ವನಶ್ರೀನಗರದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ತಂದಿಟ್ಟ ಯುಜಿಡಿ ಕಾಮಗಾರಿ


Team Udayavani, Sep 3, 2021, 5:41 PM IST

UGD works

 ದಾಂಡೇಲಿ : ಸದಾ ಒಂದಲ್ಲ ಒಂದು ಸಮಸ್ಯೆಗಳ ಮೂಲಕವೆ ಗಮನ ಸೆಳೆದ ಯುಜಿಡಿ ಕಾಮಗಾರಿಯಂತೂ ನಗರದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ, ಕಾಡುತ್ತಿದೆ, ಮುಂದೆಯೂ ಕಾಡಬಹುದಾದ ಸಾಧ್ಯತೆ  ಕಂಡುಬರುವಂತಾಗಿದೆ. ನಗರದ ಬಹುತೇಕ ಸುಂದರ ರಸ್ತೆಗಳು ಹದಗೆಡುವಲ್ಲಿ ಯುಜಿಡಿ ಕಾಮಗಾರಿಯ ಪಾತ್ರ ಬಹುಮುಖ್ಯವಾಗಿದೆ. ಸಾರ್ವಜನಿಕ ಜನಜೀವನಕ್ಕೆ ದೈನಂದಿನವಾಗಿ ಸಮಸ್ಯೆಗಳ ರೂಪದಲ್ಲಿ ಕಾಡುತ್ತಿರುವ ಯುಜಿಡಿ ಕಾಮಗಾರಿ ಶುಕ್ರವಾರ ನಗರದ ವನಶ್ರೀನಗರದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ತಂದೊಡ್ಡಿದೆ.

ಅಂದ ಹಾಗೆ ಸಾರ್ವಜನಿಕರ ಅಹವಾಲು ಸಭೆ ಕರೆಯದೆ ಕಳೆದ ಮೂರ್ನಾಲ್ಕು ವರ್ಷಗಳಿಂದ ನಗರದಲ್ಲಿ ಯುಜಿಡಿ ಕಾಮಗಾರಿ ಆರಂಭವಾಗಿದ್ದು, ನಗರದೆಲ್ಲೆಡೆ ಕಾಮಗಾರಿ ಬಹುತೇಕ ಮುಗಿಯುವ ಹಂತದಲ್ಲಿದೆ. ಯುಜಿಡಿ ಕಾಮಗಾರಿಯಿಂದಾಗಿ ನಗರದ ಅನೇಕ ರಸ್ತೆಗಳು ಅಸ್ತವ್ಯಸ್ತಗೊಂಡು ಸಂಚಾರಕ್ಕೆ ಸಂಕಷ್ಟವಾಗಿರುವುದಲ್ಲದೆ, ಇತ್ತ ಯುಜಿಡಿ ಪೈಪ್ಲೈನ್ ಕಾಮಗಾರಿಗಾಗಿ ರಸ್ತೆಯನ್ನು ಅಗೆಯುವ ಸಂದರ್ಭದಲ್ಲಿ ಕುಡಿಯುವ ನೀರಿನ ಪೈಪ್ ಗಳು ಒಡೆದು ಹೋಗುವುದು ಸಾಮಾನ್ಯ ಎಂಬಂತಾಗಿದೆ.

ಇದನ್ನೂ ಓದಿ:ಗೋವಾ: ಕ್ರೇನ್ ಬಿಡಿಭಾಗ ತುಂಡಾಗಿ ಇಬ್ಬರು ಕಾರ್ಮಿಕರು ಸಾವು

ಶುಕ್ರವಾರ ಬೆಳ್ಳಂ ಬೆಳಗ್ಗೆ ನಗರದ ವನಶ್ರೀನಗರದಲ್ಲಿ ಯುಜಿಡಿ ಕಾಮಗಾರಿಯಿಂದಾಗಿ ಕುಡಿಯುವ ನೀರಿನ ಪೈಪ್ ಒಡೆದು ಹೋಗಿ ಸುಮಾರು ಒಂದು ಗಂಟೆಗಳವರೆಗೆ ಕುಡಿಯುವ ನೀರು ರಸ್ತೆಯಲ್ಲಿ ಹರಿದುಕೊಂಡು ಹೋಗಿದೆ.

