ಅಘನಾಶಿನಿ ಪ್ರವಾಹದಿಂದ ಸಾವಿರಾರು ಎಕರೆ ಭತ್ತ ನಾಶ

Team Udayavani, Aug 13, 2019, 1:06 PM IST

ಕುಮಟಾ: ಗದ್ದೆಗಳಿಗೆ ನೀರು ನುಗ್ಗಿರುವುದರಿಂದ ಭಾರೀ ಪ್ರಮಾಣದಲ್ಲಿ ಭತ್ತದ ಬೆಳೆ ನಾಶವಾಗಿದೆ.

ಕುಮಟಾ: ಅಘನಾಶಿನಿ ತೀರದ ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಹಲವಾರು ಎಕರೆ ಕೃಷಿ ಭೂಮಿಗೆ ಹಾನಿಯಾಗಿದ್ದು, ಭತ್ತ ಭಾರೀ ಪ್ರಮಾಣದಲ್ಲಿ ನಾಶಹೊಂದಿವೆ.

ತಾಲೂಕಿನ ಹೆಗಡೆ, ಛತ್ರಕೂರ್ವೆ, ಐಗಳಕೂರ್ವೆ, ದಿವಗಿ, ಮಣಕಿ, ಮಿರ್ಜಾನ್‌ ಸೇರಿದಂತೆ ಇನ್ನಿತರ ಹೋಬಳಿಯ ಹಲವು ಭಾಗಗಳು ಹಾಗೂ ಗೋಕರ್ಣದ ತೊರ್ಕೆ, ನಾಡುಮಾಸ್ಕೇರಿ, ಬಾಗಿಲು ಪಟ್ಟಣ ಸೇರಿದಂತೆ ಸುಮಾರು 1300 ಹೆಕ್ಟೇರ್‌ಗೂ ಅಧಿಕ ಗದ್ದೆಗಳಿಗೆ ನೀರು ನುಗ್ಗಿದ್ದು, 1000 ಹೆಕ್ಟೇರ್‌ಗೂ ಅಧಿಕ ಭತ್ತದ ಭೂಮಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಈ ಬಾರಿಯ ಮಳೆಯು ತಡವಾಗಿ ಆರಂಭವಾದ ಕಾರಣ ಜನರು ನಾಟಿ ಕಾರ್ಯವನ್ನು ಕೆಲದಿನಗಳ ಹಿಂದಷ್ಟೇ ಮುಗಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಅಘನಾಶಿನಿ ನದಿ ಪ್ರವಾಹ ಉಂಟಾಗಿ ಭತ್ತದ ಗದ್ದೆಗಳಿಗೆ ನುಗ್ಗಿ ರೈತನಿಗೆ ಸಂಕಷ್ಟ ತಂದಿದೆ. ತಾಲೂಕಿನಾದ್ಯಂತ ತುಂಡು ಭೂಮಿಯ ಕೃಷಿಕರೇ ಹೆಚ್ಚಾಗಿದ್ದು, ವರ್ಷದ ಕೂಳನ್ನು ಒದಗಿಸುತ್ತಿದ್ದ ಬೆಳೆಗಳು ನೀರಿನಲ್ಲಿ ಮುಳುಗಿದ ಕಾರಣ ಸಸಿ ಸಂಪೂರ್ಣ ಕೊಳೆತು ಹೋಗಿವೆ.

ನೆರೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸೋಮವಾರದಿಂದ ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆ ತಾಲೂಕಿನಾದ್ಯಂತ ಜಂಟಿಯಾಗಿ ಸರ್ವೆ ಕಾರ್ಯ ಆರಂಭಿಸಿದ್ದು, ಕೆಲ ದಿನಗಳಲ್ಲಿ ಎಲ್ಲ ಪ್ರದೇಶಗಳ ಹಾನಿಯ ಅಂತಿಮ ವರದಿ ಸಲ್ಲಿಸಲಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭತ್ತದ ಬೆಳೆ ನಾಶಕ್ಕೆ ಎನ್‌ಡಿಆರ್‌ಎಫ್‌ ನಿಧಿಯಿಂದ 1 ಗುಂಟೆಗೆ 68 ರೂ. ಪರಿಹಾರ ಧನ ನಿಗದಿಪಡಿಸಿರುವುದು ನಾಟಿ ಹಾಗೂ ಉಳುಮೆ ಕಾರ್ಯಕ್ಕೆ ಬಳಸಿದ ಮೊತ್ತವೂ ನಮಗೆ ದೊರೆಯುವುದಿಲ್ಲ ಎಂಬುದು ರೈತರ ಅಳಲಾಗಿದೆ. ರಾಜ್ಯ ಸರಕಾರ ತನ್ನಿಂದಾದ ಪರಿಹಾರ ನೀಡಿ, ಇರುವ ಪರಿಹಾರದ ಮೊತ್ತ ಹೆಚ್ಚಿಸಬೇಕು ಎಂಬುದು ಭತ್ತದ ಬೆಳೆಗಾರರ ಆಗ್ರಹವಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಹೊನ್ನಾವರ: ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತ ಹರೀಶ ಹಂದೆಯವರ ಸೆಲ್ಕೋ ಸೋಲಾರ್‌ ಸಂಸ್ಥೆ ಸೌರಶಕ್ತಿಯನ್ನು ಬಹುಪಯೋಗಿಯಾಗಿ ಗ್ರಾಮೀಣ ಭಾಗದ ಜನತೆಗೆ ಜೀವನಾಧಾರವಾಗಿ...

  • ಭಟ್ಕಳ: ಕಳೆದ ಮೂರು ದಿನಗಳಿಂದ ಶಿರಾಲಿ ಗ್ರಾಪಂನ್ನೇ ಮೀನು ಮಾರುಕಟ್ಟೆಯನ್ನಾಗಿ ಮಾಡಿಕೊಂಡ ಮೀನುಗಾರರ ಬೇಡಿಕೆಗೆ ಸ್ಪಂದಿಸುವಲ್ಲಿ ಗ್ರಾಪಂ ವಿಫಲವಾಗಿದ್ದು...

  • ಮುಂಡಗೋಡ: ಅಪಾರ ಪ್ರಮಾಣದ ನೀರು ಹರಿದು ಬಂದು ಕೊಚ್ಚಿಕೊಂಡು ಹೋಗಿದ್ದ ತಾಲೂಕಿನ ಶಿಡ್ಲಗುಂಡಿ ಸೇತುವೆ ಕಾಮಗಾರಿ ಕಳೆದ ಎರಡು ದಿನಗಳಿಂದ ಆರಂಭವಾಗಿರುವುದು ಸಾರ್ವಜನಿಕರಿಗೆ...

  • ಶಿರಸಿ: ನಾಡಿನ ಹೆಸರಾಂತ ಮಾರಿಕಾಂಬಾ ದೇವಸ್ಥಾನಕ್ಕೂ ಅನ ಧಿಕೃತ ಫೇಸ್‌ಬುಕ್‌, ವಾಟ್ಸಆ್ಯಪ್‌, ಟ್ವಿಟ್ಟರ್‌ಗಳ ಕಾಟದಿಂದ ಅನಧಿಕೃತ ಮಾಹಿತಿಗಳು ರವಾನೆಯಾಗಿ ಅನೇಕ...

  • ಹೊನ್ನಾವರ: ಜನಜೀವನಕ್ಕೆ ಉತ್ತಮ ಸಂಸ್ಕಾರ ಯಕ್ಷಗಾನ ಕಲೆಯಿಂದ ಸಿಗುತ್ತಿದೆ. ನಾಡಿನಲ್ಲಿ ಯಕ್ಷಗಾನ ಉಳಿಯಬೇಕು. ಇದಕ್ಕೆ ಸರಕಾರ ಮತ್ತು ಸಮಾಜ ಪ್ರೋತ್ಸಾಹ ನೀಡುವ...

ಹೊಸ ಸೇರ್ಪಡೆ