ಭಟ್ಕಳ: ವಾಟ್ಸ್ಯಾಪ್ ಗ್ರೂಪ್ ನಲ್ಲಿ ಸಂದೇಶ ಹಾಕಿದ್ದಕ್ಕೆ ಹಲ್ಲೆ ಆರೋಪಿಸಿ ದೂರು ದಾಖಲು
Team Udayavani, Oct 25, 2021, 1:17 PM IST
ಭಟ್ಕಳ: ವಾಟ್ಸ್ಯಾಪ್ ಗ್ರೂಪ್‌ನಲ್ಲಿ ಸಂದೇಶವೊಂದನ್ನು ಹಾಕಿರುವ ಕುರಿತು ಇಬ್ಬರು ವ್ಯಕ್ತಿಗಳು ತನಗೆ ಜಾತಿ ನಿಂದನೆ ಮಾಡಿದ್ದಾರೆ ಎಂದು ತೆಂಗಿನಗುಂಡಿ ಗೊಂಡರಕೇರಿಯ ಕುಪ್ಪಯ್ಯ ನಾಗಯ್ಯ ಗೊಂಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನಲ್ಲಿ ತಾನು ಪರಿಶಿಷ್ಟ ಪಂಗಡಕ್ಕೆ (ಎಸ್.ಟಿ.) ಸೇರಿದವನಿದ್ದು ಆರೋಪಿತರಾದ ಮಾದೇವ ನಾಗಪ್ಪ ನಾಯ್ಕ, ನಾಗೇಶ ನಾರಾಯಣ ನಾಯ್ಕ ಇವರುಗಳು ತಾನು ಹೆಬಳೆಯ ಸಿದ್ಧಿವಿನಾಯಕ ದೇವಸ್ಥಾನದ ಕ್ರಾಸ್ ಬಳಿಯಲ್ಲಿರುವ ರಾಜು ನಾಯ್ಕ ಅವರ ಹೋಟೇಲ್ ಹತ್ತಿರ ನಿಂತಾಗ ಮಾದೇವ ಇವರು ವಾಟ್ಸ್ಯಾಪ್ ಗ್ರೂಪ್‌ನಲ್ಲಿ ಹಾಕಿದ್ದ ಸಂದೇಶಕ್ಕೆ ಸಂಬಂಧ ಪಟ್ಟಂತೆ ಕೇಳಿದಾಗ ತಾನು ಯಾರ ಹೆಸರನ್ನು ಹಾಕಿಲ್ಲ ಎಂದು ಸಮಜಾಯಿಷಿ ನೀಡಿದರೂ ಸಹ ಸ್ಥಳಕ್ಕೆ ನಾಗೇಶ ಅವನನ್ನು ಕರೆಯಿಸಿಕೊಂಡು ಇಬ್ಬರೂ ಸೇರಿ ತನ್ನನ್ನುದ್ದೇಶಿಸಿ ಅವಾಚ್ಯ ಶಬ್ದಗಳಿಂದ ಬೈದಿದ್ದಲ್ಲದೇ ಜಾತಿ ನಿಂದನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ನಾಗೇಶ ಈತನು ತನಗೆ ಕೈಯಿಂದ ಹೊಡೆದು, ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಲ್ಲದೇ ಜೀವ ಬೆದರಿಕೆ ಹಾಕಿದ್ದಾನೆ ಎಂದೂ ತಿಳಿಸಿದ್ದಾರೆ. ಗ್ರಾಮೀಣ ಠಾಣೆಯ ಅಪರಾಧ ವಿಭಾಗದ ಪಿ.ಎಸ್.ಐ. ರತ್ನಾ ಕುರಿ ಅವರು ದೂರನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ ಆಸ್ಟ್ರೇಲಿಯದ ಆರೋನ್ ಫಿಂಚ್
ಬೆಳ್ತಂಗಡಿ: ಉಜಿರೆ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ಎಸ್.ಪಿ. ನೇತೃತ್ವದಲ್ಲಿ ದಾಳಿ
ಮಂಗಳವಾರದ ರಾಶಿ ಭವಿಷ್ಯ: ಈ ರಾಶಿ ಅವರಿಗಿಂದು ಗೃಹ ಆಸ್ತಿ ಸಂಬಂಧ ಚಿಂತೆ ಎದುರಾದೀತು
ಜೋಶಿ ಅವರು ದೇಶಸ್ಥರಲ್ಲ ಅವರು ಮಾಧ್ವ ಸಂಪ್ರದಾಯಕ್ಕೆ ಸೇರಿದವರು: ಅಶೋಕ್ ಹಾರನಹಳ್ಳಿ
ಸ್ಪಿನ್ ಎದುರಿಸುವುದೇ ಕಠಿನ ಸವಾಲು: ಉಸ್ಮಾನ್ ಖ್ವಾಜಾ