ದಾಂಡೇಲಿ/ಜೋಯಿಡಾಕ್ಕಿಲ್ಲ ಜಲಕ್ರೀಡೆಗೆ ಅನುಮತಿ, ನೆಲಕಚ್ಚಿದ ಪ್ರವಾಸೋದ್ಯಮ


Team Udayavani, Aug 19, 2021, 2:13 PM IST

ಪ್ರಾತಿನಿಧಿಕ ಚಿತ್ರ

ದಾಂಡೇಲಿ : ಜಗತ್ತನ್ನೆ ತಲ್ಲಣಗೊಳಿಸಿದ ಕೋವಿಡ್ ತನ್ನ ಕದಂಬ ಬಾಹುವಿನ ಮೂಲಕ ಆರ್ಥಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವನ್ನೇ ತಂದೊಡ್ಡಿದೆ. ಉತ್ಪಾದನಾ ವಲಯಗಳು ಅತ್ಯಂತ ದುಸ್ಥಿತಿಯ ಪರಿಸ್ಥಿತಿಯನ್ನು ಅನುಭವಿಸಿದ್ದರೇ. ಇತ್ತ ಆರ್ಥಿಕ ಕ್ಷೇತ್ರಕ್ಕೆ ಸ್ಥಳೀಯ ಸಂಪನ್ಮೂಲಗಳನ್ನು ಉಳಿಸಿ, ಬೆಳೆಸಿ ಬಳಸಿಕೊಳ್ಳುವುದರ ಮೂಲಕ ತನ್ನದೇ ಆದ ಕೊಡುಗೆ ನೀಡುತ್ತಿರುವ ಪ್ರವಾಸೋದ್ಯಮ ಕ್ಷೇತ್ರವು ನಲುಗಿ ಹೋಗಿದೆ.

ಕೋವಿಡ್ ಸೋಂಕಿನ ಒಂದು ಮತ್ತು ಎರಡನೇ ಅಲೆಯ ಆರ್ಭಟಕ್ಕೆ ದಾಂಡೇಲಿ-ಜೋಯಿಡಾದ ಪ್ರವಾಸೋದ್ಯಮ ಚಟುವಟಿಕೆ ಸೈಲೆಂಟಾಗಿ ಯಾತನೆಯನ್ನು ಅನುಭವಿಸಿತ್ತು. ದಾಂಡೇಲಿ-ಜೋಯಿಡಾದಲ್ಲಿ ಪ್ರವಾಸೋದ್ಯಮವನ್ನೇ ನಂಬಿ ಬದುಕು ಕಟ್ಟಿಕೊಂಡವರ ಬದುಕು ಮೂರಾ ಬಟ್ಟೆಯಾಗಿದೆ ಎಂಬಂತಾಗಿದೆ.

ಪ್ರವಾಸೋದ್ಯಮಿಗಳು ಸಾಲ ಸೋಲ ಮಾಡಿ ಪ್ರವಾಸೋದ್ಯಮ ಚಟುವಟಿಕೆಯಲ್ಲಿ ತೊಡಗಿಕೊಂಡು ಸಾಲದ ಕಂತು ಪಾವತಿಸಲಾಗದೇ ತಲೆ ಮೇಲೆ ಕೈಹೊತ್ತು ಕೂತಿದ್ದಾರೆ. ಇನ್ನು, ಪ್ರವಾಸಿ ಏಜೆಂಟರುಗಳು, ಪ್ರವಾಸೋದ್ಯಮ ಚಟುವಟಿಕೆಯಲ್ಲಿ ಕೂಲಿ ಕಾರ್ಮಿಕರಾಗಿ ಜೀವನ ನಡೆಸುವವರಿಗೆ ಒಂದೊಂದು ದಿನವನ್ನು ಮುನ್ನಡೆಸುವುದು ಕಷ್ಟವಾಗಿದೆ.

ಇದನ್ನೂ ಓದಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ : ಬಿಜೆಪಿಗೆ ಸಾಧ್ಯವಾದೀತೆ ಮಿಷನ್‌-60?

