Ankola : ಸಿಡಿಲು ಬಡಿದು ಮಹಿಳೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Team Udayavani, Oct 17, 2023, 9:52 PM IST
ಅಂಕೋಲಾ : ತಾಲೂಕಿನಲ್ಲಿ ಸುರಿದ ಭಾರೀ ಗುಡುಗು ಸಹಿತ ಭಾರಿ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು ಮಹಿಳೆಯೋರ್ವಳು ಆಸ್ವಸ್ಥಗೊಂಡ ಘಟನೆ ತಾಲೂಕಿನ ಅಗಸೂರಿನಲ್ಲಿ ನಡೆದಿದೆ.
ಅಗಸೂರು ಗ್ರಾಮದ ಹಿತ್ತಲಗದ್ದೆ ನಿವಾಸಿ ರಂಜಿತಾ ಜಗದೀಶ ಗೌಡ ಇವರೇ ಸಿಡಿಲಿನ ಆಘಾತಕ್ಕೆ ಒಳಗಾದ ಮಹಿಳೆಯಾಗಿದ್ದು ಇವರನ್ನು ಕೂಡಲೇ ಅಂಕೋಲಾ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸೋಮವಾರ ಸಂಜೆ 7.30 ರ ಸುಮಾರಿಗೆ ಇದ್ದಕ್ಕಿದ್ದಂತೆ ಗುಡುಗು ಸಿಡಿಲು ಸಹಿತ ಮಳೆ ಸುರಿಯತೊಡಗಿದ್ದು ಅದೇ ವೇಳೆ ಒಂದೂವರೆ ತಿಂಗಳ ಹಸುಗೂಸಿನೊಂದಿಗೆ ಮನೆಯಲ್ಲಿ ಮಲಗಿದ್ದ ರಂಜಿತಾ ಮನೆಗೇ ಸಿಡಿಲು ಬಡಿದಿದೆ. ಅದೃಷ್ಟವಶಾತ್ ಮಗು ಬಚಾವಾಗಿದ್ದು ಸಿಡಿಲಿನ ಆಘಾತಕ್ಕೆ ರಂಜಿತಾ ಅಸ್ವಸ್ಥಗೊಂಡಿದ್ದಾಳೆ. ಸಿಡಿಲಿಗೆ ಮನೆಯ ಗೋಡೆಯೂ ಬಿರುಕು ಬಿಟ್ಟಿದ್ದು ವಿದ್ಯುತ್ ಉಪಕರಣಗಳು, ಟಿವಿ ಮುಂತಾದವು ಗಳಿಗೆ ಹಾನಿಯಾಗಿದೆ.
ಕಂದಾಯ ನಿರೀಕ್ಷಕ ಭಾರ್ಗವ ನಾಯಕ ಸ್ಥಳ ಪರಿಶೀಲನೆ ನಡೆಸಿದ್ದಾರೆ. ತಹಶೀಲ್ದಾರ ಅಶೋಕ ಭಟ್ ತಾಲೂಕಾಸ್ಪತ್ರೆಗೆ ಭೇಟಿ ನೀಡಿ ಮಹಿಳೆಯ ಆರೋಗ್ಯ ವಿಚಾರಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿ ಎಲ್ಲ ರೀತಿಯ ಸಹಾಯ ಸಹಕಾರ ನೀಡುವ ಭರವಸೆ ನೀಡಿದರು.
ಇದನ್ನೂ ಓದಿ: Rahul Gandhi: ಗೌರಿ ಲಂಕೇಶ್ ಹತ್ಯೆ: ಹೈಕೋರ್ಟ್ಗೆ ರಾಹುಲ್ ಮೇಲ್ಮನವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