ಪಟ್ಟದ ಲೆಕ್ಕಾಚಾರ; ಯಾರಾಗುತ್ತಾರೆ ಹುಬ್ಬಳ್ಳಿ-ಧಾರವಾಡ ಮಹಾಪೌರ?

ಇಬ್ಬರ ನಡುವೆ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ | ನಾಡಿದ್ದು ಬೀಳಲಿದೆಯೇ ಅಂತಿಮ ಮುದ್ರೆ?

Team Udayavani, Sep 9, 2021, 2:06 PM IST

hyguyu

ವರದಿ: ಅಮರೇಗೌಡ ಗೋನವಾರ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮತ ಸಮರ ಮುಗಿದು ಫಲಿತಾಂಶವೂ ಬಂದಾಗಿದೆ. ಇದೀಗ ಮಹಾಪೌರ, ಉಪಮಹಾಪೌರ ಯಾರೆಂಬ ಕುತೂಹಲ, ಲೆಕ್ಕಾಚಾರ ಶುರುವಾಗಿದ್ದು, ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿ ಮೂರನೇ ಬಾರಿ ಅಧಿಕಾರಕ್ಕೇರುವುದು ಸ್ಪಷ್ಟವಾಗಿದೆ.

ಮಹಾಪೌರ ಹುದ್ದೆಗೆ ಬಿಜೆಪಿಯಲ್ಲಿ ಆರು ಜನರ ಹೆಸರು ಸುಳಿದಾಡುತ್ತಿವೆಯಾದರೂ, ಇಬ್ಬರ ನಡುವೆ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮಹಾನಗರ ಪಾಲಿಕೆ ಮಹಾಪೌರ ಹಿಂದುಳಿದ ವರ್ಗ(ಬಿಸಿಎ), ಉಪಮಹಾಪೌರ ಸ್ಥಾನ ಪಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದೆ. ಈಗಾಗಲೇ ಬಿಜೆಪಿಯಲ್ಲಿ ಮಹಾಪೌರ ಸ್ಥಾನಕ್ಕಾಗಿ ಆಕಾಂಕ್ಷಿಗಳಲ್ಲಿ ಆಸೆ ಗರಿಗೆದರಿದ್ದು, ಮಹಾಪೌರರ ಗೌನ್‌ ಧರಿಸಲು ತಮ್ಮದೇ ಯತ್ನಗಳಿಗೆ ತಾಲೀಮು ಶುರುವಿಟ್ಟುಕೊಂಡಿದ್ದಾರೆ.

ಶನಿವಾರ ನಡೆಯಲಿದೆ ಎಂದು ಹೇಳಲಾಗುವ ಜಿಲ್ಲಾ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಮಹಾಪೌರ ಸ್ಥಾನಕ್ಕೆ ಯಾರೆಂಬ ಚರ್ಚೆ ನಡೆದು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ದೊರೆತಿಲ್ಲ. 39 ಸ್ಥಾನ ಪಡೆದಿರುವ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮೂವರು ವಿಧಾನಸಭೆ ಸದಸ್ಯರು, ಇಬ್ಬರು ವಿಧಾನ ಪರಿಷತ್ತು ಸದಸ್ಯರು ಹಾಗೂ ಒಬ್ಬರ ಲೋಕಸಭಾ ಸದಸ್ಯರು ಸೇರಿದರೆ ಪಕ್ಷದ ಬಲ 45ಕ್ಕೇರಿದರೂ. ಒಟ್ಟು ಎಲ್ಲ ಸದಸ್ಯರು ಸದಸ್ಯರು ಹಾಜರಾದರೆ ಬಹುಮತಕ್ಕೆ 46 ಸದಸ್ಯರ ಬೆಂಬಲ ಅಗತ್ಯವಾಗಿದೆ. ಇನ್ನು ಒಂದು ಸ್ಥಾನ ಕಡಿಮೆ ಆಗಲಿದೆ. ಅದನ್ನು ತಮ್ಮದೇ ಪಕ್ಷದಿಂದ ಟಿಕೆಟ್‌ ದೊರೆಯದೆ ಬಂಡಾಯವಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ಸದಸ್ಯನನ್ನು ಸೆಳೆದು ಅಧಿಕಾರಕ್ಕೇರಬಹುದಾಗಿದೆ. ಬಿಜೆಪಿಗೆ ನಿರೀಕ್ಷೆಗೆ ಮೀರಿದ ಪೈಪೋಟಿ ನೀಡಿದ ಕಾಂಗ್ರೆಸ್‌ಪಕ್ಷ33 ಸ್ಥಾನಗಳನ್ನು ಗಳಿಸಿದೆ. ಎಐಎಂಐಎಂ ಮೂರು, ಜೆಡಿಎಸ್‌ ಒಂದು ಪಕ್ಷೇತರರು ಆರು ಜನರು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಎಐಎಂಐಎಂ, ಜೆಡಿಎಸ್‌, ಎಲ್ಲ ಪಕ್ಷೇತರ ಸದಸ್ಯರನ್ನು ಸೇರಿಕೊಂಡರು ಒಟ್ಟು ಸದಸ್ಯರ ಸಂಖ್ಯೆ 43 ಆಗಲಿದೆ. ಕಾಂಗ್ರೆಸ್‌ ಶಾಸಕರು ಒಬ್ಬರು ಮಾತ್ರ ಇದ್ದಾರೆ. ಕಾಂಗ್ರೆಸ್‌ ವಿಧಾನ ಪರಿಷತ್ತು ಸದಸ್ಯ ಶ್ರೀನಿವಾಸ ಮಾನೆ ಅವರು ತಮ್ಮ ಮತದಾನಕ್ಕೆ ಹಾವೇರಿ ಜಿಲ್ಲೆಯನ್ನು ಆಯ್ದುಕೊಂಡಿದ್ದರಿಂದ ಅವರ ಲಭ್ಯತೆ ಇಲ್ಲ ಎನ್ನಲಾಗುತ್ತಿದೆ.

