ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್
Team Udayavani, Jun 19, 2020, 6:32 AM IST
ದಾಂಡೇಲಿ: ಪಿಯು ಇಂಗ್ಲಿಷ್ ಪರೀಕ್ಷೆ ಗುರುವಾರ ನಗರದ 2 ಕಾಲೇಜುಗಳಲ್ಲಿ ನಡೆಯಿತು. ಕೋವಿಡ್-19ರ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ಬರುವ ಮುನ್ನವೆ ಸ್ಯಾನಿಟೈಸರ್ ಸಿಂಪಡಿಸಲಾಗಿತ್ತು. ಮಕ್ಕಳ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ನಡೆಸಲಾಯಿತು.
ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕುರಿತಂತೆ ಮಾಹಿತಿ ನೀಡಿದ ನಂತರವಷ್ಟೇ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಗೆ ಹೋಗಲು ಅನುವು ಮಾಡಿಕೊಡಲಾಯಿತು. ನಗರದ ಬಂಗೂರನಗರ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ 294 ವಿದ್ಯಾರ್ಥಿಗಳ ಪೈಕಿ 282 ವಿದ್ಯಾರ್ಥಿಗಳು ಹಾಜರಾಗಿದ್ದರು. ಗೈರು ಹಾಜರಾದ 12 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಕಾಯಂ ಗೈರು ಹಾಜರಿಯಲ್ಲಿದ್ದು, ಉಳಿದಿಬ್ಬರು ಪಕ್ಕದ ಕನ್ಯಾ ವಿದ್ಯಾಲಯದ ವಿದ್ಯಾರ್ಥಿನಿಯರಾಗಿದ್ದಾರೆ. ನಗರದ ಜೆವಿಡಿ ಪಿಯು ಕಾಲೇಜಿನಲ್ಲಿ ನಡೆದ ಪರೀಕ್ಷೆಯಲ್ಲಿ 370 ವಿದ್ಯಾರ್ಥಿಗಳು ಭಾಗವಹಿಸಬೇಕಿದ್ದು, 368 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. ಗೈರು ಹಾಜರಾದವರಲ್ಲಿ ಒಂದು ವಿದ್ಯಾರ್ಥಿ ಹೊರ ಜಿಲ್ಲೆಯವರಾಗಿದ್ದು, ಇನ್ನೊಬ್ಬ ವಿದ್ಯಾರ್ಥಿ ಅನಾರೋಗ್ಯಗೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾಗಿಲ್ಲ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು