ಇ-ಖಾತಾ ನೀಡುವಲ್ಲಿ ವಿಳಂಬ ಸಲ್ಲದು

Team Udayavani, Jul 20, 2019, 5:02 PM IST

ಕಾರವಾರ: ಅಂಕೋಲಾ ಪುರಸಭೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ| ಹರೀಶಕುಮಾರ ಮಾತನಾಡಿದರು.

ಕಾರವಾರ/ಅಂಕೋಲಾ: ಸಾರ್ವಜನಿಕರಿಗೆ ಇ-ಖಾತಾ ನೀಡುವಲ್ಲಿ ವಿಳಂಬ ಮತ್ತು ಅಲೆದಾಟ ಆಗದಂತೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಹರೀಶ ಕುಮಾರ್‌ ಕೆ. ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಅಂಕೋಲಾ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ಪುರಸಭೆ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇ-ಸ್ವತ್ತು ಪಡೆಯುವಲ್ಲಿ ಅಲೆದಾಟ ಮತ್ತು ವಿಳಂಬವಾಗುತ್ತದೆ ಎಂಬ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದು, ಇನ್ನು ಮುಂದೆ ಯಾವುದೇ ಕಾರಣಕ್ಕೂ ಜನರಿಂದ ದೂರುಗಳು ಕೇಳಿ ಬರದಂತೆ ಪುರಸಭೆಯ ಎಲ್ಲ ಸಿಬ್ಬಂದಿ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಾಧಿಕಾರಿಗೆ ಖಡಕ್‌ ಸೂಚನೆ ನೀಡಿದರು.

ಪುರಸಭೆಯ ಪ್ರಗತಿ ಕುಂಠಿತವಾಗಿದೆ. ಎಲ್ಲ ಸಿಬ್ಬಂದಿ ತಮಗೆ ವಹಿಸಿಕೊಟ್ಟ ಕೆಲಸಗಳನ್ನು ಪ್ರಾಮಾಣಿಕತೆಯಿಂದ ಮಾಡಬೇಕು ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಶೀಘ್ರವಾಗಿ ಕಾರ್ಯ ಮಾಡಿಕೊಡಿ ಹಾಗೂ ಇ-ಖಾತಾ ಕುರಿತು ವಾರ್ಡ್‌ ಮಟ್ಟದಲ್ಲಿ ಜಾಗೃತಿ ಮೂಡಿಸಿ ಎಂದರು.

ಪುರಸಭೆಯಲ್ಲಿ ಕಳೆದ 4-5 ವರ್ಷಗಳಲ್ಲಿ ವಿವಿಧ ಯೋಜನೆಗಳಡಿ ಉಳಿದಿರುವ 50 ಲಕ್ಷಕ್ಕೆ ಜಿಲ್ಲಾ ಯೋಜನಾ ನಿರ್ದೇಶಕರು ಹೊಸ ಕ್ರಿಯಾ ಯೋಜನೆಯನ್ನು ಶೀಘ್ರವಾಗಿ ಸಲ್ಲಿಸಿ, ಅಂಕೋಲಾ ಪ್ರಗತಿಗೆ ಶ್ರಮಿಸಬೇಕು ಎಂದರು.

ನೀರಿನ ಕರ ವಸೂಲಿಯಲ್ಲಿ ಸಮಾಧಾನಕರ ಪ್ರಗತಿ ಇದ್ದು, ವಿದ್ಯುತ್‌ ಮತ್ತು ನೀರಿನ ಕರ ವಸೂಲಿಗೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ ಎಂದು ಹೇಳಿದರು.

ಜಿಲ್ಲಾ ನಗರಾಭಿವೃದ್ಧಿಕೋಶದ ಮುಖ್ಯ ಅಭಿಯಂತರ ಆರ್‌.ಪಿ. ನಾಯ್ಕ, ಯೋಜನಾ ನಿರ್ದೇಶಕ ಮುನಿಶ್ಯಾಮಪ್ಪಾ, ಅಂಕೋಲಾದ ತಹಶೀಲ್ದಾರ್‌ ವಿವೇಕ ಶೇಣ್ವಿ, ಪುರಸಭೆ ಮುಖ್ಯಾಧಿಕಾರಿ ಕೆ.ಪ್ರಹ್ಲಾದ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಯಲ್ಲಾಪುರ: ಗ್ರಾಮ ಮಟ್ಟದಲ್ಲಿ ಮಹಿಳೆಯರ ಸ್ವಾವಲಂಬನೆಗೆ ಅನೇಕ ಯೊಜನೆಗಳಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಬೇಕು...

  • ಶಿರಸಿ: ದಕ್ಷಿಣ ಭಾರತದ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ಮಾ.3 ರಿಂದ ನಡೆಯಲಿದ್ದು, ರಥಕ್ಕೆ ಬಳಸಲಾಗುವ ಮರವನ್ನು ಪೂಜಿಸಿ ಕಚ್ಚು ಹಾಕುವ ಸಂಪ್ರದಾಯವನ್ನು...

  • ಕಾರವಾರ: ರಾಜ್ಯದ ಏಕೈಕ ಕಪ್ಪು ಮರಳಿನ ಕಡಲತೀರ ಎನ್ನುವ ಖ್ಯಾತಿ ಪಡೆದಿರುವ ಕಾರವಾರ ತಾಲೂಕಿನ ಮಾಜಾಳಿಯ ತೀಳ್‌ ಮಾತಿ ಬೀಚ್‌ ಪ್ರವಾಸೋದ್ಯಮ ಪಟ್ಟಿಗೆ ಸೇರುವ ಭಾಗ್ಯದಿಂದ...

  • ಕಾರವಾರ: ಬೇಸಿಗೆ ಆರಂಭಕ್ಕೆ ಇನ್ನೇನು 75 ದಿನ ಬಾಕಿಯಿದೆ. ಆದರೆ, ಕಾರವಾರ ನಗರದ ನಿವಾಸಿಗಳಿಗೆ ಈಗಲೇ ಕುಡಿಯುವ ನೀರಿನ ಬರ ಎದುರಾಗುವ ಆತಂಕ ಕಾಡುತ್ತಿದೆ. ಜೊತೆಗೆ...

  • ಶಿರಸಿ: ಶಿವಮೊಗ್ಗ ಜಿಲ್ಲೆ ಶರಾವತಿ ಅಭಯಾರಣ್ಯಕ್ಕೆ ತಾಲೂಕಿನ ಹೆಬ್ರೆ, ಹುಸೂರು, ಬುಗುಡಿ ಗ್ರಾಮಗಳ ಅರಣ್ಯವಾಸಿಗಳ ಪ್ರದೇಶವನ್ನು ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ...

ಹೊಸ ಸೇರ್ಪಡೆ