ಮೋಸದ ಮಾತಿಗೆ ಮರುಳಾಗಬೇಡಿ: ದೇವೇಗೌಡ

Team Udayavani, Apr 20, 2019, 1:13 PM IST

20-April-16

ವಿಜಯಪುರ: ನಗರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಡಾ| ಸುನಿತಾ ಚವ್ಹಾಣ ಪರ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮಾತನಾಡಿದರು.

ವಿಜಯಪುರ: ಪ್ರಧಾನಿ ಮೋದಿ ಸರ್ವಾಧಿ ಕಾರಿ ಮನೋಭಾವದ ವ್ಯಕ್ತಿ. ಇವರ ವರ್ತನೆಯಿಂದ ಬಿಜೆಪಿ ಕಟ್ಟುವಲ್ಲಿ ಶ್ರಮಿಸಿದ ಅಡ್ವಾಣಿ ಅವರೇ ಅತ್ಯಂತ ಅವಮಾನಕರ ರೀತಿಯಲ್ಲಿ ರಾಜಕೀಯ ನಿವೃತ್ತಿ ಪಡೆಯುವಂತಾಯಿತು.

ಹೀಗಾಗಿ ಇವರ ಮೋಸದ ಮಾತಿಗೆ ಯಾರೂ ಮರುಳಾಗಬಾರದು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಹೇಳಿದರು.

ಶುಕ್ರವಾರ ರಾತ್ರಿ ನಗರದ ದರಬಾರ್‌ ಹೈಸ್ಕೂಲ್‌ ಮೈದಾನದಲ್ಲಿ ಜೆಡಿಎಸ್‌ ಅಭ್ಯರ್ಥಿ ಡಾ| ಸುನೀತಾ ಚವ್ಹಾಣ ಪರ ಪ್ರಚಾರಕ್ಕಾಗಿ ಹಮ್ಮಿಕೊಂಡಿದ್ದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಪಕ್ಷಗಳ ಬಹಿರಂಗ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಅಡ್ವಾಣಿ ಇಲ್ಲದಿದ್ದರೆ ಮೋದಿ ಅವರು ಮುಖ್ಯಮಂತ್ರಿಯೇ ಆಗುತ್ತಿರಲಿಲ್ಲ. ಗೋದ್ರಾ ಘಟನೆಗೆ ಸಂಬಂ ಧಿಸಿದಂತೆ ರಾಜಧರ್ಮ ಪಾಲನೆ ಮಾಡಿಲ್ಲ ಎಂದು ಮೋದಿ ಅವರ ಕಾರ್ಯವೈಖರಿಯನ್ನು ಅಟಲ್‌ಬಿಹಾರಿ ವಾಜಪೇಯಿ ಅವರೇ ಖಂಡಿಸಿದ್ದರು. ಆದರೂ ಸಹ ಮೋದಿ ಅವರ ಬೆನ್ನಿಗೆ ನಿಂತು ಅವರನ್ನು ಮುಂದೆ ಕರೆದುಕೊಂಡು ಹೊಗಿದ್ದು ಅಡ್ವಾಣಿ. ಆದರೆ ಈಗ ಅದೇ ಮೋದಿ ಅಡ್ವಾಣಿ ಅವರನ್ನು ಮೂಲೆಗೆ ಕಳುಹಿಸಿದ್ದಾರೆ ಎಂದರು.

