ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯ

ಕಾರ್ಮಿಕರ ಫೆಡರೇಷನ್‌ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ

Team Udayavani, May 10, 2022, 3:26 PM IST

cttu

ಹೊಸಪೇಟೆ: ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಕಳೆದ 2016ರಲ್ಲಿ ನೋಟು ಅಮ್ಯಾನೀಕರಣದಿಂದ ಸರಕು ಸೇವಾ ತೆರಿಗೆ ನೀತಿಯಿಂದ ದೇಶವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತು. ನಂತರ ಕೊರೊನಾದಿಂದ ಕಾರ್ಮಿಕ ಕ್ಷೇತ್ರ ಮತ್ತಷ್ಟು ಸಂಕಷ್ಟಕ್ಕೆ ಇಳಿಯಿತು. ತೈಲ ಬೆಲೆ ಏರಿಕೆಯಿಂದ ಕಟ್ಟಡ ನಿರ್ಮಾಣದ ಮೇಲೆ ಹಲವು ಸಮಸ್ಯೆಗಳು ಉದ್ಭವವಾದವು. ದೇಶದಲ್ಲಿ ಕಾರ್ಮಿಕ ವಲಯದಲ್ಲಿ ಅಂದಾಜು 10 ಕೋಟಿ ಜನರು ಉದ್ಯೋಗ ಮಾಡುತ್ತಿದ್ದಾರೆ. ಆದರೆ ಕೊರೊನಾದಿಂದ ಆದ ಸಂಕಷ್ಟ ಕೊರೊನಾ ನಂತರವು ದೂರವಾಗಿಲ್ಲ. ರಾಜ್ಯದಲ್ಲಿ ಇನ್ನಷ್ಟು ಬಿಕ್ಕಟ್ಟಿಗೆ ದೂಡಿದೆ. ಬೆಂಗಳೂರಿನಲ್ಲಿ ಹೋರಾಟ ಮಾಡುವ ವೇಳೆ ರಾಜ್ಯ ಸರ್ಕಾರ ಈ ಹಿಂದೆ ವಿವಿಧ ಸೌಲಭ್ಯಗಳನ್ನು ಘೋಷಣೆ ಮಾಡಿತು. ಬಾಕಿ ಇರುವ ಕಾರ್ಮಿಕರ ಅರ್ಜಿಗಳನ್ನು ಇತ್ಯರ್ಥಗೊಳಿಸಲು ಕಚೇರಿಯಲ್ಲಿ ನಡೆದ ಸಭೆಯಲ್ಲಿನ ತೀರ್ಮಾನಗಳನ್ನು ಜಾರಿಗೊಳಿಸಬೇಕು. ಕಾರ್ಮಿಕ ಕಲ್ಯಾಣಕ್ಕಾಗಿ ಸರ್ಕಾರ ಶ್ರಮಿಸಬೇಕಿದೆ ಎಂದು ಒತ್ತಾಯಿಸಿದರು.

ಕಾರ್ಮಿಕರಿಗೆ 3 ಸಾವಿರ ರೂ. ಕೊರೋನಾ ಪರಿಹಾರ ಪಾವತಿಸಬೇಕು. ಫಲಾನುಭವಿ ಕಾರ್ಮಿಕರಿಗೆ ಕೊರೊನಾ ಕಿಟ್‌ ಬದಲು ಅವರ ಖಾತೆಗಳಿಗೆ ಹಣ ವರ್ಗಾವಣೆ ಮಾಡುವಂತೆ ಮನವಿ ಮಾಡಿದರೂ ಕಿಟ್‌ ಕೊಟ್ಟು ಅಕ್ರಮ ನಡೆಸಲಾಗಿದೆ. ಅಕ್ರಮ ನಡೆಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಕೊರೊನಾದಿಂದ ಮೃತಪಟ್ಟ ಕಾರ್ಮಿಕರಿಗೆ ವಿಶೇಷ ಪರಿಹಾರ ನೀಡಿ, ಗುಣಮುಖರಾದವರಿಗೆ ವೈದ್ಯಕೀಯ ವೆಚ್ಚ ಭರಿಸಬೇಕು. ಕಾರ್ಮಿಕ ಇಲಾಖೆಯಿಂದ ಅಕ್ರಮ ನಕಲಿ ಕಾರ್ಮಿಕ ಕಾರ್ಡ್‌ ವಿತರಿಸಲಾಗುತ್ತಿದ್ದು, ಇದನ್ನು ತಡೆದು ಸೂಕ್ತ ಕ್ರಮಕೈಗೊಳ್ಳಬೇಕು. ಕಾರ್ಮಿಕರ ನಿಧಿಯಿಂದ ಕಾರ್ಮಿಕರ ಕಲ್ಯಾಣಕ್ಕಾಗಿ ಬಳಸಬೇಕು ಎಂದು ಆಗ್ರಹಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷ ಜಗನಾಥ, ಕಾರ್ಯದರ್ಶಿ ಎನ್‌. ಯಲ್ಲಾಲಿಂಗ, ಸಿಐಟಿಯುನ ಅಧ್ಯಕ್ಷ ಭಾಸ್ಕರ್‌ ರೆಡ್ಡಿ, ಮುಖಂಡರಾದ ಎಂ.ಗೋಪಾಲ್, ಹೇಮಂತ್‌ ನಾಯಕ, ಶಂಕರ್‌, ಕರಿಯಣ್ಣ ಮತ್ತಿತರರಿದ್ದರು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.