ಅಬ್ಬರಿಸುತ್ತಿರುವ ಡೋಣಿ ನದಿ-ತತ್ತರಿಸುತ್ತಿದೆ ರೈತನ ಎದಿ

ಪ್ರವಾಹಕ್ಕೆ ಕೊಚ್ಚಿಕೊಂಡು ಹೋದರೂ ಬದುಕುಳಿದ ಇಬ್ಬರು ಯುವಕರು

Team Udayavani, Oct 21, 2019, 10:45 AM IST

21-October-6

ವಿಜಯಪುರ/ತಾಳಿಕೋಟೆ: ಸತತವಾಗಿ ಸುರಿಯುತ್ತಿರುವ ಮಳೆ ಜಿಲ್ಲೆಯ ಮಧ್ಯದಲ್ಲಿ ಹರಿಯುವ ಡೋಣಿ ನದಿಯನ್ನು ಅಬ್ಬರಿಸುವಂತೆ ಮಾಡಿದೆ. ಪರಿಣಾಮ ನದಿ ತೀರದ ಜಮೀನುಗಳಿಗೆ ನುಗ್ಗಿರುವ ನೀರು ಅನ್ನದಾತರನ್ನು ಎದೆ ಒಡೆದು ನಡುಗುವಂತೆ ಮಾಡಿದೆ. ಇದರ ಮಧ್ಯೆ ಡೋಣಿ ನದಿಯ ಕೆಳ ಹಂತದ ಸೇತುವೆ ಮೇಲೆ ಬೈಕ್‌ನಲ್ಲಿ ಹೊರಟಿದ್ದ ಇಬ್ಬರು ಯುವಕರು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದರೂ ಅದೃಷ್ಟವಶಾತ್‌ ಇಬ್ಬರನ್ನೂ ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಈ ಮಧ್ಯೆ ಡೋಣಿ ನದಿ ತುಂಬಿ ಹರಿಯುತ್ತಿದ್ದು ತಾಳಿಕೋಟೆ ತಾಲೂಕಿನ ಕಲ್ಲದೇವನಹಳ್ಳಿ ಬಳಿ ನೆಲಮಟ್ಟದ ಸೇತುವೆ ಮೇಲೆ ಪ್ರವಾಹದ ನೀರು ಹರಿಯುತ್ತಿದ್ದ ವೇಳೆ ಬೈಕ್‌ನಲ್ಲಿ ಹೊರಟಿದ್ದ ಇಬ್ಬರು ಇಬ್ಬರು ಯುವಕರು ಕೊಚ್ಚಿಕೊಂಡು ಹೋಗಿದ್ದರು.

ಅದರಲ್ಲಿ ಓರ್ವ ಯುವಕ ಈಜಿ ದಡ ಸೇರಿದ್ದರೆ, ಇನ್ನೋರ್ವ ಯುವಕ ಬೇಲಿ ಸರೆಯಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದಾಗ ಅಗ್ನಿ ಶಾಮಕ ಸಿಬ್ಬಂದಿ ರಕ್ಷಿಸಿದೆ. ಆದರೆ ಈ ಇಬ್ಬರು ಯುವಕರು ಚಲಾಯಿಸುತ್ತಿದ್ದ ಬೈಕ್‌ಗಳು ಮಾತ್ರ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿವೆ. ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ಕಳೆದ ಎರಡು ದಿನಗಳಿಂದ ತುಂಬಿ ಹರಿಯುತ್ತಿದ್ದ ಡೋಣಿ ನದಿ ಇದೀಗ ಪ್ರವಾಹ ಸೃಷ್ಟಿಸಿದೆ. ಸತತ ಮಳೆಯಿಂದ ಅದರಲ್ಲೂ ಶನಿವಾರ-ರವಿವಾರ ಸುರಿದ ಸತತ ಮಳೆಗೆ ಡೋಣಿ ನದಿಯಲ್ಲಿ ಇನ್ನೂ ಹೆಚ್ಚಿನ ಹರಿವು ಉಂಟು ಮಾಡಿದ್ದು, ನದಿ ಪಾತ್ರದ ಗ್ರಾಮಗಳ ಜಮೀನುಗಳಿಗೆ ನುಗ್ಗಿ, ಬೆಳೆ ಹಾಳು ಮಾಡಿದೆ.

ಡೋಣಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ತೀರ ಪ್ರದೇಶದ ಹಳ್ಳಿಗಳ ಜನರು ನದಿ ಪಾತ್ರಕ್ಕೆ ಹೋಗದಂತೆ ಪೊಲೀಸರು ಹಗ್ಗಗಳನ್ನು ಕಟ್ಟಿ ನಿರ್ಬಂಧ ಹೇರಿದ್ದಾರೆ. ಜೊತೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಹ ಪರಿಸ್ಥಿತಿ ಇರುವ ಹಳ್ಳಿಗಳಲ್ಲಿ ನದಿ ತೀರದಲ್ಲಿ ಪೊಲೀಸ್‌ ಕಾವಲು ಹಾಕಿದೆ.

ಮತ್ತೊಂದೆಡೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಡೋಣಿ ನದಿ ಪಾತ್ರದ ವಿವಿಧ ಗ್ರಾಮಗಳಲ್ಲಿ ಪೊಲೀಸರು ಎಚ್ಚರಿಕೆ ನೀಡಲು ಆರಂಭಿಸಿದ್ದಾರೆ. ಪ್ರವಾಹದ ನೀರು ವಿವಿಧ ಸಾತಿಹಾಳ ಸೇರಿದಂತೆ ಕೆಳ ಹಂತದ ಸೇತುವೆಗಳನ್ನು ಮುಳುಗಿಸಿದ್ದು, ವಿವಿಧ ಹಳ್ಳಿಗಳನ್ನು ಸಂಪರ್ಕ ವ್ಯವಸ್ಥೆಗೆ ಧಕ್ಕೆ ತಂದಿದೆ.

ಡೋಣಿ ನದಿ ತೀರದಲ್ಲಿರುವ ಬಬಲೇಶ್ವರ ತಾಲೂಕಿನ ಹಲವು ಹಳ್ಳಿಗಳು, ಬಸವನಬಾಗೇವಾಡಿ ತಾಲೂಕಿನ ನೇಗಿನಾಳ, ಉಕ್ಕಲಿ, ಡೋಣೂರು, ಸಿಂಧಗೇರಿ, ದೇವರಹಿಪ್ಪರಗಿ ತಾಲೂಕಿನ ನಾಗರಾಳ, ಕಡಕೋಳ, ಸಾತಿಹಾಳ, ಯಾಳವಾರ, ಭೈರವಾಡಗಿ, ತಾಳಿಕೋಟೆ ತಾಲೂಕಿನ ಹಡಗಿನಾಳ, ಹರನಾಳ,
ಕಲ್ಲದೇವರಹಳ್ಳಿ, ಹಡಗಿನಾಳ ಸೇರಿದಂತೆ ಜಿಲ್ಲೆಯಲ್ಲಿನ ಡೋಣಿ ನದಿ ತೀರದಲ್ಲಿರುವ ವಿವಿಧ ಗ್ರಾಮಗಳ ಸಾವಿರಾರು ಎಕರೆ ಜಮೀನಿಗೆ ನೀರು ನುಗ್ಗಿ ರೈತರು ಬೆಳೆದಿದ್ದ ಕೋಟ್ಯಂತರ ರೂ. ಮೌಲ್ಯದ ಬೆಳೆ ಹಾಳು ಮಾಡಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.