ಅಪಘಾತ ವೇಳೆ ಪ್ರಥಮ ಚಿಕಿತ್ಸೆ ನೀಡಿದವನೇ ಆಪ್ತರಕ್ಷಕ

ವಿಕೋಪ ನಿರ್ವಹಣೆ ಕ್ರಿಯಾ ಯೋಜನೆ ಪರಿಷ್ಕರಣೆ ಕಾರ್ಯಾಗಾರ

Team Udayavani, Jul 26, 2019, 1:09 PM IST

26-July-24

ವಿಜಯಪುರ: ಪ್ರಕೃತಿ ವಿಕೋಪ ಹಾಗೂ ಮಾನವ ನಿರ್ಮಿತ ಅವಘಡದಲ್ಲಿ ಗಾಯಗೊಂಡ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಸಂಕಷ್ಟದ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡಿದವನೇ ಆಪ್ತ ರಕ್ಷಕ ಎಂದು ನಿವೃತ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಕರ್ಪೂರಮಠ ಹೇಳಿದರು.

ನಗರದ ಟಕ್ಕೆಯಲ್ಲಿರುವ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಜಿಲ್ಲಾಡಳಿತ, ತರಬೇತಿ ಸಂಸ್ಥೆ ಮೈಸೂರು ಇವರ ಸಹಯೋಗದೊಂದಿಗೆ ವಿವಿಧ ಸರ್ಕಾರಿ ಇಲಾಖೆ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ವಿಕೋಪ ನಿರ್ವಹಣೆ ಕ್ರಿಯಾ ಯೋಜನೆ ಪರಿಷ್ಕರಣೆ ಹಾಗೂ ತಯಾರಿಕೆ ಕುರಿತ ಕಾರ್ಯಾಗಾರದಲ್ಲಿ ‘ದುರಂತ ಸಂದರ್ಭದಲ್ಲಿ ಪ್ರಥಮ ಸ್ಪಂದನೆ ಅಥವಾ ಪ್ರಥಮ ಚಿಕಿತ್ಸೆ ಮಹತ್ವ’ ಕುರಿತು ಉಪನ್ಯಾಸ ನೀಡಿದ ಅವರು, ಯಾವುದೇ ವ್ಯಕ್ತಿ ಅವಘಡ ಸಂಭವಿಸಿ, ಗಾಯಗೊಂಡಾಗ ಅವರಿಗೆ ಸೂಕ್ತ ರೀತಿಯಲ್ಲಿ ಪ್ರಥಮ ಚಿಕಿತ್ಸೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಇದಕ್ಕಾಗಿ ಯಾವುದೇ ಪೊಲೀಸ್‌, ನ್ಯಾಯಾಲಯ ಎಂಬ ಭೀತಿಯಿಂದ ಹೊರಬಂದು ಮಾನವೀಯತೆ ನೆಲೆಯಲ್ಲಿ ಸಹಾಯಕ್ಕೆ ಮುಂದಾಗಬೇಕು ಎಂದು ಹೇಳಿದರು.

ಪ್ರಸ್ತುತ ದಿನಗಳಲ್ಲಿ ಯಾವುದೇ ಅವಘಡ ಸಂಭವಿಸಿದಾಗ ಗಾಯಾಗಳುಗಳ ಸಹಾಯಕ್ಕೆ ಸ್ಪಂದಿಸುವ ಬದಲು, ವಿಡಿಯೋ ಚಿತ್ರೀಕರಣ ಮಾಡುವುದು, ಛಾಯಾಚಿತ್ರ ತೆಗೆಯುವುದು ಮುಂತಾದ ಅನಗತ್ಯ ಚಟುವಟಿಕೆಯಲ್ಲಿ ತೊಡಗುವುದು ಸರ್ವೆ ಸಾಮಾನ್ಯವಾಗಿದೆ. ಇಂತಹ ಮನೋಭಾವನೆಗಳಿಂದ ಹೊರಬಂದು ಸಾಮಾಜಿಕ ಕಳಕಳಿಯಿಂದ ಗಾಯಾಳುವಿನ ಸೂಕ್ತ ಚಿಕಿತ್ಸೆ ಮುಂದಾಗುವಂತೆ ಅವರು ಕರೆ ನೀಡಿದರು.

