ಅಕಾಡೆಮಿ ಪ್ರಶಸ್ತಿ ಪ್ರಧಾನ ಏ.9 ಕ್ಕೆ

ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಮಂಜಮ್ಮ ಜೋಗತಿ ಮಾಹಿತಿ

Team Udayavani, Mar 21, 2022, 11:39 AM IST

jangamma

ಹೊಸಪೇಟೆ: ಜಾನಪದ ಅಕಾಡೆಮಿ ವತಿಯಿಂದ 2021ನೇ ಸಾಲಿನ ರಾಜ್ಯಮಟ್ಟದ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ, ಏಪ್ರಿಲ್‌ 9 ಮತ್ತು 10ರಂದು ಹೊಸಪೇಟೆಯ ಸಿದ್ದಿಪ್ರಿಯಾ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಮಂಜಮ್ಮ ಜೋಗತಿ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಜಾನಪದ ಅಕಾಡೆಮಿ ಮತ್ತು ವಿಜಯನಗರ ಜಿಲ್ಲಾಡಳಿತದ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಏ. 9ರಂದು ಜಾನಪದ ಸಂಭ್ರಮ, ಏ. 10ರಂದು ಜಾನಪದ ಗೀತಗಾಯನ ನಡೆಯಲಿದೆ. ರಾಜ್ಯದ 30 ಜಿಲ್ಲೆಯ ಜಾನಪದ ಕಲಾವಿದರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ವಿಜಯನಗರ ಜಿಲ್ಲೆಯ ಕಲಾವಿದರಿಗೆ ಪ್ರಶಸ್ತಿ ನೀಡುವುದರ ಬಗ್ಗೆ ಚರ್ಚೆ ನಡೆದಿದೆ. ಇನ್ನೂ ಇಬ್ಬರು ಜಾನಪದ ತಜ್ಞರಿಗೂ ಪ್ರಶಸ್ತಿ ನೀಡಲಾಗುವುದು. ಜಾನಪದ ಕುರಿತು ಪುಸ್ತಕಗಳನ್ನು ಹೊರ ತಂದ ಮೂವರಿಗೆ ಪ್ರಶಸ್ತಿ ವಿತರಿಸಲಾಗುವುದು. ಕಲಾವಿದರಿಗೆ ಮತ್ತು ಪುಸ್ತಕ ಹೊರ ತಂದವರಿಗೆ ತಲಾ 25 ಸಾವಿರ ರು. ಪುರಸ್ಕಾರ ನೀಡಲಾಗುವುದು. ಇನ್ನೂ ಜಾನಪದ ತಜ್ಞರಿಗೆ ತಲಾ 50 ಸಾವಿರ ರೂ.ಪುರಸ್ಕಾರ ನೀಡಲಾಗುವುದು ಎಂದರು.

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್‌ ಕುಮಾರ, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಭಾಗವಹಿಸಲಿದ್ದಾರೆ. ರಾಜ್ಯದ ನಾನಾ ಕಡೆಯಿಂದ ಕಲಾವಿದರು ಆಗಮಿಸಲಿದ್ದಾರೆ.

ಇನ್ನೂ ಗೀತಗಾಯನದಲ್ಲಿ ಕಲ್ಯಾಣ ಕರ್ನಾಟಕದ ಕಲಾವಿದರೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸದೇ ರಾಜ್ಯದ ಜಿಲ್ಲೆಗಳಲ್ಲಿ ಜಾನಪದ ಅಕಾಡೆಮಿ ಪ್ರಶಸ್ತಿ ಸಮಾರಂಭ ನಡೆಸುವ ಉದ್ದೇಶದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಜಯನಗರದಲ್ಲಿ ಜಾನಪದ ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಡೆಸಲು ಅಕಾಡೆಮಿಯ ಸರ್ವ ಸದಸ್ಯರು ಒಪ್ಪಿಗೆ ಸೂಚಿಸಿದ್ದಾರೆ. ಹೊಸ ಜಿಲ್ಲೆಯಲ್ಲಿ ಜಾನಪದ ಸೊಗಡನ್ನು ಪಸರಿಸಲು ಕಾರ್ಯಕ್ರಮ ಅನುಕೂಲವಾಗಲಿದೆ. ಸಚಿವರಾದ ಆನಂದ್‌ ಸಿಂಗ್‌, ಶಶಿಕಲಾ ಜೊಲ್ಲೆ, ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್‌ ಅವರು ಸಹಕಾರ ನೀಡುವುದಾಗಿ ವಾಗ್ಧಾನ ನೀಡಿದ್ದಾರೆ ಎಂದರು.

ಈ ಹಿಂದೆ ಚಾಮರಾಜನಗರದಲ್ಲಿ ಜಾನಪದ ಅಕಾಡೆಮಿ ಪ್ರಶಸ್ತಿ ಸಮಾರಂಭ ನಡೆದಾಗ ಕೆಲವರು ತಮಗೆ ಒಳ್ಳೆಯದು ಆಗಲ್ಲ ಎಂದಿದ್ದರು. ಆದರೆ, ನಾನು ಅಲ್ಲಿ ಕಾರ್ಯಕ್ರಮ ನಡೆಸಿದ ಸ್ವಲ್ಪ ದಿನದಲ್ಲೇ ನನಗೆ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿತು. ಜಾನಪದ ಸೊಗಡನ್ನು ಗ್ರಾಮೀಣ ಭಾಗದಲ್ಲಿ ಪಸರಿಸುವ ಕಾರ್ಯವನ್ನು ಅಕಾಡೆಮಿ ಮಾಡುತ್ತಿದೆ ಎಂದರು. ಜಾನಪದ ಅಕಾಡೆಮಿ ರಜಿಸ್ಟ್ರಾರ್‌ ನಮ್ರತಾ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.