ಜೆಡಿಎಸ್‌ ವಿಧಾನ ಪರಿಷತ್ತು ಸದಸ್ಯ ಬಸವರಾಜ ಹೊರಟ್ಟಿ ಅವರು ಸಭಾಪತಿ ಆಗಿರುವುದರಿಂದ ಪಕ್ಷದ ಪರ ಮತದಾನಕ್ಕೆ ಅವರು ಆಗಮಿಸುವುದು ಅನುಮಾನ. ಸದ್ಯದ ಪಾಲಿಕೆಯ ವಾಸ್ತವದ ಸ್ಥಿತಿ ಗಮನಿಸಿದರೆ ಕಾಂಗ್ರೆಸ್‌ ಅಧಿಕಾರ ಹಿಡಿಯವುದು ಕಷ್ಟ ಸಾಧ್ಯ. ಆಪರೇಷನ್‌ ಕಾಂಗ್ರೆಸ್‌ ನಡೆಸುವುದಾಗಿ ಕಾಂಗ್ರೆಸ್‌ ಮಹಾನಗರ ಜಿಲ್ಲಾಧ್ಯಕ್ಷರು ಹೇಳಿದ್ದಾರೆಯಾದರೂ, ಅಂತಹ ಸನ್ನಿವೇಶವಂತೂ ಸದ್ಯಕ್ಕೆ ಕಾಣುತ್ತಿಲ್ಲ.

ಬಿಜೆಪಿಯಲ್ಲಿ ಪೈಪೋಟಿ: ಮಹಾಪೌರ-ಉಪಮಹಾಪೌರ ಸ್ಥಾನಕ್ಕೆ ಸರಕಾರ ಮೀಸಲಾತಿ ಘೋಷಣೆ ಮಾಡಿದ್ದರೂ, ಅಧಿಸೂಚನೆ ಹೊರಡಿಸಬೇಕಿದೆ. ಅನಂತರವೇ ಮಹಾಪೌರ- ಉಪ ಮಹಾಪೌರ ಆಯ್ಕೆ ಚುನಾವಣೆ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ.

