Udayavni Special

ಮಧ್ಯಪ್ರದೇಶಕ್ಕೆ ನಡೆದು ಹೊರಟವರಿಗೆ ವಾಹನ ವ್ಯವಸ್ಥೆ


Team Udayavani, May 22, 2020, 5:36 AM IST

ಮಧ್ಯಪ್ರದೇಶಕ್ಕೆ ನಡೆದು ಹೊರಟವರಿಗೆ ವಾಹನ ವ್ಯವಸ್ಥೆ

ಕುಮಟಾ: ಲಾಕ್‌ಡೌನ್‌ ಸಂದರ್ಭದಲ್ಲಿ ವಾಹನದ ವ್ಯವಸ್ಥೆಯಿಲ್ಲದೆ ಮಂಗಳೂರಿನಿಂದ ಮಧ್ಯಪ್ರದೇಶಕ್ಕೆ 24 ಕಾರ್ಮಿಕರು ಕಾಲ್ನಡಿಗೆಯ ಮೂಲಕ ಹೊರಟಿದ್ದರು. ಈ ವಿಚಾರ ತಿಳಿದ ಉಪವಿಭಾಗಾಧಿ ಕಾರಿ ಎಂ. ಅಜಿತ ಹಾಗೂ ಪುರಸಭಾ ಮುಖ್ಯಾಧಿಕಾರಿ ಸುರೇಶ ಎಂ.ಕೆ. ವಾಹನದ ವ್ಯವಸ್ಥೆ ಕಲ್ಪಿಸಿ ರಾಜ್ಯದ ಗಡಿಭಾಗದ ವರೆಗೆ ಅವರನ್ನು ಸುರಕ್ಷಿತವಾಗಿ ತಲುಪಿಸಿದ್ದಾರೆ.

ಮಂಗಳೂರಿನಿಂದ ಬಂದ ವಲಸೆ ಕಾರ್ಮಿಕರು ತಾಲೂಕಿನ ಹಂದಿಗೋಣದ ಬಳಿ ವಿಶ್ರಾಂತಿ ಪಡೆಯುತ್ತಿರುವ ಬಗ್ಗೆ ಉಪವಿಭಾಗಾಧಿಕಾರಿ ಎಂ. ಅಜಿತ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಬಗ್ಗೆ

ಪರಿಶೀಲಿಸುವಂತೆ ಪುರಸಭಾ ಮುಖ್ಯಾಧಿಕಾರಿ ಸುರೇಶ ಎಂ.ಕೆ. ಅವರಿಗೆ ಸೂಚಿಸಿದರು. ತಕ್ಷಣವೇ ಅಲ್ಲಿಗೆ ಧಾವಿಸಿದ ಮುಖ್ಯಾಧಿಕಾರಿ, ವಿಶ್ರಾಂತಿ ಪಡೆಯುತ್ತಿದ್ದ 12 ಜನ ಕಾರ್ಮಿಕರ ಆರೋಗ್ಯ ವಿಚಾರಿಸಿ, ವಿಶ್ವಾಸಕ್ಕೆ ತೆಗೆದುಕೊಂಡರು. ನಂತರ ಪಟ್ಟಣದ ಪುರಭವನದ ವರೆಗೆ ನಡೆದುಕೊಂಡು ಬರುವಂತೆ ಅವರಿಗೆ ತಿಳಿಸಿದ್ದರು. ಆದರೆ ಅಲ್ಲಿಗೆ ಬರುವ ಮುನ್ನವೇ ಅವರು ಯಾವುದೋ ವಾಹನವನ್ನು ಹತ್ತಿ ಪರಾರಿಯಾಗಲು ಯತ್ನಿಸಿದ್ದರು. ಪೊಲೀಸರ ಸಹಾಯದಿಂದ ತಕ್ಷಣ ಅವರನ್ನು ಬೆನ್ನಟ್ಟಿದ ಎಂ.ಕೆ. ಸುರೇಶ, ಅವರನ್ನು ವಾಪಸ್‌ ಕರೆತಂದು ರಾತ್ರಿ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಪುರಭವನದಲ್ಲಿ ಕಲ್ಪಿಸಿದರು.

ನಂತರ ಕೂಲಂಕುಷವಾಗಿ ಅವರನ್ನು ವಿಚಾರಿಸಿದಾಗ 12 ಜನರ ಇನ್ನೊಂದು ತಂಡವೂ ಹಿಂದಿನಿಂದ ಬರುತ್ತಿರುವ ಬಗ್ಗೆ ಮಾಹಿತಿ ನೀಡಿದರು. ನಂತರ ಜಿಲ್ಲಾಡಳಿತದ ಅನುಮತಿ ಪಡೆದು ಎರಡೂ ತಂಡಗಳಿಗೆ ಪ್ರತ್ಯೇಕ ವಾಹನದ ವ್ಯವಸ್ಥೆ ಕಲ್ಪಿಸಿ, ಕರ್ನಾಟಕದ ಗಡಿ ಭಾಗವಾದ ಬೆಳಗಾವಿವರೆಗೆ ಅವರನ್ನು ಕಳುಹಿಸಿಕೊಡಲಾಯಿತು ಎಂದು ಪುರಸಭಾ ಮುಖ್ಯಾಧಿಕಾರಿ ಸುರೇಶ ಎಂ.ಕೆ. ತಿಳಿಸಿದ್ದಾರೆ. ಮಂಗಳೂರಿನಿಂದ ಕುಮಟಾದ ವರೆಗೆ ಆಗಮಿಸುವಾಗ ಸಿಗುವ ಎಲ್ಲ ಚೆಕ್‌ಪೋಸ್ಟ್‌ಗಳನ್ನು ಅವರು ಹೇಗೆ ದಾಟಿ ಬಂದರು ಎಂಬುದು ಈಗ ಯಕ್ಷಪ್ರಶ್ನೆಯಾಗಿದೆ.

