ಪ್ಲಾಸ್ಟಿಕ್‌-ತಂಬಾಕು ಉತ್ಪನ್ನ ವಶ

ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳ ಮಾರಾಟ ಕಾನೂನು ಪ್ರಕಾರ ಅಪರಾಧ

Team Udayavani, Aug 22, 2019, 11:20 AM IST

22-Agust-9

ಯಾದಗಿರಿ: ನಗರದ ಕಿರಾಣಿ ಅಂಗಡಿಯೊಂದರ ಮೇಲೆ ಅಧಿಕಾರಿಗಳು ದಾಳಿ ನಡೆಸಿ ತಂಬಾಕು ಉತ್ಪನ್ನ ವಶಕ್ಕೆ ಪಡೆದರು.

ಯಾದಗಿರಿ: ಜಿಲ್ಲಾ ಬಾಲ ಕಾರ್ಮಿಕ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಪೊಲೀಸ್‌ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ನಗರದ ಹೊಸ ಬಸ್‌ ನಿಲ್ದಾಣ, ಚಿರಂಜೀವಿ ಶಾಲೆ ಹತ್ತಿರ, ಗಂಜ್‌ ಏರಿಯಾ, ಮೈಲಾಪೂರ ಅಗಸಿ ಏರಿಯಾ, ಹೊಸಳ್ಳಿ ಕ್ರಾಸ್‌ ಸುತ್ತಮುತ್ತಲಿನ ಸ್ಟಾಲ್, ಮಳಿಗೆ, ಅಂಗಡಿಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್‌ ಮತ್ತು ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡರು.

ಈ ವೇಳೆ ಜಿಲ್ಲಾ ಬಾಲ ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುವೀರ ಸಿಂಗ್‌ ಠಾಕೂರ್‌ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿ ಆದೇಶ ಪಡೆದು ದಾಳಿ ನಡೆಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದು ನಿಷೇಧಿಸಲಾಗಿದ್ದು, ಉಲ್ಲಂಘಿಸಿದಲ್ಲಿ 25 ಸಾವಿರ ರೂ. ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ. ಬಾಲ ಕಾರ್ಮಿಕ ಪದ್ಧತಿ 1986ರ ಕಾಯ್ದೆಯಡಿ 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂಬ ವಿಷಯದ ಕುರಿತು ಅರಿವು ಮೂಡಿಸಲಾಗಿದೆ ಎಂದು ಹೇಳಿದರು.

ನಗರಸಭೆ ಪರಿಸರ ಇಂಜಿನಿಯರ್‌ ಸಂಗಮೇಶ ಮಾತನಾಡಿ, ಸಾಕಷ್ಟು ಬಾರಿ ಜಾಥಾ ಮೂಲಕ, ಪ್ರಚಾರ, ಕರಪತ್ರಗಳ ವಿತರಣೆ, ಕಾನೂನು ಅರಿವು- ನೆರವು ಕಾರ್ಯಕ್ರಮಗಳು ಮತ್ತು ಹಲವಾರು ಬಾರಿ ಅನಿರೀಕ್ಷಿತ ತಪಾಸಣೆ, ದಾಳಿ ಮಾಡಿ ಸಾರ್ವಜನಿಕರಿಗೆ ಹಾಗೂ ಸಬಂಧಿಸಿದ ಅಂಗಡಿ ಮಾಲೀಕರುಗಳಿಗೆ ಮಾಹಿತಿ ನೀಡಿದರೂ ಸಹ ಹಲವಾರು ಅಂಗಡಿ ಮಾಲೀಕರು ನಿಯಮಗಳನ್ನು ಉಲ್ಲಂಘಿಸಿ, ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸುತ್ತಿರುವುದು, ಬಹಿರಂಗವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಪ್ರಕರಣ ದಾಖಲಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಮಹಾಲಕ್ಷ್ಮೀ ಸಜ್ಜನ್‌ ಮಾತನಾಡಿ, ಕೋಟ್ಪಾ-2003 ಕಾಯ್ದೆಯಡಿ ಸೆಕ್ಷನ್‌ 4, 5, 6, 6ಎ, 6ಬಿ ಮತ್ತು 7ರ ಪ್ರಕಾರ ಸಂಬಂಧಿಸಿದ ಕಾಯ್ದೆಗಳನುಸಾರ ಹೋಟೆಲ್, ರೆಸ್ಟೊರೆಂಟ್, ಬಾರ್‌, ಧಾಬಾ, ಅಂಗಡಿಗಳಲ್ಲಿ ಮತ್ತು ಶಾಲಾ-ಕಾಲೇಜು ಪ್ರದೇಶದ 100 ಮೀಟರ್‌ ಅಂತರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕಿಗೆ ಸಂಬಂಧಿಸಿದ ಉತ್ಪನ್ನಗಳನ್ನು ಬಹಿರಂಗವಾಗಿ ಮಕ್ಕಳಿಂದ ಮಾರುವುದಕ್ಕೆ ಪ್ರಚೋದನೆ ನೀಡುವುದು, ದುಡಿಸಿಕೊಳ್ಳುವುದು ಮತ್ತು ಸೇದುವುದು ಕಾನೂನಿನ ಪ್ರಕಾರ ನಿಷೇಧಿಸಲಾಗಿರುತ್ತದೆ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ತಿಳಿವಳಿಕೆ ನೀಡಿದರು. ಎಎಸ್‌ಐ ಪಾಟೀಲ ಮತ್ತು ನಗರಸಭೆ ಸಿಬ್ಬಂದಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.