ಉಚಿತ ಬಸ್‌ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ

•ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಸಿಗಲಿ ಸೌಲಭ್ಯ•ರಾಜ್ಯ ಸರ್ಕಾರ ವಿರುದ್ಧ ಎಬಿವಿಪಿ ಆಕ್ರೋಶ

Team Udayavani, Jun 19, 2019, 10:30 AM IST

19-June-5

ವಿಜಯಪುರ: ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು

ವಿಜಯಪುರ: ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ನಗರದ ಸಿದ್ದೇಶ್ವರ ದೇವಾಲಯದಿಂದ ಗಾಂಧಿ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಪೃಥ್ವಿಕುಮಾರ ಮಾತನಾಡಿ, ಶಿಕ್ಷಣ ಸರ್ವರಿಗೂ ಸಿಗಬೇಕಾಗಿರುವ ಅಮೂಲ್ಯ ಸಂಪತ್ತು ಎಂಬ ಶ್ರೇಷ್ಠ ಕಲ್ಪನೆ ನಮ್ಮದು. ಜಾತಿ, ಮತ, ಬಡವ ಮತ್ತು ಶ್ರಿಮಂತನೆನ್ನದೆ ಎಲ್ಲರಿಗೂ ಸಿಗುವಂತೆ ಮಾಡುವ ಹೊಣೆಗಾರಿಕೆ ಸರ್ಕಾರಗಳದ್ದು. ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡುವುದಾಗಿ ಘೋಷಣೆ ಮಾಡಿದರೂ ಇದುವರೆಗೂ ಉಚಿತ ಬಸ್‌ಪಾಸ್‌ ನೀಡದ ಕ್ರಮ ಖಂಡನೀಯ ಎಂದರು.

2018-19ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಎಸ್‌ಸಿ-ಎಸ್‌ಟಿ ಸೇರಿದಂತೆ, ಉಳಿದ ವರ್ಗಗಳಿಗೂ ಉಚಿತ ಬಸ್‌ಪಾಸ್‌ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಇವತ್ತಿನವರೆಗೂ ಆ ಯೋಜನೆ ಜಾರಿಗೆ ಬಾರದಿರುವುದು ರಾಜ್ಯ ಸರ್ಕಾರದ ವಿದ್ಯಾರ್ಥಿಗಳ ಮೇಲಿನ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು.

ಎಬಿವಿಪಿ ವಿಭಾಗ ಸಂಚಾಲಕ ಸಚಿನ ಕುಳಗೆರಿ ಮಾತನಾಡಿ, ರಾಜ್ಯ ಬರಗಾಲದ ಪರಿಸ್ಥಿತಿ ಎದುರಿಸುತ್ತಿದ್ದು ರೈತ ಕುಟುಂಬಗಳು ಸಂಕಷ್ಟದಲ್ಲಿವೆ. ಇಂದಿನ ಖಾಸಗಿ ಕಾಲೇಜುಗಳ ಡೋನೆಷನ್‌ ಹಾವಳಿ ಮತ್ತು ಶಿಕ್ಷಣವು ಮಾರಾಟದ ವಸ್ತುವಾಗಿರುವಂತಹ ಪರಿಸ್ಥಿತಿಯಲ್ಲಿ ರಾಜ್ಯದ ಹಿಂದುಳಿದ, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇಂತಹ ದಿನಗಳಲ್ಲಿ ಹೆಚ್ಚಾಗಿ ಬಸ್‌ಪಾಸ್‌ ಪಡೆಯುತ್ತಿರುವ ವಿದ್ಯಾರ್ಥಿಗಳು ಗ್ರಾಮಿಣ ಪ್ರದೇಶದವರೇ ಆಗಿದ್ದು, ರಾಜ್ಯದಲ್ಲಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಬೇಕೆಂದು ಒತ್ತಾಯಿಸಿದರು.

ಹಳ್ಳಿಗಳಿಂದ ತಾಲೂಕು-ಪಟ್ಟಣಗಳಿಗೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಿಸುವುದರಿಂದ ಶಿಕ್ಷಣಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ. ಕಳೆದ ವರ್ಷವು ಹಣವಿಲ್ಲವೆಂಬ ನೆಪವೊಡ್ಡಿದ ಕರ್ನಾಟಕ ರಾಜ್ಯ ಸರ್ಕಾರ ಈ ವರ್ಷವು ಕೂಡ ವಿದ್ಯಾರ್ಥಿಗಳ ಬೇಡಿಕೆಯನ್ನು ಮೂಲೆಗುಂಪು ಮಾಡಿದೆ. ಕೇವಲ ಅಧಿಕಾರ ಉಳಿಸಿಕೊಳ್ಳುವ ಯೋಜನೆಯಲ್ಲಿರುವ ರಾಜ್ಯ ಸರ್ಕಾರಕ್ಕೆ ವಿದ್ಯಾರ್ಥಿಗಳ ಕೂಗು ಕೇಳಿಸಬೇಕು ಎಂದರು.

ಪ್ರತಿಭಟನೆಯಲ್ಲಿ ಸಚಿನ ಬಾಗೇವಾಡಿ, ಪಾಂಡು ಮೊರೆ, ಮಣಿಕಂಠ ಹಿರೇಮಠ, ಶ್ರೀಧರ ಕಡಕೋಳ, ಅಮರ ಕಂಬಾರ, ವಿಠuಲ ಹಾಲಳ್ಳಿ, ಸೋಮನಾಥ ತೋಳನೂರ, ನಿರಂಜನ ಮಾಶ್ಯಾಳ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.