ಜನರ ಹೃದಯದಲ್ಲಿ ಉಳಿದ ‘ಸಾಂಗ್ಲಿಯಾನ’: ಡಿವೈಎಸ್ಪಿ

Team Udayavani, Nov 10, 2019, 4:18 PM IST

10-November-26

ಯಾದಗಿರಿ: ಶಂಕರನಾಗ್‌ ಅವರ ಕ್ರಿಯಾಶೀಲತೆ, ಸೃಜನಶೀಲತೆಯಿಂದಾಗಿ ಇಂದಿಗೂ ಜನರ ಮನದಲ್ಲಿ ಅದರಲ್ಲೂ ವಿಶೇಷವಾಗಿ ಆಟೋ ಚಾಲಕರ ಮನದಲ್ಲಿ ಉಳಿದುಕೊಂಡಿದ್ದಾರೆ ಎಂದು ಡಿವೈಎಸ್ಪಿ ಯು. ಶರಣಪ್ಪ ಅಭಿಪ್ರಾಯಪಟ್ಟರು.

ನಗರದ ಗಾಂಧಿ ವೃತ್ತದ ಪಂಪ ಮಹಾಕವಿ ಮಂಟಪದಲ್ಲಿ ನಗರದ ಶಂಕರನಾಗ್‌ ಆಟೋ ಚಾಲಕರ ಸಂಘ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದಿ| ಶಂಕರನಾಗ್‌ 65ನೇ ಹುಟ್ಟು ಹಬ್ಬದ ಅಂಗವಾಗಿ ಆಟೋರಾಜ ಶಂಕರನಾಗ್‌ ಆಟೋ ನಿಲ್ದಾಣ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ವೀರಭಾರತಿ ಪ್ರತಿಷ್ಠಾನ ಅಧ್ಯಕ್ಷ ವೈಜನಾಥ ಹಿರೇಮಠ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಂಕರನಾಗ್‌ ಅತ್ಯಲ್ಪ ಸಮಯದಲ್ಲಿನ ಕನ್ನಡ ಚಿತ್ರರಂಗಕ್ಕೆ, ನಾಡು-ನುಡಿಗೆ ನೀಡಿದ ಕೊಡುಗೆ ಅಪಾರವಾಗಿತ್ತು. ಅಂತಹ ಕಲಾವಿದ ಕನ್ನಡದ ಹೆಮ್ಮೆಯಾಗಿದ್ದು, ವಿಶೇಷವಾಗಿ ಆಟೋ ಚಾಲಕರ ಪರವಾದ ಸಿನಿಮಾ ಮಾಡುವ ಮೂಲಕ ಅವರು ಜನಸಾಮಾನ್ಯರ ಪರವಾದ ನಟ ಎಂಬುದನ್ನು ಬಿಂಬಿಸಿದ್ದರು. ಅವರು ಬದುಕಿದ ಅಲ್ಪ ಅವಧಿಯಲ್ಲಿ ಮಹತ್ವದ ಸಂದೇಶ ಕೊಟ್ಟು ಹೋದರು ಎಂದು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಹಿರಿಯ ಆಟೋ ಚಾಲಕರಾದ ಭಾಗಪ್ಪ ರಾಗೇರ್‌, ಮಲ್ಲಯ್ಯ ಕೊತ್ವಾಲ್‌, ಮಲ್ಲಪ್ಪ ಅರಿಕೇರಾ, ಲಕ್ಷ್ಮಣ ಚವ್ಹಾಣ್‌, ಅಯ್ಯಪ್ಪ ಮುಂಡರಗಿ ಮುಂತಾದವರನ್ನು ಸನ್ಮಾನಿಸಲಾಯಿತು.

ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಬಿ. ಗದ್ದುಗೆ, ನಗರ ಠಾಣೆ ಪಿ.ಎಸ್‌.ಐ. ಕೃಷ್ಣ ಸುಬೇದಾರ್‌, ಮಹಿಳಾ ಠಾಣೆ ಪಿ.ಎಸ್‌.ಐ. ನಾಗಮ್ಮ ಕಲ್ಬುರ್ಗಿ, ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ಅಧ್ಯಕ್ಷೆ ರೇಣುಕಾ ಸರಡಗಿ, ಆಟೋ ಚಾಲಕರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ, ಉಪಾಧ್ಯಕ್ಷ ಲಕ್ಷ್ಮಣ ಚವ್ಹಾಣ್‌, ಸುರಪುರದ ವಿಷ್ಣು ಸೇನಾ ಸಮಿತಿ ಅಧ್ಯಕ್ಷ ರಾಘವೇಂದ್ರ, ಸುರಪುರ ತಾಲೂಕಿನ ಡಾ| ವಿಷ್ಣು ಸೇನಾ ಸಮಿತಿ ಮತ್ತು ಕನ್ನಡ ಸೇನಾ ಪದಾಧಿಕಾರಿಗಳು ಭಾಗವಹಿಸಿದ್ದರು. ವಿಷ್ಣುಸೇನಾ ತಾಲೂಕು ಅಧ್ಯಕ್ಷ ಮಲ್ಲು, ನಗರ ಘಟಕ ಅಧ್ಯಕ್ಷ ರಾಮಕೃಷ್ಣ ನಾಯಕ್‌, ಕನ್ನಡ ಸೇನೆ ಅಧ್ಯಕ್ಷರು ಮಲ್ಲು ಕೊಡಿಮಠ, ಸದಸ್ಯ ದೇವರಾಜ್‌ ನಾಯಕ್‌ ಇದ್ದರು. ಇದೇ ಸಂದರ್ಭದಲ್ಲಿ ಗಂಗಾವತಿಯಿಂದ ಆಗಮಿಸಿದ್ದ ಅಂಧ ಕಲಾವಿದರಾದ ಚಂಪಕಮಾಲ ಸೇರಿದಂತೆ ಇತರರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.