ಲಾಕ್‌ಡೌನ್‌ಗೂ ಮುನ್ನ ಮಂಗಳೂರಿಗೆ ಕೂಲಿ ಕೆಲಸಕ್ಕೆಂದು ಆಗಮಿಸಿದ್ದ ಅವರು ವಾಹನ ವ್ಯವಸ್ಥೆ ಇಲ್ಲದೆ ಹತಾಶರಾಗಿ 1700 ಕಿಮೀ ದೂರದ ಮಧ್ಯಪ್ರದೇಶಕ್ಕೆ ಕಾಲ್ನಡಿಗೆಯಲ್ಲೇ ಹೊರಟಿದ್ದರು. ಮಾನವೀಯ ದೃಷ್ಟಿಯಿಂದ ಅವರಿಗೆ ಆಶ್ರಯ ನೀಡಿದ್ದೇವೆ. ಬಳಿಕ ಜಿಲ್ಲಾಧಿಕಾರಿ ಅನುಮತಿ ಪಡೆದು ಪ್ರತ್ಯೇಕ ವಾಹನದ ಮೂಲಕ ಬೆಳಗಾವಿಗೆ ಕಳುಹಿಸಿಕೊಡಲಾಗಿದೆ.  – ಸುರೇಶ ಎಂ.ಕೆ., ಪುರಸಭಾ ಮುಖ್ಯಾಧಿಕಾರಿ

ಟಾಪ್ ನ್ಯೂಸ್

20

ಶೆರ್ಲಿನ್ ದೂರು: ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿಗೆ ಬಂಧನದ ಭೀತಿ

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

ವಿಕಲ ಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಯ ಪರ್ಸ್ ಎಗರಿಸಿದ ಕಳ್ಳ!

ವಿಕಲ ಚೇತನರ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಯ ಪರ್ಸ್ ಎಗರಿಸಿದ ಕಳ್ಳ!

araga jnanendra

ಅಲ್ಪಸಂಖ್ಯಾತ ಮತಗಳಿಗೆ ಸಿದ್ದರಾಮಯ್ಯ, ಎಚ್ಡಿಕೆ ಹಲ್ಲು ಗಿಂಜುತ್ತಿದ್ದಾರೆ: ಆರಗ ಜ್ಞಾನೇಂದ್ರ

communal voilance bangla

ಬಾಂಗ್ಲಾದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರ: ಕಾಳಿ ದೇವಸ್ಥಾನದ 6 ವಿಗ್ರಹಗಳು ಧ್ವಂಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಳಗಾರಿನ  ಪಂಚವಟಿಯಲ್ಲಿ ಮಾಯಾಮೃಗ!

ಬಾಳಗಾರಿನ  ಪಂಚವಟಿಯಲ್ಲಿ ಮಾಯಾಮೃಗ!

sirsi news

ಬನವಾಸಿಯ ಉಮಾಮಧುಕೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸತೀಶ್ ಜಾರಕಿಹೊಳಿ

14

ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಪ್ರತಿಭೆ: ನಯನಾ

Bhatkala news

ಶ್ರೀ ನಾಗಯಕ್ಷೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಲಸಿಕಾಕರಣ ಸಭಾಂಗಣ ಲೋಕಾರ್ಪಣೆ

dandeli news

ಉಳವಿ ರಸ್ತೆಯಲ್ಲಿ ಪ್ರವಾಸಿಗರಿಗೆ ಶಾಕ್‌ ಕೊಟ್ಟ ಕಪ್ಪು ಚಿರತೆ !

MUST WATCH

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

ಹೊಸ ಸೇರ್ಪಡೆ

ಹಾಲು ಗುಣಮಟ್ಟ ಸರಿಯಿಲ್ಲ ಎಂದು ಕ್ಯಾತೆ- ಡೇರಿ ಅವ್ಯವಹಾರ ಬೆಳಕಿಗೆ

ಸೋಲೂರು ಹಾಲು ಉತ್ಪಾದಕರ ಪ್ರತಿಭಟನೆ

20

ಶೆರ್ಲಿನ್ ದೂರು: ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿಗೆ ಬಂಧನದ ಭೀತಿ

ಬಾಳಗಾರಿನ  ಪಂಚವಟಿಯಲ್ಲಿ ಮಾಯಾಮೃಗ!

ಬಾಳಗಾರಿನ  ಪಂಚವಟಿಯಲ್ಲಿ ಮಾಯಾಮೃಗ!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.