ಹಂಪಿಯಲ್ಲಿ ಬೆಂಕಿ ಅವಘಡ: ಸುಟ್ಟು ಭಸ್ಮವಾದ ಹೋಟೆಲ್

ಸಿಲಿಂಡರ್ ಸ್ಪೋಟಗೊಂಡು ದುರ್ಘಟನೆ ; ದಿಕ್ಕೆಟ್ಟು ಓಡಿದ ಪ್ರವಾಸಿಗರು

Team Udayavani, Oct 28, 2022, 4:40 PM IST

16

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯ ಹೋಟೆಲ್‌ ಒಂದರಲ್ಲಿ ಅಡುಗೆ ಅನಿಲ ಸ್ಪೋಟಗೊಂಡ ಪರಿಣಾಮ ಹೋಟೆಲ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಗುರುವಾರ ರಾತ್ರಿ ಜರುಗಿದ್ದು, ಅದೃಷ್ಠವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಹಂಪಿಯ ಜನತಾ ಪ್ಲಾಟ್‌ನಲ್ಲಿರುವ ಮ್ಯಾಂಗೋ ಟ್ರೀ ಹೋಟೆಲ್‌ನಲ್ಲಿ ಸಿಲಿಂಡರ್‌ ಸ್ಪೋಟಗೊಂಡು ಈ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ದೌಡಾಯಿಸಿ ಬಂದ ಅಗ್ನಿಶಾಮಕ ಸಿಬ್ಬಂದಿಗಳು, ಹೋಟೆಲ್‌ನಲ್ಲಿದ್ದ ಕೆಲ ಸಿಲೆಂಡರ್‌ಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರಿಸಿ, ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ. ಆ ಸಮಯಕ್ಕಾಗಲೇ ಅಡುಗೆ, ಸಾಮಾನು, ಇತರೆ ಪರಿಕರಗಳು ಸೇರಿದಂತೆ ಹೋಟೆಲ್ ಸಂಪೂರ್ಣ ಸುಟ್ಟು ಭಸ್ಮವಾಗಿ ಅವಶೇಷಗಳು ಮಾತ್ರ ಉಳಿದಿದ್ದವು.

ಮೊದಲು ಹೋಟೆಲ್ ಪಕ್ಕದಲ್ಲಿರುವ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಮ್ಯಾಂಗೋ ಟ್ರೀ ಹೋಟೆಲ್, ಅನ್ನಪೂರ್ಣೇಶ್ವರಿ ಛತ್ರಕ್ಕೆ ಬೆಂಕಿ ತಗುಲಿದೆ. ಹೋಟೆಲ್‌ನಲ್ಲಿ ಸಿಲಿಂಡರ್‌ ಸ್ಪೋಟಗೊಳ್ಳುತ್ತಿಂದತೆ ಜನತಾ ಪ್ಲಾಟ್‌ನ ಹೋಟೆಲ್‌ಗಳಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಪ್ರವಾಸಿಗರು ಆತಂಕದಲ್ಲಿ ದಿಕ್ಕೆಟ್ಟು ಓಡಿ ಹೋಗಿ, ತುಂಗ ಭದ್ರಾ ನದಿ ತೀರದಲ್ಲಿ ಆಶ್ರಯ ಪಡೆದಿದ್ದಾರೆ.

ಅಕ್ಕಪ್ಪಕದ ಮನೆಯವರು, ತಮ್ಮ ಮನೆಗಳಿಗೆ ಬೆಂಕಿ ತಗುಲದಿರಲಿ ಎಂದು ಮನೆಯ ಮೇಲಿನ ವಾಟರ್ ಟ್ಯಾಂಕ್‌ಗಳ ನೀರನ್ನು ಮನೆಗಳಿಗೆ ಎರಚಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ಅಕ್ಕಪಕ್ಕ ಮನೆ ಹಾಗೂ ಹೋಟೆಲ್‌ಗಳಿಗೆ ಬೆಂಕಿ ವ್ಯಾಪಿಸಿಕೊಳ್ಳುವುದು ನಿಂತಿದೆ. ಹಂಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಂಪಿಯ ಹೋಟೆಲ್‌ ಒಂದರಲ್ಲಿ ಸಿಲಿಂಡರ್‌ ಸಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಹಾಗೂ ಸ್ಮಾರಕ ಧಕ್ಕೆಯಾಗಿಲ್ಲ. ತನಿಖೆ ಆರಂಭವಾಗಿದೆ. ಅಕ್ರಮವಾಗಿ ಹೋಟೆಲ್ ನಡೆಯುತ್ತಿದ್ದರೆ, ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. –ಪಿ.ಅನಿರುದ್ಧ್ ಶ್ರವಣ್, ಜಿಲ್ಲಾಧಿಕಾರಿಗಳು, ಹೊಸಪೇಟೆ, ವಿಜಯನಗರ

ಹಂಪಿಯಲ್ಲಿ ಅಡುಗೆ ಅನಿಲ ಸ್ಪೋಟಗೊಂಡಿದ್ದು, ಮ್ಯಾಂಗೋ ಟ್ರೀ ಹೋಟೆಲ್, ಬಟ್ಟೆ ಅಂಗಡಿ ಹಾಗೂ ಅನ್ನಪೂರ್ಣೇಶ್ವರಿ ಛತ್ರಕ್ಕೆ ಬೆಂಕಿ ತಗುಲಿದೆ. ಹೋಟೆಲ್ ಸಂಪೂರ್ಣ ಭಸ್ಮವಾಗಿದ್ದು, ಘಟನೆ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. –ಡಾ.ಕೆ.ಅರುಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಹೊಸಪೇಟೆ, ವಿಜಯನಗರ.

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.