ಮಹಾಪೌರ ಸ್ಥಾನಕ್ಕೆ ವೀರೇಶ ಅಂಚಟಗೇರಿ, ರಾಮಣ್ಣ ಬಡಿಗೇರ, ತಿಪ್ಪಣ್ಣ ಮಜ್ಜಗಿ, ಸತೀಶ ಹಾನಗಲ್ಲ, ಬೀರಪ್ಪ ಖಂಡೇಕಾರ ಅವರ ಹೆಸರು ಸುಳಿದಾಡುತ್ತಿವೆ. ವೀರೇಶ ಅಂಚಟಗೇರಿ ಅವರು ಎರಡನೇ ಬಾರಿಗೆ ಪಾಲಿಕೆಗೆ ಆಯ್ಕೆಯಾಗಿದ್ದು, ಪಕ್ಷದಲ್ಲಿ ಹಲವು ವರ್ಷಗಳಿಂದ ಇರುವುದು, ಎರಡನೇ ಬಾರಿಗೆ ಆಯ್ಕೆಯಾಗಿದ್ದರಿಂದ ಮಹಾಪೌರ ಸ್ಥಾನಕ್ಕೆ ಒತ್ತಾಯಿಸುವ ಸಾಧ್ಯತೆ ಇದೆ. ಜತೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಬಲ ಇವರಿಗೆ ದೊರೆಯುವ ಸಾಧ್ಯತೆ ಇದೆ. ರಾಮಣ್ಣ ಬಡಿಗೇರ ಅವರು ನಾಲ್ಕು ಬಾರಿ ಪಾಲಿಕೆಗೆ ಆಯ್ಕೆಯಾಗಿದ್ದು, ಹಿರಿತನ ಹಾಗೂ ಇಲ್ಲಿವರೆಗೂ ಹೆಚ್ಚಿನ ಅವಕಾಶ ಸಿಕ್ಕಿಲ್ಲವಾಗಿದ್ದು, ಈ ಬಾರಿ ಮಹಾಪೌರ ಸ್ಥಾನ ಬಿಸಿಎ ಗೆ ಮೀಸಲಾಗಿದ್ದು, ತಮಗೆ ಅವಕಾಶ ನೀಡಬೇಕೆಂಬ ಬೇಡಿಕೆ ಅವರದ್ದಾಗಬಹುದಾಗಿದೆ. ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿದವರು ಆಗಿದ್ದಾರೆ. ತಿಪ್ಪಣ್ಣ ಮಜ್ಜಗಿ ಎರಡನೇ ಬಾರಿಗೆ ಪಾಲಿಕೆಗೆ ಆಯ್ಕೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ,ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಉತ್ತಮ ನಂಟು ಇದೆ. ಇವರು ಸಹ ಮಹಾಪೌರ ಸ್ಥಾನಕ್ಕೆ ಬೇಡಿಕೆ ಸಲ್ಲಿಸುವ ಸಾಧ್ಯತೆ ಇದೆ. ಆದರೆ, ತಿಪ್ಪಣ್ಣ ಮಜ್ಜಗಿ ಅವರ ಪತ್ನಿ ಪಾಲಿಕೆ ಸದಸ್ಯರಾಗಿದ್ದ ಅಶ್ವಿ‌ನಿ ಮಜ್ಜಗಿ ಅವರಿಗೆ ಮಹಾಪೌರ ಸ್ಥಾನ ನೀಡಿದ್ದರಿಂದ, ಮತ್ತೇ ಅದೇ ಕುಟುಂಬಕ್ಕೆ ಮಹಾಪೌರ ಸ್ಥಾನ ನೀಡಬೇಕೆಂಬ ಪ್ರಶ್ನೆ ಬಂದರೆ ಅದು ತಿಪ್ಪಣ್ಣ ಅವರಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಇದಲ್ಲದೆ ಮೂರನೇ ಬಾರಿಗೆ ಪಾಲಿಕೆಗೆ ಆಯ್ಕೆಯಾಗಿರುವ ಸತೀಶ ಹಾನಗಲ್ಲ, ಎರಡು ಬಾರಿ ಗೆದ್ದಿರುವ ಉಮೇಶ ಕೌಜಗೇರಿ, ಬೀರಪ್ಪ ಖಂಡೇಕಾರ ಅವರು ಸಹ ಮಹಾಪೌರ ಸ್ಥಾನ ಪಡೆಯಲು ತಮ್ಮದೇ ಯತ್ನ, ಒತ್ತಡ ತರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಮೂಲಗಳ ಪ್ರಕಾರ ಮಹಾಪೌರ ಸ್ಥಾನಕ್ಕೆ ಆರು ಜನ ಆಕಾಂಕ್ಷಿಗಳೂ ಇದ್ದರೂ ಪ್ರಮುಖವಾಗಿ ವೀರೇಶ ಅಂಚಟಗೇರಿ, ರಾಮಣ್ಣ ಬಡಿಗೇರ ಅವರ ನಡುವೆ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ವೀರೇಶ ಅಂಚಟಗೇರಿ ಅವರು ಶಾಸಕ ಅಮೃತ ದೇಸಾಯಿ ಅವರ ಧಾರವಾಡ ಗ್ರಾಮೀಣ ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಬರಲಿದ್ದು, ರಾಮಣ್ಣ ಬಡಿಗೇರ ಶಾಸಕ ಅರವಿಂದ ಬೆಲ್ಲದ ಪ್ರತಿನಿಧಿಸುವ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುತ್ತಾರೆ. ಕೆಲ ಮೂಲಗಳ ಪ್ರಕಾರ ಜೆಡಿಎಸ್‌ನಿಂದ ರಾಜಣ್ಣಾ ಕೊರವಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವಾಗ ಮಹಾಪೌರರನ್ನಾಗಿ ಮಾಡಲಾಗುವುದು ಎಂಬ ಭರವಸೆ ನೀಡಲಾಗಿತ್ತೆಂದು ಹೇಳಲಾಗುತ್ತಿದ್ದು, ಅವರನ್ನು ಒಟ್ಟು ಐದು ವರ್ಷಗಳ ಅವಧಿಯಲ್ಲಿ ಒಂದು ಅವಧಿಗೆ ಅವರಿಗೆ ಅವಕಾಶ ಸಿಗುವುದೇ ಎಂದು ನೋಡಬೇಕಾಗಿದೆ.

ಟಾಪ್ ನ್ಯೂಸ್

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.