ಶುದ್ಧ ನೀರಿಗಾಗಿ ಜನರ ಪರದಾಟ

Team Udayavani, May 18, 2022, 3:43 PM IST

17water

ಗುರುಮಠಕಲ್‌: ಸರ್ಕಾರ ಗ್ರಾಮೀಣ, ಪಟ್ಟಣ ಮತ್ತು ನಗರ ಪ್ರದೇಶಗಳ ಜನರ ಆರೋಗ್ಯ ದೃಷ್ಟಿಯಿಂದ ಸರ್ಕಾರ ಕೊಟ್ಯಂತರ ರೂ. ಖರ್ಚು ಮಾಡಿ ಶುದ್ಧ ಕುಡಿವ ನೀರಿನ ಘಟಕ ಸ್ಥಾಪಿಸುತ್ತಿದೆ. ಆದರೆ, ಪಟ್ಟಣದ ಉಪ್ಪರಗಡ್ಡ ವಾರ್ಡ್‌ನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ 6 ತಿಂಗಳಿಂದ ಸ್ಥಗಿತಗೊಂಡಿದ್ದು, ಶುದ್ಧ ಕುಡಿವ ನೀರಿಗಾಗಿ ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಪುರಸಭೆ ವತಿಯಿಂದ 2016-17ನೇ ಸಾಲಿನ ಟಿಎಸ್‌ಪಿ ಯೋಜನೆ ಅಡಿಯಲ್ಲಿ ಸಾವಿರ ಲೀ. ಶುದ್ಧ ನೀರಿನ ಘಟಕವನ್ನು 7 ಲಕ್ಷ ರೂ. ಅಂದಾಜು ಮೊತ್ತದಲ್ಲಿ ನಿರ್ಮಿಸಲಾಗಿದೆ. ಈ ಶುದ್ಧ ನೀರಿನ ಘಟಕ ಸ್ಥಗಿತವಾಗಿರುವುದರಿಂದ ಸುತ್ತಮುತ್ತಲಿನ ವ್ಯಾಪಾರಿಗಳು, ವಾರ್ಡ್‌ ಜನರಿಗೆ ಸಮಸ್ಯೆಯಾಗಿದೆ. ನೀರಿಗಾಗಿ ಜನ ಬೇರೆ ಘಟಕಗಳಿಗೆ ತೆರಳುವ ಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದಲ್ಲಿ ಅಂತರ್ಜಲ ಕುಸಿತದಿಂದ ಪ್ಲೊರೈಡ್‌ಯುಕ್ತ ನೀರು ಮಾರಕ ರೋಗಗಳಿಗೆ ಕಾರಣವಾಗಲಿದೆ ಎಂಬ ದೃಷ್ಟಿದಿಂದ ಅಸ್ತಿತ್ವಕ್ಕೆ ತರಲಾದ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿವೆ. ಇದರಿಂದಾಗಿ ಕುಡಿಯಲು ಪ್ಲೊರೈಡ್‌ಯುಕ್ತ ನೀರು ಬಳಕೆ ಮಾಡುವುದು ಅನಿವಾರ್ಯವಾಗಿದೆ. ಪುರಸಭೆ ಅಧಿಕಾರಿಗಳು ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ.

ಹೆಚ್ಚಿದ ನೀರಿನ ಬೇಡಿಕೆ

ಬೇಸಿಗೆ ಪ್ರಾರಂಭವಾಗಿದ್ದು, ಕುಡಿಯುವ ನೀರಿಗೆ ಬೇಡಿಕೆ ಹೆಚ್ಚಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಘಟಕ ಸ್ಥಗಿತವಾಗಿರುವುದರಿಂದ ಜನ ತೊಂದರೆ ಅನುಭವಿಸುವಂತಾಗಿದೆ. ಅದನ್ನು ತುರ್ತಾಗಿ ದುರಸ್ತಿ ಮಾಡಿಸಿ ಮರು ಚಾಲನೆ ಮಾಡಿದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ.

ಸರ್ವರಿಗೂ ಶುದ್ಧ ಕುಡಿಯುವ ನೀರಿನ ಪೂರೈಕೆ ಆಶಯೊಂದಿಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣವಾಗಿದೆ. ಕುಡಿಯುವ ನೀರಿನ ಘಟಕಗಳು ನಿಂತು ಹೋದರೆ ತಕ್ಷಣ ಅಧಿಕಾರಿಗಳು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ನಮ್ಮ ವಾರ್ಡ್‌ನಲ್ಲಿ ಕಳೆದ 6 ತಿಂಗಳಿಂದ ಶುದ್ಧ ನೀರಿನ ಘಟಕ ಸ್ಥಗಿತಗೊಂಡಿದೆ. ಎಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಿಲ್ಲ. ಬೇರೆ ಕಡೆ ಹೋಗಿ ನೀರನ್ನು ತೆಗೆದುಕೊಂಡು ಬರುವ ಸ್ಥಿತಿ ಬಂದಿದೆ. ಇನ್ನಾದರೂ ಸಂಬಂಧಿತರು ಸಮಸ್ಯೆ ಬಗೆಹರಿಸಿ ನೀರಿನ ಘಟಕವನ್ನು ಪುನಃ ಪ್ರಾರಂಭಿಸಬೇಕು. -ಅಯಾಜ್‌ ಅಲಿ, ವಾರ್ಡ್‌ ನಿವಾಸಿ

ನಾನು ಹೊಸದಾಗಿ ಪುರಸಭೆಗೆ ಬಂದಿದ್ದೇನೆ, ಸಮಸ್ಯೆಯ ಕುರಿತು ಈಗ ನಮ್ಮ ಗಮನಕ್ಕೆ ಬಂದಿದೆ. ಸಂಬಂಧಿ ತ ಗುತ್ತಿಗೆದಾರರಿಗೆ ಮಾತನಾಡಿ, ಶೀಘ್ರದಲ್ಲಿ ನೀರಿನ ಘಟಕವನ್ನು ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಲಾಗುವುದು. ಲಕ್ಷ್ಮೀಬಾಯಿ, ಪುರಸಭೆ ಮುಖ್ಯಾಧಿಕಾರಿ

-ಚೆನ್ನಕೇಶವಲು ಗೌಡ

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.