ಅಂತಾರಾಜ್ಯ ಕಾರ್ಮಿಕರ ಕರೆತರಲು 30 ಬಸ್‌ ಬಳಕೆ

Team Udayavani, May 12, 2020, 6:54 AM IST

ಅಂತಾರಾಜ್ಯ ಕಾರ್ಮಿಕರ ಕರೆತರಲು 30 ಬಸ್‌ ಬಳಕೆ

ಯಾದಗಿರಿ: ಅಂತಾರಾಜ್ಯದಿಂದ ಆಗಮಿಸುವ ಜಿಲ್ಲೆಯ ಕಾರ್ಮಿಕರಿಗೆ ಸರ್ಕಾರಿ ವಸತಿ ನಿಲಯ ಇತರೆ ಸ್ಥಳಗಳಲ್ಲಿ 14ದಿನ ಕ್ವಾರಂಟೈನ್‌ ನಲ್ಲಿಡುವುದು ಅಗತ್ಯವಾಗಿದ್ದು, ಜಿಲ್ಲಾಡಳಿತ ಕೇಳಿದರೆ ತಮ್ಮ ಮನೆಯನ್ನಾದರೂ ಕೊಡಲು ಸಿದ್ಧ ಎಂದು ಸುರಪುರ ಶಾಸಕ ನರಸಿಂಹ ನಾಯಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಕಟ್ಟಡಗಳಲ್ಲಿ ಕ್ವಾರಂಟೈನ್‌ ಮಾಡುವುದಕ್ಕೆ ಕೆಲವು ಸಂಸ್ಥೆಯವರು ಅಪಸ್ವರ ಎತ್ತುತ್ತಿರುವುದು ಇದರಿಂದ ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿಸಿ ಹೇಳಲಾಗಿದೆ ಎಂದರು.

ಜಿಲ್ಲೆಯ ಕಾರ್ಮಿಕರು ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಸಿಲುಕಿರುವುದು ಅವರನ್ನು ಕರೆತರಲು ರಾಜ್ಯ ಸರ್ಕಾರ ಮುಂದಾಗಿದೆ. ಸುರಪುರ ಕ್ಷೇತ್ರ ಸೇರಿದಂತೆ ಜಿಲ್ಲೆಯ ಜನರು ತೀವ್ರ ತೊಂದರೆಯಲ್ಲಿ ಸಿಲುಕಿರುವುದು ಅವರು ಪಡುತ್ತಿರುವ ಕಷ್ಟವನ್ನು ಹೇಳಿಕೊಂಡರೆ ನೋಡಲಾಗುತ್ತಿರಲಿಲ್ಲ. ಅನಿವಾರ್ಯವಾಗಿ ಏನು ಮಾಡಲಾಗದ ಸ್ಥಿತಿಯಿತ್ತು ಎಂದರು.

ಇದೀಗ ಬೆಳಗಾವಿಯ ಕಾಗವಾಡ ಚೆಕ್‌ಪೋಸ್ಟ್‌ ಬಳಿ 10 ಬಸ್‌, ಗೋವಾದ ಕುಣಕುಂಬಿ ಬಳಿ 10 ಸೇರಿ ಕರ್ನಾಟಕದ ಗಡಿಯಿಂದ ಕರೆತರಲು 30 ಸಾರಿಗೆ ಬಸ್‌ ಗಳ ವ್ಯವಸ್ಥೆ ಮಾಡಲಾಗಿದೆ ಎಂದರು. ಮೇ 12ರಿಂದ ಸಾರಿಗೆ ಬಸ್‌ಗಳು ಸಂಚರಿಸಲು ಸಿದ್ಧವಾಗಿದ್ದು, ಮೊದಲ ದಿನ ಒಂದು ಸಾವಿರ ಜನರು ಬರುವ ನಿರೀಕ್ಷೆಯಿದೆ. ಇನ್ನೂ ಹೆಚ್ಚಿನ ಜನರು ಬರುವವರಿದ್ದರೆ ವ್ಯವಸ್ಥೆ ಮಾಡಲಾಗುವುದು. ನಿರ್ದಿಷ್ಟವಾಗಿ ಎಷ್ಟು ಜನರಿದ್ದಾರೆ ಎನ್ನುವುದು ತಿಳಿದಿಲ್ಲ ಎಂದರು.

ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಹೊರ ರಾಜ್ಯದಿಂದ ಬಂದವರಿಗೆ ಮೊದಲು ಜ್ವರ ತಪಾಸಣೆಗೆ ಕೇಂದ್ರಗಳಿಗೆ ಕರೆದ್ಯೊಯ್ದು ತಪಾಸಣೆ ಬಳಿಕ 14 ದಿನ ಕ್ವಾರಂಟೈನ್‌ನಲ್ಲಿ ಅವಧಿ ಮುಕ್ತಾಯದ ಬಳಿಕವೇ ಗ್ರಾಮಗಳಿಗೆ ಕಳಿಸಲಾಗುವುದು ಎಂದರು.

ಗಡಿಯವರೆಗೆ ಸಂಚರಿಸುವಂತೆ ಅನುಮತಿ ನೀಡಲು ಡಿಸಿ ಆಯಾ ರಾಜ್ಯದ ಸಂಬಂಧಿಸಿದ ಡಿಸಿಗಳಿಗೆ ಪತ್ರ ಬರೆದು ವ್ಯವಸ್ಥೆ ಕಲ್ಪಿಸಲು ಮನವಿ ಮಾಡಿದ್ದಾರೆ. ಹಾಗಾಗಿ ಗಡಿಯಿಂದ ಕಾರ್ಮಿಕರನ್ನು ಕರೆತರಲಾಗುವುದು ಎಂದರು. ಮದ್ಯ ಮಾರಾಟ ನಿಷೇಧಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮದ್ಯ ನಿಷೇಧದಿಂದ ಆರ್ಥಿಕವಾಗಿ ಕೊಂಚ ತೊಂದರೆಯಾಗಬಹುದು. ಕೋವಿಡ್ ಲಾಕ್‌ಡೌನ್‌ ಅವಧಿಯಲ್ಲಿ ಕುಡಿಯುವವರು ಮದ್ಯ ಸೇವಿಸುವ ಚಟದಿಂದ ಮುಕ್ತರಾಗಿರುತ್ತಾರೆ. ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸುವುದು ಇದು ಸೂಕ್ತ ಸಮಯ ಎಂದು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.