ಗೋಡೆ ಕುಸಿದು ಕಾರ್ಮಿಕ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ
Team Udayavani, Jun 24, 2021, 6:15 PM IST
ಕಾರವಾರ : ಮನೆ ದುರಸ್ತಿ ವೇಳೆ ಗೋಡೆ ಕುಸಿದು ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಕಾರವಾರದ ಸದಾಶಿವಗಡದಲ್ಲಿ ನಡೆದಿದೆ.ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್
ಕಾರ್ಮಿಕ ಹುಚ್ಚಪ್ಪ (35) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದು, ವೈಶ್ಯವಾಡದ ತುಳುಸಿ ಬಾಯಿ ಎಂಬುವವರ ಮನೆ ದುರಸ್ತಿಗೆ ಮೇಲ್ಮಹಡಿಯನ್ನು ಬಿಚ್ಚಲಾಗಿತ್ತು. ಆದರೆ ಮಳೆಯಿಂದ ನೆನೆದ ಗೊಡೆ ಏಕಾಏಕಿ ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಗೊಡೆ ಕೆಳಗೆ ಸಿಲುಕಿಕೊಂಡಿದ್ದರು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಪಡೆ ಓರ್ವನನ್ನು ರಕ್ಷಣೆ ಮಾಡಿದೆ.
ಇನ್ನೋರ್ವನ ಮೇಲೆ ಭಾರಿ ಗಾತ್ರದ ಗೋಡೆಯ ಕಲ್ಲು ಬಿದ್ದು ಗಾಯಗೊಂಡಿದ್ದಾನೆ. ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದ್ದು ಈ ಬಗ್ಗೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಹೀರೋ ಮೊಟೊಕಾರ್ಪ್ ನ ಎಲ್ಲಾ ದ್ವಿಚಕ್ರ ವಾಹನಗಳ ಬೆಲೆ ಜುಲೈ 1ರಿಂದ ಹೆಚ್ಚಳ.!ಮಾಹಿತಿ ಇಲ್ಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಲಘಟಗಿ ಅಭಿವೃದ್ಧಿಗೆ ಪಟ್ಟಣ ಪಂಚಾಯಿತಿ ಮುಂದಡಿ
ದಾವಣಗೆರೆ: ಅಪ್ರಾಪ್ತೆಯ ವಿವಾಹಕ್ಕೆ ತಯಾರಿ… ಅಧಿಕಾರಿಗಳಿಂದ ವಿವಾಹಕ್ಕೆ ತಡೆ
ಕ್ಷೇತ್ರದ ಮತದಾರರು ನನ್ನ ಜೊತೆ ಇದ್ದಾರೆ, ಹೆದರುವ ಪ್ರಶ್ನೆಯೇ ಇಲ್ಲ: ಶಾಸಕ ಮುನವಳ್ಳಿ
ಚಿಕ್ಕೋಡಿ: ಸಂಬಂಧಿಯನ್ನೇ ಕೊಲೆಗೈದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಚಾರ್ಮಾಡಿ ಘಾಟ್: ದುಷ್ಕರ್ಮಿಗಳ ಗುಂಡೇಟಿಗೆ ಕಡವೆ ಬಲಿ