ನಗರದಲ್ಲಿ ಮೊದಲೆ ಡೆಂಗ್ಯೂ, ಹಳದಿ ಕಾಮಾಲೆ ಬಹು ಪ್ರಮಾಣದಲ್ಲಿ ನಗರದ ಜನತೆಯನ್ನು ತಲ್ಲಣಗೊಳಿಸಿದೆ. ಇಂತಹ ಸಂದರ್ಭದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಹೋದ ತಕ್ಷಣವೇ ದುರಸ್ತಿ ಮಾಡಬೇಕಾದ ಅನಿವಾರ್ಯತೆಯಿದೆ. ದುರಸ್ತಿಗೆ ವಿಳಂಭವಾಗುತ್ತಿದ್ದಂತೆಯೆ ಒಡೆದು ಹೋದ ಪೈಪಿನೊಳಗೆ ಅಶುದ್ದ ನೀರು, ತ್ಯಾಜ್ಯಗಳು ಒಳಗಡೆ ಹೋಗುವುದರಿಂದ, ಈ ನೀರನ್ನು ಕುಡಿಯುವವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ನಿರ್ಮಾಣವಾಗುವುದರಲ್ಲಿ ಯಾವ ಅನುಮಾನವೂ ಇಲ್ಲ ಎಂದು  ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ವನಶ್ರೀನಗರದಲ್ಲಿ ಕುಡಿಯುವ ನೀರಿನ ಪೈಪ್ ಒಡೆದ ಸಂದರ್ಭದಲ್ಲೆ ಯುಜಿಡಿ ಕಾಮಗಾರಿ ಸಂಸ್ಥೆಯವರು ಒಡೆದ ಪೈಪನ್ನು ದುರಸ್ತಿ ಮಾಡುತ್ತಿದ್ದಲ್ಲಿ ಸಮಸ್ಯೆ ಸೃಷ್ಟಿಯಾಗುತ್ತಿರಲಿಲ್ಲ. ಆದರೆ ತ್ಯಾಜ್ಯವೆಲ್ಲ ಒಡೆದ ಪೈಪಿನೊಳಗಡೆ ಸೇರಿದ ಮೇಲೆ ದುರಸ್ತಿ ಮಾಡಿದಂತಾಗಿದೆ ಇಲ್ಲಿಯ ವಾಸ್ತವಿಕ ಸ್ಥಿತಿ.

ಇನ್ನೂ ಯುಜಿಡಿ ಕಾಮಗಾರಿಯನ್ನು ಕಾಲಕಾಲಕ್ಕೆ ಪರಿಶೀಲನೆ ಮಾಡಬೇಕಾದ ಒಳಚರಂಡಿ ಮಂಡಳಿಯ ಅಧಿಕಾರಿಗಳು ನಗರಕ್ಕೆ ಭೇಟಿ ಕೊಡುತ್ತಿದ್ದಾರೆಯೆ? ಭೇಟಿ ಕೊಡುತ್ತಿದ್ದಲ್ಲಿ ಇಂಥಹ ಸಮಸ್ಯೆಗಳು ಸೃಷ್ಟಿಯಾಗಲು ಸಾಧ್ಯವೆ? ಎಂಬಿತ್ಯಾದಿ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಯಲ್ಲಿದೆ. ಒಟ್ಟಿನಲ್ಲಿ ಕಾಮಗಾರಿ ಆರಂಭವಾದಾಗಿನಿಂದ ಸದಾ ಸಮಸ್ಯೆಗಳನ್ನು ನೀಡುತ್ತಾ ಬಂದಿರುವ ಯುಜಿಡಿ ಕಾಮಗಾರಿ ಮುಗಿದ ಬಳಿಕವೂ ನಗರದ ನಾಗರೀಕರಿಗೆ ಸಮಸ್ಯೆಯನ್ನು ಉಂಟಾದರೆ ಅದಕ್ಕೆ ಯಾರು ಹೊಣೆ? ಎಂಬ ಪ್ರಶ್ನೆ ನಗರದ ಜನತೆಯನ್ನು ಸದಾ ಕಾಡತೊಡಗಿದೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.