ಮಸಣ ಕಾರ್ಮಿಕರ ಜಾಗೃತಿ ಜಾಥಾ

ಕನಿಷ್ಠ 3,000 ರೂ. ಕೂಲಿ ನೀಡಲು ಆಗ್ರಹ

Team Udayavani, May 13, 2022, 4:17 PM IST

jatha

ಕೂಡ್ಲಿಗಿ: ರಾಜ್ಯ ಮಸಣ ಕಾರ್ಮಿಕರ ಸಂಘದ ವತಿಯಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೂ.8 ರಂದು ಹೊಸಪೇಟೆ ಯಲ್ಲಿ ಜರುಗುವ ಮಸಣ ಕಾರ್ಮಿಕರ ರಾಜ್ಯ ಮಟ್ಟದ ಬೃಹತ್‌ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕಿ ಬಿ.ಮಾಳಮ್ಮ ಮಾತಾನಾಡಿ, ಸಾವಿರಾರು ವರ್ಷಗಳಿಂದ ಬಿಟ್ಟಿ ಚಾಕರಿಯಲ್ಲಿ ತೊಡಗಿರುವ ಕಾರ್ಮಿಕರಿಗೆ ಸರ್ಕಾರ ಯಾವುದೇ ಸವಲತ್ತುಗಳನ್ನು ನೀಡದೆ ಅನ್ಯಾಯ ಮಾಡಿದೆ. ಮಸಣ ಕಾರ್ಮಿಕರ ಲಕ್ಷಾಂತರ ಕುಟುಂಬಗಳಿಗೆ ಬಿಡಿಗಾಸು ನೀಡದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಮಾಡಿವೆ. ಆದ್ದರಿಂದ ಮಸಣ ಕಾರ್ಮಿಕರಿಗೆ ಪ್ರತಿ ಸಾರ್ವಜನಿಕ ಮಸಣಕ್ಕೆ ಒಬ್ಬರಂತೆ, ಮಸಣ ಕಾರ್ಮಿಕರೊಬ್ಬರನ್ನು ಸ್ಥಳಿಯ ಸಂಸ್ಥೆಗಳ ಮಸಣ ನಿರ್ವಾಹಕ ನೌಕರರೆಂದು ಪರಿಗಣಿಸಿ ನೇಮಿಸಿಕೊಳ್ಳಬೇಕು. ಪ್ರತಿ ಕುಣಿ ಅಗೆಯುವ ಮತ್ತು ಮುಚ್ಚುವ ಕೆಲಸವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗವೆಂದು ಪರಿಗಣಿಸಿ, ಕುಣಿ ಅಗೆಯುವ, ಮುಚ್ಚುವ ಕಾರ್ಮಿಕರಿಗೆ ಸ್ಥಳೀಯ ಸಂಸ್ಥೆಗಳ ಮೂಲಕ ಕನಿಷ್ಠ 3,000 ರೂ. ಕೂಲಿ ಪಾವತಿಸಲು ಕ್ರಮ ವಹಿಸಬೇಕು. ಕಾರ್ಮಿಕರಿಗೆ ಸೂಕ್ತ ಪರಿಕರ ಹಾಗೂ ಸೋಪುಗಳನ್ನು ಒದಗಿಸಬೇಕು. ಮಸಣ ಕಾರ್ಮಿಕರಿಗೆ ಭವಿಷ್ಯನಿಧಿ ಯೋಜನೆ ಜಾರಿ ಮಾಡಬೇಕು. ಎಲ್ಲಾ ಮಸಣ ಕಾರ್ಮಿಕರಿಗೆ ತಲಾ ಐದು ಎಕರೆ ಜಮೀನು ಉಚಿತವಾಗಿ ನೀಡಬೇಕು. ಹಿತ್ತಲು ಸಹಿತ ನೀವೇಶನ ಹಾಗೂ ಹತ್ತು ಲಕ್ಷ ರೂ. ಮೌಲ್ಯದ ಮನೆಯನ್ನು ಉಚಿತವಾಗಿ ಒದಗಿಸುವ ಬೇಕು. 45 ವರ್ಷದ ಮಸಣ ಕಾರ್ಮಿಕರಿಗೆ ಮಾಸಿಕ ಸಹಾಯಧನ ಅಥವಾ ಪಿಂಚಣಿ ಕನಿಷ್ಠ 3000 ಸಾವಿರ ರೂ. ನೀಡಬೇಕು ಎನ್ನುವುದು ಸೇರಿದಂತೆ ಇತರೆ ಹಲವು ಹಕ್ಕೊತ್ತಾಯ ಮಂಡಿಸಿದರು.

ತಾಲೂಕು ಸಿಪಿಎಂ ಕಾರ್ಯದರ್ಶಿ ಸಿ. ವಿರೂಪಾಕ್ಷಪ್ಪ, ಸದಸ್ಯರಾದ ಬಿ.ಟಿ. ಗುದ್ದಿ ಚಂದ್ರು, ಗುನ್ನಳ್ಳಿ ರಾಘವೇಂದ್ರ, ಪಿ.ಚಾಂದ್‌ ಬೀ, ದೇವದಾಸಿ ಮಹಿಳಾ ವಿಮೋಚನಾ ಸಂಘಟನೆ ತಾಲೂಕು ಅಧ್ಯಕ್ಷೆ ಕನಕೇರಿ ವೆಂಕಮ್ಮ, ಸಣ್ಣ ಹನುಮಂತಪ್ಪ, ಬಸವರಾಜ್‌, ಹುಡಿಸಲಪ್ಪ, ಹುಲುಗಪ್ಪ, ಸ್ವಾಮಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.