ಯುವಕರು, ಬುದ್ಧಿವಂತರು, ಮೋದಿ ಮಾತುಗಳಿಗೆ ತಕ್ಷಣ ಮೋಸ
ಹೋಗುತ್ತಾರೆ. ಹೀಗಾಗಿ ಇನ್ನಾದರೂ ಮೋದಿ ಬಣ್ಣದ ಮಾತುಗಳಿಂದ ಮರುಳಾಗಬೇಡಿ. ಸರ್ವಾಧಿ ಕಾರಿ ಮನೋಭಾವದ ನಡೆಯಲ್ಲಿ ಏಕ ಚಕ್ರಾಧಿಪತಿಯಂತೆ ವರ್ತಿಸುತ್ತಿರುವ ಮೋದಿ ನಡೆ ದೇಶದ ಹಿತದೃಷ್ಟಿಯಿಂದ ಅತ್ಯಂತ ಅಪಾಯಕಾರಿ ಎಂದು
ಎಚ್ಚರಿಸಿದರು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿ ಕುಮಾರಸ್ವಾಮಿ ಅವರನ್ನು ಸಿಎಂ ಮಾಡಲು ಕಾಂಗ್ರೆಸ್‌ ವರಿಷ್ಠರು ಪ್ರಸ್ತಾಪ ಮಾಡಿದರು. ಆದರೆ ನಾನು ರಾಜ್ಯದಲ್ಲಿ ಸರ್ಕಾರ ರಚನೆ ಸಂದರ್ಭದಲ್ಲಿ ನಮ್ಮ ಪಕ್ಷದಿಂದ 37 ಜನ ಶಾಸಕರು ಆಯ್ಕೆಯಾಗಿದ್ದೇವೆ, ನೀವು ಹೆಚ್ಚಿನ ಸ್ಥಾನ ಗೆದ್ದೀದ್ದಿರಿ. ಕುಮಾರಸ್ವಾಮಿ ಅವರಿಗೆ ಸಿಎಂ ಸ್ಥಾನ ಬೇಡ ಎಂದೆ. ಆದರೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂ ಧಿ ಹಾಗೂ ಸೋನಿಯಾ ಗಾಂಧಿ  ಅವರು ದೂರದೃಷ್ಟಿಯಿಂದ ಕುಮಾರಸ್ವಾಮಿ ಅವರೇ ಸಿಎಂ ಆಗಲಿ ಎಂದು ಆಶಯ ಹೊಂದಿದ್ದರಿಂದ ನಾವು ಆದನ್ನು ಒಪ್ಪಿದ್ದೇವೆ.

ಜಾತ್ಯತೀತ ಮನೋಭಾವದ ಎಲ್ಲ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದರು. ಒಂದು ರಾಜಕೀಯ ವ್ಯವಸ್ಥೆ ಕರ್ನಾಟಕದಲ್ಲಿಯೇ ಮತ್ತೂಂದು ಸಾರಿ ಆರಂಭಗೊಂಡಿತು. ಸಿದ್ದರಾಮಯ್ಯ ಸಿಎಂ ಆಗಿ ಮಾಡಿರುವ ಎಲ್ಲ ಜನಪರ ಕಾರ್ಯಕ್ರಮಗಳನ್ನು ಸಮ್ಮಿಶ್ರ ಸರ್ಕಾರ ಮುಂದುವರಿಸಲಿದೆ ಎಂದರು.

ನಾನು ಕೂಡ ಹಳೆಯ ಕಾಂಗ್ರೆಸ್ಸಿಗ ಎಂದು ತಮ್ಮ ರಾಜಕೀಯ ಹಿನ್ನೆಲೆಯನ್ನು ಸ್ಮರಿಸಿದ ದೇವೇಗೌಡರು, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್‌ ಪಕ್ಷವನ್ನೇ ಕಾಂಗ್ರೆಸ್‌ ಮುಕ್ತ ಭಾರತ ಮಾಡುತ್ತೇನೆ ಎಂಬ ಮೋದಿ ದುರಂಹಕಾರದ ಮಾತನಾಡುತ್ತಿದ್ದಾರೆ. ದೇಶದ ಜನರು ಇದೀಗ ಮೋದಿ ದುರಂಹಕಾರದ ಮಾತಿಗೆ ಉತ್ತರ ಕೊಡುವ ಕಾಲ ಬಂದಿದೆ ಎಂದರು.

