ಕುಸಿದ ಶಾಲಾ ಕಟ್ಟಡ ಮೇಲ್ಛಾವಣಿ


Team Udayavani, Aug 26, 2019, 11:57 AM IST

uk-tdy-1

ಕಾರವಾರ: ಬಾಡ ತೇಲಂಗ್‌ ರಸ್ತೆಯಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಮೇಲ್ಛಾವಣಿ ಕುಸಿದಿದೆ.

ಕಾರವಾರ: ಇಲ್ಲಿನ ಬಾಡ ತೇಲಂಗ್‌ ರಸ್ತೆಯಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಮೇಲ್ಛಾವಣಿ ರವಿವಾರ ಕುಸಿದು ಬಿದ್ದಿದ್ದು, ಭಾರಿ ದುರಂತ ತಪ್ಪಿದಂತಾಗಿದೆ.

ಶಾಲೆಗೆ ರಜೆ ಇದ್ದ ಕಾರಣ ವಿದ್ಯಾರ್ಥಿಗಳು ಶಾಲೆಗೆ ಬಂದಿರಲಿಲ್ಲ. ಈ ಕೊಠಡಿಯಲ್ಲಿ ಮಳೆಗಾಲದ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಹಾಗೂ ಯೋಗಾಭ್ಯಾಸ ಹೇಳಿಕೊಡಲಾಗುತ್ತಿತ್ತು. ಜೊತೆಗೆ ಕ್ರೀಡಾ ಸಾಮಗ್ರಿ ಸಹ ದಾಸ್ತಾನು ಮಾಡಲು ಬಳಕೆ ಮಾಡಿಕೊಳ್ಳಲಾಗುತ್ತಿತ್ತು ಎನ್ನಲಾಗಿದೆ.

ಕೊಠಡಿ ಒಂದು ಭಾಗ ಸಂಪೂರ್ಣ ಕುಸಿದು ಬಿದ್ದಿದೆ. ಮೇಲ್ಛಾವಣಿ ಹೆಂಚು ಹಾಗೂ ಕಟ್ಟಿಗೆ ಸಾಮಗ್ರಿಗಳೆಲ್ಲ ಕ್ರೀಡಾ ವಸ್ತುಗಳ ಮೇಲೆ ಬಿದ್ದು ಹಾನಿಯಾಗಿದೆ. ಇದಲ್ಲದೇ ಅಕ್ಕ-ಪಕ್ಕದ ಕೊಠಡಿಯೂ ಕುಸಿಯುವ ಹಂತದಲ್ಲಿದೆ. ಇದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಪಾಲಕರು ಆತಂಕಕ್ಕೊಳಗಾಗುವಂತಾಗಿದೆ.

ಅತ್ಯಂತ ಹಳೆಯ ಕಟ್ಟಡ ಇದಾಗಿತ್ತು. ಶಾಲೆ ಕಟ್ಟಡದ ಗುಣಮಟ್ಟ ಸರಿಯಾಗಿಲ್ಲವಾಗಿತ್ತು. ಹೀಗಾಗಿ ಶಾಲೆಯ ಕಟ್ಟಡ ಸರಿ ಇಲ್ಲದಿರುವುದನ್ನು ಗಮನಿಸಿ ಪಾಲಕರು ಈ ಶಾಲೆಗೆ ಮಕ್ಕಳನ್ನು ಕಳುಹಿಸಲು ಹಿಂದೇಟು ಹಾಕುತ್ತಿದ್ದರು. ದಶಕಗಳ ಹಿಂದೆ 300ಕ್ಕೂ ಅಧಿಕ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದರು. ಸದ್ಯ ಅತೀ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆ ಮೇಲ್ಛಾವಣಿ ದುರಸ್ತಿ ಮಾಡಿಕೊಡುವಂತೆ ಈ ಹಿಂದೆ ಮೂರು ಬಾರಿ ಶಿಕ್ಷಣ ಇಲಾಖೆಗೆ ಆಡಳಿತ ಮಂಡಳಿ ಮನವಿ ಸಲ್ಲಿಸಿದೆ. ಆದರೂ ಇಲಾಖೆ ನಿರ್ಲಕ್ಷ್ಯ ವಹಿಸಿರುವುದನ್ನು ನಗರದ ನಿವಾಸಿಗಳು ದಾಖಲೆಗಳೊಂದಿಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಶಾಲೆಯ ಎಲ್ಲ 12 ಕೊಠಡಿಗಳ ಮೇಲ್ಛಾವಣಿ ಹಾಳಾದ ಬಗ್ಗೆ ಕಳೆದ ಜ. 25ರಂದು ನಡೆದ ಎಸ್‌ಡಿಎಂಸಿ ಸಭೆಯಲ್ಲಿ ಚರ್ಚಿಸಿ ದುರಸ್ತಿ ಮಾಡಲು ನಿರ್ಣಯಿಸಲಾಗಿತ್ತು. ಮಳೆ-ಗಾಳಿ ಅವಧಿಯಲ್ಲಿ ಯಾವುದೇ ಸಮಯದಲ್ಲೂ ಶಾಲೆ ಕೊಠಡಿ ಕುಸಿಯಬಹುದು. ಎಲ್ಲ ಕೊಠಡಿಗಳನ್ನು ನೆಲಸಮ ಮಾಡಿ ಹೊಸದಾಗಿ ನಾಲ್ಕು ಕೊಠಡಿ ನಿರ್ಮಿಸಲು ಅನುದಾನ ಬಿಡುಗಡೆ ಮಾಡಲು ಶಿಕ್ಷಣ ಇಲಾಖೆಗೆ ಒತ್ತಾಯಿಸಲಾಗಿತ್ತು. ಹಲವಾರು ಬಾರಿ ಎಸ್‌ಡಿಎಂಸಿ ವತಿಯಿಂದ ಸಂಬಂಧಪಟ್ಟವರಿಗೆ ಲಿಖೀತವಾಗಿಯೇ ಗಮನಕ್ಕೆ ತರಲಾಗಿತ್ತಾದರೂ ಯಾವುದೇ ಅನುದಾನ ಬಿಡುಗಡೆಯಾಗಿರಲಿಲ್ಲ.

ಜಿಲ್ಲಾಧಿಕಾರಿ ಎಚ್ಚರಿಕೆ: ಪ್ರವಾಹ ಪೀಡಿತ ಪ್ರದೇಶಗಳ ಶಾಲಾ ಕಟ್ಟಡಗಳು ಬಳಕೆಗೆ ಯೋಗ್ಯವಾಗಿರುವ ಬಗ್ಗೆ ಎಂಜಿನಿಯರ್‌ ಅವರ ದೃಢೀಕರಣ ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ| ಹರೀಶ್‌ ಕುಮಾರ್‌ ಕೆ. ಆದೇಶಿಸಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಟ್ಟಡಗಳು ಅಪಾಯ ತಂದೊಡ್ಡುವ ಸಾಧ್ಯತೆ ಇರುವುದರಿಂದ ಈ ಆದೇಶ ನೀಡಲಾಗಿದ್ದು, ಸಂಬಂಧಿಸಿದ ಎಂಜಿನಿಯರ್‌ ಪ್ರಮಾಣ ಪತ್ರ ಕಡ್ಡಾಯ ಪಡೆಯಬೇಕು. ಇಲ್ಲವಾದರೆ ಅದರಿಂದಾಗಬಹುದಾದ ಅನಾಹುತಕ್ಕೆ ಸಂಬಂಧಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.