ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ; ಹಂಪಿ ಸ್ಮಾರಕಗಳು ಮುಳುಗಡೆ
Team Udayavani, Jul 13, 2022, 1:20 PM IST
ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಹರಿಸಿದ ಪರಿಣಾಮ ವಿಶ್ವವಿಖ್ಯಾತ ಹಂಪಿಯ ತುಂಗಭದ್ರಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತಟದ ಸ್ಮಾರಕಗಳು ಮುಳುಗಡೆಯಾಗಿವೆ.
ಜಲಾಶಯ ಸಂಪೂರ್ಣ ಭರ್ತಿಯಾದ ಹಿನ್ನೆಲೆಯಲ್ಲಿ ಪ್ರಸ್ತುತ 85 ಸಾವಿರ ಕ್ಯೂಸೆಕ್ ಹೆಚ್ಚುವರಿ ನೀರು ನದಿಗೆ ಹರಿಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ವಿರೂಪಾಕ್ಷ ದೇವಾಲಯದ ಹತ್ತಿರ ಹರಿಯುವ ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದೆ. ನದಿ ತೀರದ ವೈದಿಕ ಮಂಟಪ, ಪುರಂದರದಾಸರ ಮಂಟಪ ಸೇರಿದಂತೆ ನದಿ ಅಂಚಿನ ಕೆಲ ಸ್ಮಾರಕಗಳು, ನೀರಿನಲ್ಲಿ ಮುಳುಗಡೆಯಾಗಿವೆ.
ಇದನ್ನೂ ಓದಿ: ನಮ್ಮದು ಕೆರಳಿದ ಸಿಂಹ, ಕಾಂಗ್ರೆಸ್ ನದ್ದು ಮಲಗಿದ ಸಿಂಹ: ಸಿಎಂ ವ್ಯಂಗ್ಯ
ರಾಮಲಕ್ಷ್ಮಣ ಹಾಗೂ ಯಂತ್ರೋದ್ಧಾರಕ ಆಂಜನೇಯ ದೇವಾಲಯಕ್ಕೆ ತೆರಳುವ ಓನಿಕೆ ಕಿಂಡಿ ಮಾರ್ಗ ಸಂಪರ್ಕ ಕಡಿತವಾಗಿದೆ. ನದಿ ತೀರದಲ್ಲಿ ತೀವ್ರ ನಿಗಾವಹಿಸಲಾಗಿದೆ. ನದಿ ನೀರಿಗೆ ಪ್ರವಾಸಿಗರು ಇಳಿಯದಂತೆ ಎಚ್ಚರಿಕೆ ವಹಿಸಲಾಗಿದೆ. ಪೊಲೀಸ್ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