ಅಮೃತ ಯೋಜನೆಯಡಿ ಕೊಡಿ ನೀರು

ಆಗಸ್ಟ್‌ನಲ್ಲಿ ಪ್ರಾಯೋಗಿಕ 24/7 ನೀರು ಸರಬರಾಜಿಗೆ ಸೂಚನೆ

Team Udayavani, Jul 5, 2019, 2:57 PM IST

05-July-25

ವಿಜಯಪುರ: ನಗರದ ವೂಡಾ ಕಚೇರಿಯಲ್ಲಿ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ ಅಧ್ಯಕ್ಷತೆಯಲ್ಲಿ ಮಹಾನಗರ ಪಾಲಿಕೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ವಿಜಯಪುರ: ವಿಜಯಪುರ ಮಹಾನಗರ ಜನರಿಗೆ ನೀರು ಕೊಡಲು ಅಮೃತ ಯೋಜನೆ¿ಲ್ಲಿ ಬಾಕಿ ಇರುವ 11 ವಲಯಗಳಲ್ಲಿ ಆಗಸ್ಟ್‌ದಿಂದ 24/7 ನೀರು ಪೂರೈಕೆಯ ಪ್ರಾಯೋಗಿಕ ಪರೀಕ್ಷೆ ನಡೆಸಬೇಕು. ಪ್ರಾಯೋಗಿ ಪರೀಕ್ಷೆಯಲ್ಲಿ ಕಂಡು ಬರುವ ಲೋಪಗಳನ್ನೆಲ್ಲ ತ್ವರಿತವಾಗಿ ಮುಗಿಸಿಕೊಂಡು ಮುಂಬರುವ ಜನೇವರಿ ತಿಂಗಳಿಂದ ಎರಡು ದಿನಕ್ಕೊಮ್ಮೆ ನೀರು ಪೂರೈಸಬೇಕು ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ನಡೆದ ವಿಜಯಪುರ ಮಹಾನಗರ ಪಾಲಿಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಜಿಲ್ಲೆಯಲ್ಲಿ ನೀರಿನ ಕೊರತೆ ಇಲ್ಲ. ಆದರೆ ಯೋಜನೆಯ ವ್ಯವಸ್ಥಿತ ನಿರ್ವಹಣೆಯ ಕೊರತೆಯಿಂದಾಗಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ನಗರ ನೀರು ಸರಬರಾಜು ಮಂಡಳಿ ಅಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ನೀರಿನ ಕೊರತೆ ನೀಗಿಸಿ ಜನರಿಗೆ ಕುಡಿಯುವ ನೀರು ಪೂರೈಸುವಂತೆ ಸೂಚನೆ ನೀಡಿದರು.

ಈಗಾಗಲೇ 24/7 ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿರುವ ಪ್ರದೇಶಗಳಲ್ಲಿ ಬಳಕೆ ಮಾಡಿದ ನೀರಿನ ಪ್ರಮಾಣಕ್ಕಿಂತ ಹೆಚ್ಚಿನ ಬಿಲ್ ಪಡೆಯಲಾಗುತ್ತಿದೆ ಎಂಬ ದೂರುಗಳಿವೆ. ಹೀಗಾಗಿ ಅವುಗಳನ್ನು ತಡೆ ಹಿಡಿದು ನಿಗದಿತ ಮೊತ್ತ 175 ರೂ. ಮಾತ್ರ ಕರ ವಸೂಲಿ ಮಾಡಬೇಕು. ಬರುವ ಆಗಸ್ಟ್‌ದಿಂದ ಬಳಕೆ ಮಾಡಿದ ಪ್ರಮಾಣಕ್ಕೆ ಬಿಲ್ ಒದಗಿಸಬೇಕು. ಎರಡು ಹಂತದಲ್ಲಿ ಜಾರಿಗೊಂಡಿರುವ ಅಮೃತ ಯೋಜನೆಯಡಿ 24/7 ನೀರನ್ನು ಬರುವ ಜನೇವರಿ ತಿಂಗಳಿಂದ ಎರಡು ದಿನಕ್ಕೊಮ್ಮೆ ನೀರು ಪೂರೈಸಬೇಕು. ಈ ವಿಷಯದಲ್ಲಿ ಅಧಿಕಾರಿಗಳು ಅತ್ಯಂತ ಕಟ್ಟುನಿಟ್ಟಾಗಿ ಕಾರ್ಯ ಪ್ರವೃತ್ತರಾಗಬೇಕು ಎಂದು ಸೂಚಿಸಿದರು.