ಮೈತ್ರಿ ಅಭ್ಯರ್ಥಿ ಡಾ| ಸುನೀತಾ ಚವ್ಹಾಣ ಧೈರ್ಯವಂತ ಹೆಣ್ಣು ಮಗಳು. ಈ ಬಾರಿ ಮಹಿಳೆಗೆ ಆಶೀರ್ವದಿಸಿ, ಅವರ ಗೆಲುವಿನ ಜವಾಬ್ದಾರಿ ನಿಮ್ಮದು ಎಂದು ದೇವೇಗೌಡ ಮತಯಾಚಿಸಿದರು.
ಗೃಹ ಸಚಿವ ಎಂ.ಬಿ. ಪಾಟೀಲ ಮಾತನಾಡಿ, ಕೇಂದ್ರ ಸಚಿವರಾಗಿ ರಮೇಶ ಜಿಗಜಿಣಗಿ ಅವರು ಬಹಳಷ್ಟು ಕೆಲಸ ಮಾಡಬಹುದಾಗಿತ್ತು. ನಾನೇನಾದರೂ ಕೇಂದ್ರ ಸಚಿವನಾಗಿದ್ದರೆ ಕುಡಿಯುವ ನೀರಿಗೆ ಸಂಬಂ ಧಿಸಿದಂತೆ 2 ಸಾವಿರ ಕೋಟಿ ರೂ.ಗಳ ಪೈಲಟ್‌ ಪ್ರಾಜೆಕ್ಟ್ನ್ನಾದರೂ ವಿಜಯಪುರಕ್ಕೆ ತರುತ್ತಿದೆ. ಕೈಯಲ್ಲಿ ಅ ಧಿಕಾರ ಇದ್ದರೂ ಜಿಗಜಿಣಗಿ ಅವರು ಏನೂ ಮಾಡಲಿಲ್ಲ.

ಈಗ ಅವರು ಭೂತನಾಳ ಕೆರೆ ಸೌಂದರ್ಯ ಸವಿಯುತ್ತ ಮೊಮ್ಮಕ್ಕಳೊಡನೆ ಆಟವಾಡುತ್ತಾ ಕುಳಿತುಕೊಳ್ಳಲಿ ಎಂದರು. ಆರೋಗ್ಯ ಸಚಿವ ಶಿವಾನಂದ ಪಾಟೀಲ ಮಾತನಾಡಿ, ಆಲಮಟ್ಟಿಗೆ 80 ಟಿಎಂಸಿ ನೀರು ಬರಬೇಕಾದರೆ ಅದರ ಶ್ರೇಯಸ್ಸು ಎಚ್‌.ಡಿ. ದೇವೇಗೌಡರಿಗೆ ಸಲ್ಲಬೇಕು. ದೇವೇಗೌಡರು ವಿಜಯಪುರ ಜಿಲ್ಲೆಗೆ ನೀಡಿದ ಕೊಡುಗೆಯನ್ನು ಯಾರೂ ಮರೆಯಬಾರದು ಎಂದರು.

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಮನಗೂಳಿ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ಶಿಕ್ಷಣ ಇಲಾಖೆ ಸಂಸದೀಯ ಕಾರ್ಯದರ್ಶಿ ಡಾ| ದೇವಾನಂದ ಚವ್ಹಾಣ, ಮಾಜಿ ಸಚಿವ ರೇವು ನಾಯಕ ಬೆಳಮಗಿ, ಮೇಲ್ಮನೆ ಸದಸ್ಯರಾದ ಸುನೀಲಗೌಡ ಪಾಟೀಲ, ಪ್ರಕಾಶ ರಾಠೊಡ, ಮಾಜಿ ಶಾಸಕ ರಾಜು ಆಲಗೂರ, ಬಿ.ಜಿ. ಪಾಟೀಲ ಹಲಸಂಗಿ, ವಿಠ್ಠಲ ಕಟಕಧೊಂಡ, ಮೈತ್ರಿ ಪಕ್ಷದ ಜೆಡಿಎಸ್‌ ಅಭ್ಯರ್ಥಿ ಡಾ| ಸುನೀತಾ ಚವ್ಹಾಣ, ಮಹಾದೇವಿ ಗೋಕಾಕ, ಅಬ್ದುಲ್‌ ಹಮೀದ್‌ ಮುಶ್ರೀಫ್‌ ಇದ್ದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.