ಪಾಕ್‌ ಹೆಸರಿಲ್ಲದೇ ಬಿಜೆಪಿ ರಾಜಕಾರಣವೇ ಇಲ್ಲ 

Team Udayavani, Jun 15, 2021, 8:11 PM IST

img-20210614-wa0031

ಕಾರವಾರ: ಪಾಕಿಸ್ತಾನದ ಹೆಸರು ತೆಗೆದುಕೊಳ್ಳದೇ ಬಿಜೆಪಿ ಒಂದೇ ಒಂದು ದಿನ ರಾಜಕಾರಣ ಮಾಡುವುದಿಲ್ಲ. ಪ್ರಧಾನಿಯಾಗಿ ಹತ್ತು ವರ್ಷವಿದ್ದ ಮನಮೋಹನ್‌ ಸಿಂಗ್‌ ಪಾಕಿಸ್ತಾನಕ್ಕೆ ಭೇಟಿ ನೀಡಿರಲಿಲ್ಲ. ಅವರು ಭಯೋತ್ಪಾದನೆ ನಿರ್ಮೂಲನೆ ಆಗುವವರೆಗೆ ಪಾಕಿಸ್ತಾನದೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ದಿಟ್ಟ ನಿರ್ಧಾರ ಕೈಗೊಂಡಿದ್ದರು ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಶೇರವಾನಿ ಹಾಕಿ ಬಿರಿಯಾನಿ ತಿನ್ನಲು ಹೋಗಿದ್ದು 56 ಇಂಚಿನ ಎದೆಯ ನರೇಂದ್ರ ಮೋದಿಯವರೇ ಹೊರತು ಬೇರೆ ಯಾರೂ ಅಲ್ಲ. ನಮ್ಮ ದೇಶಕ್ಕೆ ಪಾಕಿಸ್ತಾನದ ಎದುರು ಇದಕ್ಕಿಂತ ಅವಮಾನ ಬೇರೆಯಿಲ್ಲ ಎಂದು ಕಿಡಿಕಾರಿದರು.

ಇನ್ನೂ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್‌ ಬೆಲೆ ಏರಿಕೆ ಮಾಡಿದಾಗ ಅದನ್ನು ವಿರೋಧಿಸಿ ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ, ನಟಿ ಮಾಳವಿಕಾರಂತಹ ಬಿಜೆಪಿ ಮುಖಂಡರುಗಳೇ ರಸ್ತೆಗಿಳಿದು ಪ್ರತಿಭಟಿಸಿದ್ದರು. ಆದರೆ ಈಗ ಅವರ ಬಳಿ ಕೇಳಿದ್ರೆ ಇಲ್ಲಸಲ್ಲದ ಉತ್ತರ ಕೊಡುತ್ತಾರೆ. ಇಂಥ ಬೇಜವಾಬ್ದಾರಿ, ನಾಚಿಕೆಗೆಟ್ಟ ಸರಕಾರ ದೇಶದಿಂದ ತೊಲಗಲಿ ಎಂದರು.

ಇನ್ನು ಹಣ ಕೊಟ್ಟರೆ ಮಾತ್ರ ಕಾಂಗ್ರೆಸ್‌ನಲ್ಲಿ ಟಿಕೆಟ್‌ ನೀಡುತ್ತಾರೆ ಎನ್ನುವ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಣದಿಂದ ಎಂಎಲ್‌ಎಗಳನ್ನೇ ಖರೀದಿ ಮಾಡಬಹುದು ಅಂತಾ ತೋರಿಸಿಕೊಟ್ಟಿದ್ದೇ ಬಿಜೆಪಿಯವರು. ಆಪರೇಷನ್‌ ಕಮಲ ಸಂಸ್ಕೃತಿಯ ಜನಕ ಯಡಿಯೂರಪ್ಪ. ಅಪರೇಶನ್‌ ಕಮಲದ ಜನಕ ಯಡಿಯೂರಪ್ಪ ಅನ್ನೋದ್ರಲ್ಲಿ ಯಾವುದೇ ಅನುಮಾನವಿಲ್ಲ. ನಾನು ಕಾಂಗ್ರೆಸ್‌ ಪಕ್ಷದಲ್ಲಿ ನನ್ನ ಕೆಲಸದಿಂದ ಗುರುತಿಸಿಕೊಂಡು ಇಷ್ಟು ದೂರ ಬೆಳೆದು ಬಂದಿದ್ದೇನೆ. ನಾನು ಯಾರಿಗೂ ಹಣಕೊಟ್ಟಿಲ್ಲ, ಯಾರಿಂದಲೂ ಹಣವನ್ನೂ ಪಡೆದಿಲ್ಲ ಎಂದರು. ಇನ್ನು ಬಿಜೆಪಿ ಆರ್‌ಎಸ್‌ಎಸ್‌ನ ಒಂದು ರಾಜಕೀಯ ಘಟಕವಾಗಿದೆ. ಅಲ್ಲಿನ ಸರಸಂಘ ಚಾಲಕರ ಸೂಚನೆ ಮೇರೆಗೆ ಬಿಜೆಪಿಯಲ್ಲಿ ಎರಡು ವರ್‌ಷಕ್ಕೊಮ್ಮೆ ಅಧ್ಯಕ್ಷರ ಬದಲಾವಣೆಯಾಗುತ್ತದೆ. ಆದರೆ ಕಾಂಗ್ರೆಸ್‌ನಲ್ಲಿ 11 ಸಾವಿರ ಮಂದಿ ಪ್ರದೇಶ ಕಾಂಗ್ರೆಸ್‌ ಸದಸ್ಯರು ಇದ್ದು, ಅವರಿಂದಲೇ ನೇರವಾಗಿ ಅಧ್ಯಕ್ಷರ ಆಯ್ಕೆ ನಡೆಯುತ್ತದೆ. ಅವರ ಆಶಯ ಇರುವವರೆಗೆ ಕಾಂಗ್ರೆಸ್‌ ನಲ್ಲಿ ಈಗಿರುವ ಅಧ್ಯಕ್ಷರೇ ಮುಂದುವರೆಯುತ್ತಾರೆ ಎಂದರು. ಭೀಮಣ್ಣ ನಾಯ್ಕ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.