ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ

ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ

Team Udayavani, May 21, 2022, 3:55 PM IST

protest

ಕೂಡ್ಲಿಗಿ: ಜನಸಂಖ್ಯೆ ಆಧಾರಿತವಾಗಿ ಎಸ್ಸಿ, ಎಸ್ಟಿ ಮೀಸಲಾತಿಯನ್ನು ಹೆಚ್ಚು ಮಾಡುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಅಖೀಲ ಕರ್ನಾಟಕ ವಾಲ್ಮೀಕಿ ಮಹಾಸಭಾದ ತಾಲೂಕು ಅಧ್ಯಕ್ಷ ಎಸ್.ಸುರೇಶ್‌ ತಿಳಿಸಿದರು.

ಪಟ್ಟಣದ ಮದಕರಿ ವೃತ್ತದಲ್ಲಿ ಶುಕ್ರವಾರ ಎಸ್ಸಿ, ಎಸ್ಟಿಗೆ ಮೀಸಲಾತಿ ನೀಡಬೇಕು ಎನ್ನುವ ರಾಜ್ಯವ್ಯಾಪಿ ಕರೆಗೆ ಪಟ್ಟಣ ಬಂದ್‌ ಮಾಡುವ ಮೂಲಕ ಮಾತನಾಡಿ, ಅವರು ಸಂವಿಧಾನಬದ್ಧ ಹಕ್ಕಿಗಾಗಿ, ಬಾಬಾಸಾಹೇಬ್‌ ಅಂಬೇಡ್ಕರ್‌ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಎಸ್ಸಿ,ಎಸ್ಟಿ ಸಮುದಾಯದವರು ಒಗ್ಗಟ್ಟಾಗಿ ಹೋರಾಟ ನಡೆಸುತ್ತಿದ್ದು, ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌ ಆಯೋಗವು 3ರಿಂದ 7.5% ಗೆ ಹೆಚ್ಚಿಸಬೇಕು ಎಂದು ವರದಿ ನೀಡಿದರು.

ಸರ್ಕಾರ ಹಿಂದುಳಿದ ಜನಾಂಗಕ್ಕೆ ಮೋಸ ಮಾಡುತ್ತಿದೆ. ಸಮಾಜದ ಪ್ರಸನ್ನಾನಂದ ಸ್ವಾಮಿಗಳು ಮೀಸಲಾತಿ ನೀಡುವಂತೆ ಪಾದಯಾತ್ರೆ ಮಾಡಿ, ಈಗಾಗಲೇ ಫ್ರೀಡಂಪಾರ್ಕ್ ನಲ್ಲಿ ಸತ್ಯಾಗ್ರಹ ಮಾಡುತ್ತಿದ್ದಾರೆ. ಸುಮಾರು ಐವತ್ತು ಲಕ್ಷ ಜನಸಂಖ್ಯೆ ಹೊಂದಿರುವ ತಳ ಸಮುದಾಯಕ್ಕೆ ಹಕ್ಕುಬದ್ಧ ಮೀಸಲಾತಿ ನೀಡಲೇಬೇಕು ಎನ್ನುವ ಹಕ್ಕೊತ್ತಾಯವನ್ನು ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದರು.

ಇದಕ್ಕೂ ಮುನ್ನ ಪಟ್ಟಣದ ವಾಲ್ಮೀಕಿ ದೇವಸ್ಥಾನದಲ್ಲಿ ವಾಲ್ಮೀಕಿ ಪ್ರತಿಮೆಗೆ ಪೂಜೆ ಸಲ್ಲಿಸಿ ಹೊರಟ ಪ್ರತಿಭಟನಾ ಮೆರವಣಿಗೆ, ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ, ಅಲ್ಲಿಂದ ಮದಕರಿ ವೃತ್ತಕ್ಕೆ ಬಂದು ಸರ್ಕಾರದ ನೀತಿ ವಿರುದ್ಧ ಪ್ರತಿಭಟಿಸಿ ತಹಶೀಲ್ದಾರ್‌ ಟಿ.ಜಗದೀಶ್‌ ಅವರಿಗೆ ಬೇಡಿಕೆಗಳ ಹಕ್ಕೊತ್ತಾಯದ ಮನವಿ ಸಲ್ಲಿಸಿದರು.

ಮೀಸಲಾತಿ ಹೋರಾಟ ಬೆಂಬಲಿಸಿ ಪಟ್ಟಣ ಸಂಪೂರ್ಣ ಬಂದ್‌ ಮಾಡಲಾಗಿತ್ತು. ಅಖೀಲ ಕರ್ನಾಟಕ ವಾಲ್ಮೀಕಿ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗಮಣಿ ಜಿಂಕಾಲ್‌, ಸಮಾಜದ ಮುಖಂಡರಾದ ಕಾವಲಿ ಶಿವಪ್ಪನಾಯಕ, ಮಂಜುನಾಥ, ಪಿ. ಚಂದ್ರು, ಸಿ.ಬಿ. ಜಯರಾಮ್‌ ನಾಯಕ, ಗುನ್ನಳ್ಳಿ ರಾಘವೇಂದ್ರ, ಬಿ.ಕೆ. ರಾಘವೇಂದ್ರ, ಅಂಬೇಡ್ಕರ್‌ ಸಂಘದ ತಾಲೂಕು ಅಧ್ಯಕ್ಷ ಎಚ್‌. ಕೃಷ್ಣಪ್ಪ, ಚಲವಾದಿ ಮಹಾಸಭಾದ ಹಿರೆಕುಂಬಳಗುಂಟೆ ಉಮೇಶ್‌, ಬಂಡೆ ರಾಘವೇಂದ್ರ, ಹೊನ್ನೇಶ್‌, ಬಿ. ಶ್ರೀಕಾಂತ್‌, ಎಂ.ಭರಮಣ್ಣ, ದೇವರಮನಿ ಮಹೇಶ್‌, ಪಾಪನಾಯಕ, ಮಯೂರಮಂಜು, ಡಿ.ಎಚ್‌. ದುರುಗೇಶ್‌, ಎಸ್‌. ದುರುಗೇಶ್, ವಿ.ಪ್ರಕಾಶ್,ಬಾಣದ ಮೂರ್ತಿ, ಶಂಕರ್‌, ಶಶಾಂಕ್‌ ಇದ್ದರು

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.