ಮತ್ತೆ ತಲೆಯೆತ್ತಿವೆ ಅನಧಿಕೃತ ಹಚ್ಚೆ ಅಂಗಡಿ


Team Udayavani, Jan 6, 2020, 5:24 PM IST

uk-tdy-3

ಕುಮಟಾ: ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣವಾದ ಗೋಕರ್ಣದಲ್ಲಿ ದಿನದಿಂದ ದಿನಕ್ಕೆ ಅನಧಿಕೃತ ಟ್ಯಾಟೋ (ಹಚ್ಚೆ) ಅಂಗಡಿಗಳು ಅಧಿಕಗೊಳ್ಳುತ್ತಿದ್ದು, ಇದರಿಂದ ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.

ತಾಲೂಕಿನ ಗೋಕರ್ಣದಲ್ಲಿ ಒಂದು ವರ್ಷಕ್ಕೆ 10 ಸಾವಿರಕ್ಕೂ ಅಧಿಕ ಜನರು ಟ್ಯಾಟೋ ಹಾಕಿಸಿಕೊಳ್ಳುತ್ತಿದ್ದಾರೆ. ದಿನನಿತ್ಯ ಒಂದು ಅಂಗಡಿಯಲ್ಲಿ 15 ಜನರಿಗೆ ಹಚ್ಚೆ ಹಾಕಲಾಗುತ್ತದೆ. ಎಲ್ಲ ಸೇರಿ ನಿತ್ಯ ಸುಮಾರು 50ರಿಂದ 100 ಜನರು ಟ್ಯಾಟೋ ಹಾಕಿಸಿಕೊಳ್ಳುತ್ತಾರೆ. ಎಲ್ಲ ಬೀಚ್‌ ಸೇರಿ ಗೋಕರ್ಣದಲ್ಲಿ 20ಕ್ಕೂ ಅಧಿಕ ಅನಧಿಕೃತವಾಗಿ ಹಚ್ಚೆ ಹಾಕುವ ಅಂಗಡಿಗಳಿವೆ.

ಒಟ್ಟಾರೆಯಾಗಿ ನೂರಕ್ಕೂ ಹೆಚ್ಚಿನ ಜನ ಈ ದಂಧೆಯಲ್ಲಿದ್ದಾರೆ. ಮೊದಲು ವಿದೇಶಿಯರು ಮಾತ್ರ ಇದಕ್ಕೆ ಆಕರ್ಷಿತರಾಗುತ್ತಿದ್ದರು. ಆದರೆ, ಈಗ ದೇಶೀಯ ಪ್ರವಾಸಿಗರು ಅದರಲ್ಲೂ ವಿಶೇಷವಾಗಿ ಯುವಕ-ಯುವತಿಯರು ಟ್ಯಾಟೋದತ್ತ ಮುಗಿಬೀಳುತ್ತಿರುವುದು ಬೇಸರದ ಸಂಗತಿ.

