ಕರಡು ಮತದಾರರ ಪಟ್ಟಿ ಪ್ರಕಟ

ರಾಜಕೀಯ ಮುಖಂಡರೊಂದಿಗೆ ಸಭೆ ಆಕ್ಷೇಪಣೆ ಸಲ್ಲಿಸಲು 15ರವರೆಗೆ ಅವಕಾಶ

Team Udayavani, Jan 1, 2020, 3:13 PM IST

1–January-16

ಯಾದಗಿರಿ: ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲೆಯ ಸುರಪುರ, ಶಹಾಪುರ, ಯಾದಗಿರಿ ಹಾಗೂ ಗುರುಮಿಠಕಲ್‌ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಅರ್ಹತಾ ದಿನಾಂಕ 2020 ಜ.1ರಂತೆ ಪ್ರಕಟಿಸಿದ್ದು, ಕರಡು ಮತದಾರರ ಪಟ್ಟಿ ಬಗ್ಗೆ ಯಾವುದೇ ದೂರು, ಆಕ್ಷೇಪಣೆಗಳಿದ್ದಲ್ಲಿ ಜನವರಿ 15ರ ವರೆಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರಡು ಮತದಾರರ ಪಟ್ಟಿಯ ಕುರಿತು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಯಾದಗಿರಿ ಸಹಾಯಕ ಆಯುಕ್ತರ ಕಚೇರಿ, ಸುರಪುರ, ಶಹಾಪುರ, ಯಾದಗಿರಿ ತಹಶೀಲ್ದಾರ್‌ ಕಚೇರಿ ಹಾಗೂ ಜಿಲ್ಲೆಯ ಎಲ್ಲ ಮತಗಟ್ಟೆ ಮಟ್ಟದ ಅಧಿಕಾರಿಗಳ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಹೇಳಿದರು.

ಕರಡು ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅರ್ಹತಾ ದಿನಾಂಕದಂತೆ ಯುವಕರು, ಯುವತಿಯರು ಅಥವಾ ಸಾರ್ವಜನಿಕರು ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಬಹುದು.

ತಿದ್ದುಪಡಿ ಬಯಸಿದಲ್ಲಿ ನಮೂನೆ-8ರಲ್ಲಿ ಮತ್ತು ಹೆಸರು ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-8ಎ ರಲ್ಲಿ ಸೂಕ್ತ ದಾಖಲೆಯೊಂದಿಗೆ ಅರ್ಜಿಗಳನ್ನು ಸಂಬಂಧಪಟ್ಟ ಮತಗಟ್ಟೆ ಮಟ್ಟ ಅಧಿಕಾರಿಗೆ ಜನವರಿ 15ರವರೆಗೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಸ್ವೀಕರಿಸಿದ ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ 2020ರ ಜನವರಿ 27ರಂದು ಕಾಲೋಚಿತಗೊಳಿಸಲಾಗುವುದು. ನಂತರ ಪುರವಣಿ ಪಟ್ಟಿಯನ್ನು 2020ರ ಫೆಬ್ರವರಿ 4ರಂದು ತಯಾರಿಸಿ ಅಂತಿಮ ಮತದಾರರ ಪಟ್ಟಿಯನ್ನು 2020ರ ಫೆಬ್ರುವರಿ 7ರಂದು ಪ್ರಕಟಿಸಲಾಗುವುದು ಎಂದು ವಿವರಿಸಿದರು.

ಲೋಕಸಭಾ, ನಗರ ಸ್ಥಳೀಯ ಸಂಸ್ಥೆಗಳು, ಗ್ರಾಪಂಸೇರಿದಂತೆ ಎಲ್ಲ ಚುನಾವಣೆಗಳಿಗೂ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯೇ ಅನ್ವಯವಾಗುತ್ತದೆ. ಮತದಾರರ ಪಟ್ಟಿ ದೋಷರಹಿತವಾಗಿದ್ದಷ್ಟು ಚುನಾವಣೆಗಳು ಸುಸೂತ್ರವಾಗಿ ನಡೆಯುತ್ತವೆ. ಹಾಗಾಗಿ, ನಕಲಿ ಮತದಾರರು ಸೇರಿದಂತೆ ಯಾವುದೇ ದೂರು, ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಂಬಧಿಸಿದ ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಲಿಖೀತ ರೂಪದಲ್ಲಿ ಸಲ್ಲಿಸಬೇಕು ಎಂದು ರಾಜಕೀಯ ಪಕ್ಷಗಳ ಮುಖಂಡರನ್ನು ಕೋರಿದರು.

ಸಹಾಯಕ ಆಯುಕ್ತ ಶಂಕರಗೌಡ ಎಸ್‌. ಸೋಮನಾಳ, ತಹಶೀಲ್ದಾರರಾದ ಜಗನ್ನಾಥರೆಡ್ಡಿ, ನಿಂಗಣ್ಣ ಎಸ್‌. ಬಿರಾದಾರ, ಚುನಾವಣೆ ಶಾಖೆ ಶಿರಸ್ತೇದಾರ್‌ ಪರಶುರಾಮ, ಖಲೀಲ್‌ಸಾಬ್‌ ಸೇರಿ ವಿವಿಧ ರಾಜಕೀಯ ಪಕ್ಷದ ಪ್ರಮುಖರು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.