ಕೋವಿಡ್ ಎರಡನೇ ಅಲೆ ಕಡಿಮೆಯಾಗುತ್ತಿದ್ದಂತೆಯೆ  ಪ್ರವಾಸೋದ್ಯಮ ಚಟುವಟಿಕೆ ಮತ್ತೇ ಗರಿಗೆದರಲು ಪ್ರಾರಂಭವಾಯಿತು. ಪ್ರವಾಸೋದ್ಯಮಕ್ಕೆ ಮೂಲ ಆಸರೆಯಾದ ರಾಪ್ಟಿಂಗ್, ಜಲಕ್ರೀಡೆಗಳು ಆರಂಭಗೊಂಡವು. ಪರಿಣಾಮವಾಗಿ ಪ್ರವಾಸಿಗರು ಇತ್ತ ಕಡೆ ಮುಖ ಮಾಡಲು ಆರಂಭಿಸಿದ್ದಾರೆ. ಕಳೆಗುಂದಿದ್ದ ಪ್ರವಾಸೋದ್ಯಮ ಮತ್ತೇ ಪುಟಿದೇಳಲು ಆರಂಭವಾಯಿತು.

ಪ್ರವಾಸೋದ್ಯಮ ಚಟುವಟಿಕೆಗೆ ಜೀವಕಳೆ ಬರುತ್ತಿದ್ದಂತೆಯೆ ಮತ್ತೇ ಕೋವಿಡ್ ಮೂರನೆ ಅಲೆಯ ಕಾಟ ಎಂಬಂತೆ ರಾಪ್ಟಿಂಗ್, ಜಲಕ್ರೀಡೆಯನ್ನು ಸ್ಥಗಿತಗೊಳಿಸಲಾಗಿದೆ. ಪರಿಣಾಮವಾಗಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖ ಕಂಡಿದೆ. ಮತ್ತೇ ಪ್ರವಾಸೋದ್ಯಮ ಚಟುವಟಿಕೆ ಹಿನ್ನಡೆಯನ್ನು ಕಂಡುಕೊಳ್ಳಲು ಆರಂಭವಾಗಿದೆ. ಈ ಭಾಗದಲ್ಲಿ ರಾಪ್ಟಿಂಗ್, ಜಲಕ್ರೀಡೆಯೆ ಪ್ರವಾಸೋದ್ಯಮಕ್ಕೆ ಮೂಲ ಆಧಾರ. ಅದಕ್ಕಾಗಿಯೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಅದೇ ಇಲ್ಲ ಅಂದ ಮೇಲೆ ಪ್ರವಾಸಿಗರು ಬರುವುದಾದರೂ ಹೇಗೆ ಎಂಬ ಚಿಂತೆ ಪ್ರವಾಸೋದ್ಯಮ ಚಟುವಟಿಕೆಯಲ್ಲಿ ತೊಡಗಿಕೊಂಡವರದ್ದಾಗಿದೆ.

ಅಂದ ಹಾಗೆ ಬೆಂಗಳೂರಿನ ವಂಡರ್ಲಾದಲ್ಲಿ ಜಲಕ್ರೀಡೆಗೆ ಅನುಮತಿಯನ್ನು ನೀಡಲಾಗಿದೆ. ಇನ್ನೂ ಮುಂದುವರಿದು ಹೇಳುವುದಾದರೇ ಶಾಲೆಗಳ ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಈವರೇಗೆ ಈ ಭಾಗದಲ್ಲಿ ಪ್ರವಾಸೋದ್ಯಮದಿಂದ ಒಂದೆ ಒಂದು ಕೋವಿಡ್ ಸೊಂಕು ದೃಢವಾಗದಿದ್ದರೂ ಕೋವಿಡ್ ನೆಪ ಹೇಳಿ ರಾರ್ಪ್ಟಿಂಗ್, ಜಲಕ್ರೀಡೆಯನ್ನು ಪುನಾರಂಭಿಸಲು ಈವರೆಗೆ ಅವಕಾಶ ನೀಡಿಲ್ಲ.