ವಿಕೋಪ ನಿರ್ವಹಣಾ ಸಂದರ್ಭದಲ್ಲಿ ಸಮೂಹ ಚಿಕಿತ್ಸಾ ವಿಧಾನದ ಕುರಿತು ಉಪನ್ಯಾಸ ನೀಡಿದ ಜಿಲ್ಲಾಸ್ಪತ್ರೆಯ ಮೈಕ್ರೋ ಬಯೋಲಾಜಿಸ್ಟ್‌ ಡಾ| ಚೆನ್ನಮ್ಮ ಮಾತನಾಡಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸರಿಯಾದ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲಾಡಳಿತದ ಮುಂದಾಳತ್ವದಲ್ಲಿ ಎಲ್ಲ ಇಲಾಖೆಗಳು ಒಟ್ಟುಗೂಡಿ ವಿಕೋಪ ನಿರ್ವಹಣೆ ಕಾರ್ಯದಲ್ಲಿ ಮುಂದಾಗಬೇಕು ಎಂದು ಹೇಳಿದರು.

ಪ್ರಕೃತಿ ವಿಕೋಪ ನಿರ್ವಹಣೆಯ ಸಂಘಟನಾ ಕಾರ್ಯವಾಗಿದೆ. ಇಂತಹ ಸಂದರ್ಭದಲ್ಲಿ ಆಯಾ ಇಲಾಖೆಗಳಿಗೆ ಸಂಬಂಧಿಸಿದಂತೆ ಮಾನವ ಅಭಿವೃದ್ಧಿಗೆ ತೆಗೆದುಕೊಳ್ಳಬಹುದಾದ ಕ್ರಿಯಾ ಯೋಜನೆಗಳೂ ಹೆಚ್ಚು ಸಹಕಾರಿಯಾಗುತ್ತವೆ. ವಿಪತ್ತು ನಿರ್ವಹಣೆ ಸಂದರ್ಭದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಬರಗಾಲ ವಿಪತ್ತು ನಿರ್ವಹಣೆಯಲ್ಲಿ ಎಲ್ಲಾ ಇಲಾಖೆಗಳ ಪಾತ್ರ ಬಹು ಮುಖ್ಯವಾಗಿವೆ ಎಂದರು.

ವಿಪತ್ತು ಸಂಭವಿಸುವ ಮುನ್ನ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ವಿವಿಧ ಸಂಘ-ಸಂಸ್ಥೆಗಳು ಒಟ್ಟುಗೂಡಿ ಜನರಕ್ಷಣೆಗಾಗಿ ಸ್ಥಳಾಂತರಿಸುವುದು, ಗಂಜಿ ಕೇಂದ್ರ ತೆರೆಯುವುದು, ಮೂಲ ಸೌಕರ್ಯ ಒದಗಿಸುವುದು, ಮಾಧ್ಯಮಗಳಲ್ಲಿ ಬಿತ್ತರಿಸುವುದು ಮುಂತಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ವಿಪತ್ತು ನಿರ್ವಹಣಾ ತಜ್ಞ ರಾಕೇಶ ಜೈನಾಪುರ ಮಾತನಾಡಿ, ವಿಪತ್ತು ನಿರ್ವಹಣಾ ಕಾಯ್ದೆ 2005 ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿದರು ಹಾಗೂ ಕ್ಲೈಮೆಟ್ ರಿಯಾಕ್ಷನ್‌ ಫಂಡ್‌ ಇದರ ಅಡಿಯಲ್ಲಿ ಜಿಲ್ಲಾಡಳಿತದಿಂದ ವಿತರಣೆಯಾಗುವ ಅನುದಾನ ಬಗ್ಗೆ ಸವಿಸ್ತಾರವಾಗಿ ತಿಳಿಸಿದ ಅವರು, ವಿಪತ್ತು ನಿರ್ವಹಣೆ ಸಂಬಂಧಿಸಿದಂತೆ ಪರಿಹಾರಕ್ಕಾಗಿ 1077 ಸಂಖ್ಯೆಗೆ ಉಚಿತ ಕರೆ ಮಾಡಬಹುದಾಗಿದೆ ಎಂದು ಹೇಳಿದರು.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಂಗನಾಥ ಜಿಲ್ಲಾ ವಿಕೋಪ ನಿರ್ವಹಣಾ ಯೋಜನೆ, ಅಪಾಯ, ನಷ್ಟ ದುರ್ಬಲತೆ, ಸಾಮರ್ಥ್ಯಗಳ ವಿಶ್ಲೇಷಣೆ, ಪೂರ್ವ ಸಿದ್ಧತೆ, ಸ್ಪಂದನಾ ಯೋಜನೆ ತಯಾರಿಕೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಉಪಪ್ರಾಚಾರ್ಯ ಎಂ.ಎಸ್‌. ಪಾಟೀಲ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.