ಯಾದಗಿರಿಯಲ್ಲಿ 499 ಜನ ಸೋಂಕಿತರು ಗುಣಮುಖ


Team Udayavani, Jun 21, 2020, 7:53 AM IST

ಯಾದಗಿರಿಯಲ್ಲಿ 499 ಜನ ಸೋಂಕಿತರು ಗುಣಮುಖ

ಸಾಂದರ್ಭಿಕ ಚಿತ್ರ

ಯಾದಗಿರಿ: ಜಿಲ್ಲೆಯ ಪಾಲಿಗೆ ಶನಿವಾರ ಸ್ವಲ್ಪ ನೆಮ್ಮದಿ ಮೂಡಿಸಿದ್ದು, ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು ಪತ್ತೆಯಾಗಿಲ್ಲ. ಕೋವಿಡ್‌-19 ಖಚಿತಪಟ್ಟ 877 ವ್ಯಕ್ತಿಗಳಲ್ಲಿ ಮತ್ತೆ 10 ಜನ ಸೇರಿದಂತೆ ಜೂನ್‌ 20ರವರೆಗೆ ಒಟ್ಟು 499 ಜನ ಗುಣಮುಖರಾಗಿದ್ದಾರೆ. ಉಳಿದ 377 ಪ್ರಕರಣಗಳು ಸಕ್ರಿಯವಾಗಿವೆ.

ಇನ್ನು ಜಿಲ್ಲೆಯಲ್ಲಿ ಶುಕ್ರವಾರದವರೆಗೆ ಸೋಂಕಿತರ ಸಂಪರ್ಕದಿಂದ ಕೋವಿಡ್ ಗೆ 8 ಜನ ತುತ್ತಾಗಿದ್ದಾರೆ. ಸೋಂಕು ಹರಡದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆಯಾಗಿ ಜಿಲ್ಲೆಯಲ್ಲಿ 71 ಕಂಟೇನ್ಮೆಂಟ್‌ ಝೋನ್‌ ರಚಿಸಿದೆ. ಶನಿವಾರದ 357 ನೆಗೆಟಿವ್‌ ವರದಿ ಸೇರಿ ಈವರೆಗೆ 20759 ಮಾದರಿಗಳ ವರದಿ ನೆಗೆಟಿವ್‌ ಬಂದಿವೆ. 499 ಜನರ ಮಾದರಿ ಸಂಗ್ರಹಿಸಲಾಗಿದ್ದು, ಇನ್ನು 1899 ಜನರ ವರದಿ ಬರುವುದು ಬಾಕಿಯಿದೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1377 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2779 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 173 ಜನ ಶಹಾಪುರ ಕೋವಿಡ್ ಕೇರ್‌ ಸೆಂಟರ್‌ ನಲ್ಲಿ 55, ಸುರಪುರ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 50 ಮತ್ತು ಬಂದಳ್ಳಿ ಏಕಲವ್ಯ ಕೋವಿಡ್ ಕೇರ್‌ ಸೆಂಟರ್‌ ನಲ್ಲಿ 68 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 21 ಸಾಂಸ್ಥಿಕ ಕ್ವಾರಂಟೈನ್‌ ಸೆಂಟರ್‌ಗಳಲ್ಲಿ ಒಟ್ಟು 743 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ತಿಳಿಸಿದ್ದಾರೆ.

ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ-ಟಿಶ್ಯೂ ಪೇಪರ್‌ ಬಳಸಬೇಕು. ಕೈ ಸ್ವಚ್ಛಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಬೇಕು ಮತ್ತು ಸಾಮಾಜಿಕ ಸಮೂಹ ಗುಂಪು ಸೇರಬಾರದು ಎಂದು ಸಲಹೆ ನೀಡಿದ್ದಾರೆ.

ಕೋವಿಡ್‌-19 ಪೀಡಿತ ಇತರೆ ದೇಶ, ರಾಜ್ಯಗಳಿಂದ ಯಾದಗಿರಿ ಜಿಲ್ಲೆಗೆ ಹಿಂತಿರುಗಿದ ದಿನದಿಂದ 14 ದಿನಗಳವರೆಗೆ ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ನಿಗದಿತ ಕ್ವಾರಂಟೈನ್‌ ಕೇಂದ್ರದಲ್ಲಿ ಪ್ರತ್ಯೇಕವಾಗಿರಬೇಕು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳಬೇಕು. ಮಾಹಿತಿಗಾಗಿ ಜಿಲ್ಲಾಡಳಿತದ ಕಂಟ್ರೋಲ್‌ ರೂಂ ಸಹಾಯವಾಣಿ ಸಂಖ್ಯೆ 08473- 253950 ಅಥವಾ ವಾಟ್ಸ್‌ಆ್ಯಪ್‌ ಸಂಖ್ಯೆ: 9449933946 ಅಥವಾ 24ಗಿ7 ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಲು ಜಿಲ್ಲಾಡಳಿತ ತಿಳಿಸಿದೆ.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.