ಪಾಲಿಕೆಯಲ್ಲಿನ ಆದಾಯವನ್ನು ನಗರದ ಅಭಿವೃದ್ಧಿ ಕಾಮಗಾರಿಗಳಿಗೆ, ಘನತ್ಯಾಜ್ಯ ನಿರ್ವಹಣೆಯಂತಹ ಕಾರ್ಯಗಳಿಗೆ ಬಳಸಬೇಕು. 24/7 ಕಾಮಗಾರಿ ಪೂರ್ಣಗೊಳ್ಳುವ ತನಕ ಜನಸಂಖ್ಯೆ ಹೆಚ್ಚಿರುವ ವಾರ್ಡ್‌ಗಳಲ್ಲಿ 24/7 ನೀರು ಹಾಗೂ ಜಾಮೀಯಾ ಮಸೀದಿ ವಾರ್ಡ್‌ ದಲ್ಲಿನ ಓವರ್‌ ಹೆಡ್‌ ಟ್ಯಾಂಕ್‌ ಮೂಲಕ ನೀರು ಪೂರೈಕೆ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ನಗರದ 63 ಸಾವಿರ ಮನೆಗಳಿಗೆ 24/7 ನೀರು ಸರಬರಾಜುಗೆ ಕ್ರಿಯಾ ಯೋಜನೆ ಸಿದ್ಧವಾಗಿದ್ದು, ಈ ಯೋಜನೆ ಪೂರ್ಣಗೊಂಡ ನಂತರ ಇದಕ್ಕೆ ಸಂಬಂಧಿಸಿದಂತೆ ವಾರ್ಡ್‌ವಾರು ಇಂಜಿನಿಯರ್‌, ಪಾಲಿಕೆ ಸದಸ್ಯರು, ಸಂಬಂಧಪಟ್ಟ ಅಧಿಕಾರಿಗಳ ಹೆಸರು ದೂರವಾಣಿ ಸಂಖ್ಯೆ ಒಳಗೊಂಡ ವಿವರವಾದ ಮಾಹಿತಿವುಳ್ಳ ಭಿತ್ತಿಪತ್ರವನ್ನು ಮುದ್ರಿಸಿ ಪ್ರತಿ ಮನೆ-ಮನೆಗೆ ಅಂಟಿಸುವಂತೆ ತಿಳಿಸಿದ ಅವರು, ಇದರಿಂದ ಸಾರ್ವಜನಿಕರಿಗೆ ನೀರಿನ ಸಮಸ್ಯೆ, ದೂರು ಸಲ್ಲಿಸಲು ಅನುಕೂಲವಾಗಲಿದೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ, ಶಿಕ್ಷಣ ಇಲಾಖೆ ಸಿ.ಎಂ. ಸಂಸದೀಯ ಕಾರ್ಯದರ್ಶಿ ಶಾಸಕ ದೇವಾನಂದ ಚವ್ಹಾಣ, ಮೇಲ್ಮನೆ ಸದಸ್ಯ ಅರುಣ ಶಹಾಪುರ, ಮಹಾನಗರ ಪಾಲಿಕೆ ಮಹಾಪೌರ ಶ್ರೀದೇವಿ ಲೋಗಾಂವಿ, ಉಪಮೇಯರ್‌ ಗೋಪಾಲ ಘಟಕಾಂಬಳೆ, ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸಿದ್ದನಕೊಳ್ಳ, ಮಹಾನಗರ ಪಾಲಿಕೆ ಆಯುಕ್ತ ಡಾ| ಔದ್ರಾಮ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವೀರೇಶಕುಮಾರ ಸೇರಿದಂತೆ ಪಾಲಿಕೆ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.