ಈ ದಂಧೆಯಲ್ಲಿ ಸದ್ಯ ಇರುವ ಉತ್ತಮ ಆದಾಯದಿಂದಾಗಿ ವರ್ಷದಿಂದ ವರ್ಷಕ್ಕೆ ಈ ಅಂಗಡಿಗಳ ಸಂಖ್ಯೆಯೂ ಗೋಕರ್ಣದಲ್ಲಿ ಅಧಿಕಗೊಳ್ಳುತ್ತಿದೆ. ಇಂತಹ ವ್ಯವಹಾರ ನಡೆಸಲು ಕಟ್ಟುನಿಟ್ಟಿನ ಕಾನೂನು ಕ್ರಮವಿದೆ. ನಿಯಮದಂತೆ ಒಂದು ಮೆಡಿಕಲ್‌ ಲ್ಯಾಬ್‌ ತರದಲ್ಲಿ ಟ್ಯಾಟೋ ಶಾಪ್‌ಗ್ಳು ಕಾರ್ಯ ನಿರ್ವಹಿಸಬೇಕು. ಈ ದಂಧೆಗೆ ಸ್ಥಳೀಯ ಗ್ರಾಮ ಪಂಚಾಯಿತಿಯ ಜೊತೆಗೆ ಆರೋಗ್ಯ ಇಲಾಖೆಯ ಪರವಾನಗಿ ಕಡ್ಡಾಯ. ಆದರೆ, ಗೋಕರ್ಣದಲ್ಲಿ ಇವ್ಯಾವುದನ್ನೂ ಅನುಸರಿಸದೇ ಅನಧಿಕೃತವಾಗಿ ಅಂಗಡಿಯನ್ನು ನಡೆಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಸಾಂಕ್ರಾಮಿಕ ರೋಗ: ಆಧುನಿಕ ಟ್ಯಾಟೋ ಫ್ಯಾಶನ್‌ ಹಲವು ಬಗೆಯ ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗುತ್ತಿದೆ ಎಂಬ ಆಪಾದನೆ ಎಲ್ಲ ಕಡೆಯಲ್ಲಿಯೂ ಕೇಳಿ ಬರುತ್ತಿದೆ. ಹಚ್ಚೆ ಹಾಕಲು ಬಗೆಬಗೆಯ ಆಕಾರದ ಸೂಜಿಗಳನ್ನು ಬಳಸಲಾಗುತ್ತದೆ. ಇಂತಹ ಸೂಜಿಗಳು ನೇರವಾ ಟ್ಯಾಟೋ ಹಾಕಿಸಿಕೊಳ್ಳುವವರ ರಕ್ತದ ಜೊತೆ ಸಂಪರ್ಕವಾಗುತ್ತದೆ. ಒಬ್ಬರಿಗೆ ಬಳಸಿದ ಸೂಜಿಯನ್ನೇ ಇನ್ನೊಬ್ಬರಿಗೆ ಬಳಸುತ್ತಿರುವುದರಿಂದ ಏಡ್ಸ್‌ ರೋಗ ಸೇರಿದಂತೆ ಇನ್ನಿತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ದಟ್ಟವಾಗಿದೆ. ದಿನದಿಂದ ದಿನಕ್ಕೆ ಅನಧಿಕೃತ ಹಚ್ಚೆ ಅಂಗಡಿಗಳು ಹೆಚ್ಚಾಗ ತೊಡಗಿದ್ದು, ಇದನ್ನು ನಿಯಂತ್ರಿಸುವ ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ತಾಲೂಕು ಪಂಚಾಯತ್‌ ಕೈಚೆಲ್ಲಿ ಕುಳಿತಿರುವುದು ಬೇಸರದ ಸಂಗತಿಯಾಗಿದೆ. ಈ ಕುರಿತು ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡು ಅನಧಿಕೃತವಾಗಿ ಹಚ್ಚೆ ಹಾಕುವ ಅಂಗಡಿಗಳನ್ನು ಶಾಶ್ವತವಾಗಿ ಬಂದ್‌ ಮಾಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

 

-ಕೆ. ದಿನೇಶ ಗಾಂವಕರ

ಟಾಪ್ ನ್ಯೂಸ್

9

Father’s Day: ಏನೂ ಹೇಳದೆಯೇ ಕಲಿಸಿದೆಯಲ್ಲ ಅಪ್ಪಾಜೀ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Amit Shah high level meeting on Jammu and Kashmir security

Security Review; ಜಮ್ಮು ಕಾಶ್ಮೀರದ ಭದ್ರತೆಯ ಬಗ್ಗೆ ಅಮಿತ್ ಶಾ ಉನ್ನತ ಮಟ್ಟದ ಸಭೆ

5-bantwala

Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

4-

ಮಕ್ಕಳಲ್ಲಿ ಆಟಿಸಂ ಉಂಟಾಗುವುದಕ್ಕೆ ಸಂಬಂಧಿಸಿದ ಹೆತ್ತವರ ಮಾನಸಿಕ ಅನಾರೋಗ್ಯಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadadasdsd

PM ಮೋದಿಯವರೊಂದಿಗೆ ಕೃಷಿ ಸಂವಾದಕ್ಕೆ ಯಲ್ಲಾಪುರದ ಲತಾ ಹೆಗಡೆ ಆಯ್ಕೆ

Bhatkal ಕೋಣಗಳ ಅಕ್ರಮ ಸಾಗಾಟ: ಇಬ್ಬರ ಬಂಧನ

Bhatkal ಕೋಣಗಳ ಅಕ್ರಮ ಸಾಗಾಟ: ಇಬ್ಬರ ಬಂಧನ

ಬಾಗಿಲು ಮುರಿದು 16 ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ಕಳವು

ಬಾಗಿಲು ಮುರಿದು 16 ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ಕಳವು

Yellapur: ಸೇತುವೆ ತಳಭಾಗದಲ್ಲಿ ಶೇಖರಣೆಗೊಂಡ ಮರಮಟ್ಟುಗಳಿಗೆ ಆಕಸ್ಮಿಕ ಬೆಂಕಿ

Yellapur: ಸೇತುವೆ ತಳಭಾಗದಲ್ಲಿ ಶೇಖರಣೆಗೊಂಡ ಮರಮಟ್ಟುಗಳಿಗೆ ಆಕಸ್ಮಿಕ ಬೆಂಕಿ

Dandeli: ಸ್ಕೂಟಿಗೆ ಕಾರು ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

Dandeli: ಹಿಮ್ಮುಖವಾಗಿ ಚಲಾಯಿಸಿದ ಕಾರು ಸ್ಕೂಟಿಗೆ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

9

Father’s Day: ಏನೂ ಹೇಳದೆಯೇ ಕಲಿಸಿದೆಯಲ್ಲ ಅಪ್ಪಾಜೀ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.