ಕೋವಿಡ್ ಮೊದಲನೆ ಅಲೆ ಮತ್ತು ಎರಡನೆ ಅಲೆ ಮಧ್ಯೆದಲ್ಲಿ ಸುಮಾರು ಮೂರರಿಂದ ನಾಲ್ಕು ತಿಂಗಳು ದೇಶದಾದ್ಯಂತ ವಾಣಿಜ್ಯ ಚಟುವಟಿಕೆಗಳು ಗರಿಗೆದರಿತ್ತು. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿಯವರೇ, ಇತ್ತೀಚೆಗೆ ನೀಡಿದ ಹೇಳಿಕೆಯ ಪ್ರಕಾರ ನಮ್ಮ ರಾಜ್ಯವು ಎರಡನೇ ಕೋವಿಡ್ ಅಲೆಯ ಅಂತಿಮ ಘಟ್ಟದಲ್ಲಿದೆ ಎಂದು ಈಗಾಗಲೇ ಹೇಳಿದ್ದಾರೆ. ಮೂರನೇ ಅಲೆಯ ಬಗ್ಗೆ ಇನ್ನೂ ಅನಿಶ್ಚಿತತೆ ಇದ್ದರೂ ಪ್ರವಾಸೋದ್ಯಮ ಚಟುವಟಿಕೆಗೆ ಮಾತ್ರವೇ ನಿರ್ಬಂಧ ಹೇರಿರುವುದು ಎಷ್ಟು ಸರಿ?. ಈಗಿರುವ ಕೊರೊನಾ ಪ್ರಕರಣಗಳ ಇಳಿಕೆಯಿದ್ದರೂ ರಾಪ್ಟಿಂಗ್, ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅವಕಾಶ ನೀಡದಿರುವುದರಿಂದ ಪ್ರವಾಸೋದ್ಯಮವನ್ನೆ ನಂಬಿರುವ ದಾಂಡೇಲಿ-ಜೊಯಿಡಾ ಸುತ್ತಮುತ್ತಲಿನ ಸಾವಿರಾರು ಕುಟುಂಬಗಳಿಗೆ ಮತ್ತೇ ಸಂಕಷ್ಟ ಎದುರಾಗಿದೆ.

ರಾಜಕೀಯ ಪಕ್ಷಗಳ ಯಾತ್ರೆಗಳಿಗೆಲ್ಲ ಅವಕಾಶ ನೀಡಲಾಗುತ್ತಿರುವ ಈ ಸಂದರ್ಭದಲ್ಲಿ ಕೋವಿಡ್ ಮುನ್ನೆಚ್ಚರಿಕೆಯೊಂದಿಗೆ ನಡೆಸುವ ರಾಪ್ಟಿಂಗ್ ಜಲಕ್ರೀಡೆಗೆ ಕೂಡಲೆ ಅನುಮತಿಯನ್ನು ನೀಡಬೇಕೆಂಬ ಮನವಿ ಪ್ರವಾಸೋದ್ಯಮಿಗಳ ಜೊತೆ ಪ್ರವಾಸೋದ್ಯಮವನ್ನೆ ನಂಬಿರುವ ಕೂಲಿಕಾರ್ಮಿಕರದ್ದಾಗಿದೆ.

ಇನ್ನೂ ಜನತೆಯ ಮನವಿಗೆ ತಡವರಿಯದೇ ಸ್ಪಂದಿಸುವ ಜಿಲ್ಲೆಯ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ ಅವರು ಈ ಬಗ್ಗೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ, ಶೀಘ್ರದಲ್ಲೆ ರಾಪ್ಟಿಂಗ್, ಜಲಕ್ರೀಡೆಗೆ ಅನುಮತಿ ಕೊಡಿಸಲಿದ್ದಾರೆ ಎಂಬ ವಿಶ್ವಾಸ ಪ್ರವಾಸೋದ್ಯಮ ಚಟುವಟಿಕೆಯಲ್ಲಿ ತೊಡಗಿಕೊಂಡವರದ್ದಾಗಿದೆ. ಪ್ರವಾಸೋದ್ಯಮಿಗಳು ಮತ್ತು ಈ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಟ್ಟ ನಂಬಿಕೆಯನ್ನು ಉಳಿಸುವ ಜವಾಬ್ದಾರಿ ಶಿವರಾಮ ಹೆಬ್ಬಾರ ಅವರ ಮೇಲಿದೆ.

ಇದನ್ನೂ ಓದಿ : ಸ್ಟೇಜ್ ಕ್ಯಾರೇಜ್, ಕಾಂಟ್ರಾಕ್ಟ್ ಕ್ಯಾರೇಜ್ ವಾಹನಗಳ ತೆರಿಗೆ ಪಾವತಿಗೆ ಒಂದು ತಿಂಗಳ ಕಾಲಾವಕಾಶ

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.