನ್ನು ಶೇ.3ರಿಂದ ಶೇ.7.5 ಕ್ಕೆ...

  • ಸಾಗರ: ಇಲ್ಲಿನ ಇತಿಹಾಸ ಪ್ರಸಿದ್ಧ ಹಾಗೂ ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಜಾತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನಗರದ ಮಾರಿಕಾಂಬಾ ದೇವಿಯ ಜಾತ್ರೆಯು...

  • ಕುಮಟಾ: ಕಳೆದ ಎರಡು ದಿನಗಳಿಂದ ತಾಲೂಕಿನ ಹೊಳೆಗದ್ದೆ ಟೋಲ್‌ ಗೇಟ್‌ನಲ್ಲಿ ಸ್ಥಳೀಯ ವಾಹನಗಳಿಗೂ ಐಆರ್‌ಬಿ ಕಂಪೆನಿ ಶುಲ್ಕ ವಸೂಲಿ ಮಾಡುತ್ತಿರುವುದನ್ನು ವಿರೋಧಿಸಿ...

ಹೊಸ ಸೇರ್ಪಡೆ