ಮಳೆ ಬಂದರೆ ಮನೆಯೊಳಗೆಲ್ಲ ರಾಡಿ ನೀರು

ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಮನೆಗಳಿಗೆ ನುಗ್ಗುತ್ತಿದೆ ನೀರು ‌

Team Udayavani, May 15, 2022, 3:48 PM IST

kudligi

ಕೂಡ್ಲಿಗಿ: ತಾಲೂಕಿನ ಶಿವಪುರದಲ್ಲಿ ಅಭಿವೃದ್ಧಿ ಮರೀಚಿಕೆ ಎನ್ನುವಂತಾಗಿದೆ. ಸುರಿದ ಮಳೆಗೆ ಮನೆಗ ಳಿಗೆ ನೀರು ನುಗ್ಗಿ ನಿವಾಸಿಗಳು ತೊಂದರೆಪಡು ವಂತಾಗಿದೆ. ಗ್ರಾಮದಲ್ಲಿ ಚರಂಡಿ ಒಡೆದು ಆಗಾಗ ಸಾರ್ವಜನಿಕ ರಸ್ತೆಗಳಲ್ಲಿ ಹರಿದು ಅಸಹ್ಯ ಹುಟ್ಟಿಸುವುದು ಈಗ ಸಾಮಾನ್ಯವಾಗಿದೆ. ಮನೆಗೆ ಮಳೆನೀರು ಬಂದರೆ  ಸಾಕಷ್ಟು ನಷ್ಟ ಸಂಭವಿಸುತ್ತದೆ.

ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಮೇಲಿಂದ ಮೇಲೆ ಇಲ್ಲಿ ಸಮಸ್ಯೆ ಆಗುತ್ತಿದೆ. ವೈಜ್ಞಾನಿಕವಾಗಿ ಚರಂಡಿಗಳನ್ನು ನಿರ್ಮಿಸಿ, ಅತಿಕ್ರಮಣವನ್ನು ತೆರವುಗೊಳಿಸಿ, ನೀರು ಸರಾಗವಾಗಿ ಹರಿದು ಹೋಗಲು ಅವಕಾಶ ಮಾಡಿಕೊಡಬೇಕು. ಶಿವಪುರ ಗ್ರಾಮದ ದುಃಸ್ಥಿತಿಯನ್ನು ಬರೀ ಪರಿಶೀಲಿಸಿ ಹೋದರೆ ಯಾವುದೇ ಪರಿಹಾರ ದೊರಕುವುದಿಲ್ಲ.

ಸತತ ಮೂರು ತಾಸು ರಸ್ತೆ ಸಂಚಾರ ಬಂದ್‌ ಆಗಿತ್ತು. ಹೊಳೆಯಂತೆ ಹರಿದ ನೀರು ಮುಂದೆ ಹೋಗದೆ ಮನೆಗಳತ್ತ ನುಗ್ಗುತ್ತಿತ್ತು. ನಿಂತ ನೀರಿನಿಂದ ಸೊಳ್ಳೆಗಳ ಕಾಟ ಹೆಚ್ಚಾಗಿ ಕಾಯಿಲೆಗಳಿಗೆ ಒಳಗಾಗಗಬೇಕಾಗಿದೆ ಎಂದು ಶಿವಪುರ ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಈ ಸಮಸ್ಯೆ ಬಗ್ಗೆ ಅರಿವು ಇದೆ. ಈ ರಸ್ತೆಯಲ್ಲಿ ಓಡಾಡುತ್ತಿರುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ರಸ್ತೆ ಮತ್ತು ನೀರು ಗೊತ್ತಾಗದೆ ಜನ ಬೀಳುವ ಸಂಭವ ಕೂಡಾ ಇದೆ. ನೀರು ಸರಾಗವಾಗಿ ಹೋಗಲು ಚರಂಡಿ ನಿರ್ಮಾಣ ಮಾಡುತ್ತಾರೆ. ಆದರೆ ಚರಂಡಿಯ ತ್ಯಾಜ್ಯ ನೀರು ರಸ್ತೆಯ ಮೇಲೆ ಬರುತ್ತದೆ. ಪಕ್ಕದಲ್ಲಿಯೇ ವಿದ್ಯುತ್‌ ಕಂಬಗಳು ಇವೆ. ಅವುಗಳು ಜನರ ಮೇಲೆ ಬಿದ್ದರೆ ಯಾರು ಹೊಣೆ ಎಂದು ಗುರುಮೂರ್ತಿ ಶೆಟ್ರಾ ಮತ್ತು ಸಿದ್ದಲಿಂಗಪ್ಪ ಪ್ರಶ್ನಿಸುತ್ತಾರೆ. ಒಮ್ಮೆ ಮಳೆ ಬಂದರೆ ಸಾಕು ನೀರು ನಿಂತು ಮೂರು ತಾಸು ರಸ್ತೆ ಬಂದ್‌ ಆಗುತ್ತದೆ. ನೀರು ಎಲ್ಲ ಹರಿದು ಹೋದ ನಂತರ ಸಂಚಾರ ಆರಂಭವಾಗುತ್ತದೆ. ಆದ್ದರಿಂದ ಗ್ರಾಮ ಪಂಚಾಯಿತಿಯವರು ಇತ್ತ ಕಡೆ ಗಮನಹರಿಸಿ ಶೀಘ್ರದಲ್ಲಿ ಕಾಮಗಾರಿ ಕೈಗೊಂಡು ನಿವಾಸಿಗಳಲ್ಲಿ ನೆಮ್ಮದಿ ಮೂಡಿಸಬೇಕು ಎನ್ನುತ್ತಾರೆ ಸ್ಥಳೀಯರು.

ಶಿವಪುರ ಮತ್ತು ಹೊಸಹಳ್ಳಿ ಎರಡು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ, ತರಾತುರಿಯಲ್ಲಿ ಮಾಡಿರುವುದರಿಂದ ರಸ್ತೆ ಮೇಲೆ ಬೀಳುವ ಮಳೆ ನೀರು ನೇರವಾಗಿ ಚರಂಡಿ ಬಂದು ತುಂಬಿ ಹಳ್ಳವಾಗಿ ಮಾರ್ಪಟ್ಟು ಗ್ರಾಮದಲ್ಲಿ ವಾಸಿಸುವವರ ಮನೆಗಳಿಗೆ ಚರಂಡಿ ನೀರು ಮತ್ತು ಮಳೆಯ ನೀರು ನುಗ್ಗುತ್ತವೆ. ಇದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಹಲವು ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿ ಇತ್ತ ಗಮನಹರಿಸಬೇಕು. –ಗುಳಿಗಿ ವಿರೇಶ, ತಾಲೂಕು ಪಂಚಾಯಿತಿ ನಾಮನಿರ್ದೇಶಿತ ಸದಸ್ಯ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.