Udayavni Special

ಆಸರ್‌ ಮೊಹಲ್ಲಾ ಸೀಲ್‌ಡೌನ್‌: ಶಾಸಕರ ಭೇಟಿ

Team Udayavani, May 13, 2020, 6:10 AM IST

ಆಸರ್‌ ಮೊಹಲ್ಲಾ ಸೀಲ್‌ಡೌನ್‌: ಶಾಸಕರ ಭೇಟಿ

ಸುರಪುರ: ನಗರದ ಆಸರ್‌ ಮೊಹಲ್ಲಾದಲ್ಲಿ ಇಬ್ಬರಿಗೆ ಕೋವಿಡ್ ಸೋಂಕು ತಗುಲಿರುವ ಸುದ್ದಿ ತಾಲೂಕಿನ ಜನತೆಯನ್ನು ಆತಂಕಕ್ಕೀಡು ಮಾಡಿದ್ದು, ಮಂಗಳವಾರ ನಗರವನ್ನು ಮತ್ತೂಮ್ಮೆ ಲಾಕ್‌ಡೌನ್‌ ಮಾಡಲಾಗಿದೆ.

ಎಲ್ಲ ಅಂಗಡಿ-ಮುಂಗಟ್ಟುಗಳು ಬಂದ್‌ ಆಗಿದ್ದು, ನಗರದ ರಸ್ತೆಗಳು ಬಿಕೋ ಎನ್ನುತ್ತಿವೆ. ಕೆಲ ಬಡಾವಣೆಗಳ ಜನರು ತಮ್ಮ ತಮ್ಮ ಬಡಾವಣೆಗಳಲ್ಲಿ ಮುಳ್ಳು, ತಂತಿ ಬೇಲಿ ಹಾಕಿ ರಸ್ತೆ ಬಂದ್‌ ಮಾಡಿದ್ದಾರೆ. ಗ್ರಾಮೀಣ ಜನರು ಸಹ ನಗರಕ್ಕೆ ಹೆಜ್ಜೆ ಹಾಕಿಲ್ಲ. ಕೆಲ ಗ್ರಾಮಗಳಲ್ಲಿ ಮುಳ್ಳು ಬೇಲಿ ಹಾಕಿದರೆ ಇನ್ನೂ ಕೆಲ ಗ್ರಾಮಗಳ ರಸ್ತೆಯನ್ನೆ ಅಗೆದು ತಗ್ಗು ಗುಂಡಿ ತೋಡಿಬಿಟ್ಟಿದ್ದಾರೆ. ಆಸರ್‌ ಮೊಹಲ್ಲಾವನ್ನು ಸಂಪೂರ್ಣ ಸೀಲ್‌ಡೌನ್‌ ಮಾಡಲಾಗಿದೆ.

ಶಾಸಕ ರಾಜುಗೌಡ ಭೇಟಿ: ಆಸರ್‌ ಮೊಹಲ್ಲಾದಲ್ಲಿ ಇಬ್ಬರಿಗೆ ಕೋವಿಡ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಶಾಸಕ ರಾಜುಗೌಡ ಮಂಗಳವಾರ ಬಡಾವಣೆಗೆ ಭೇಟಿ ನೀಡಿದರು.ಮೊಹಲ್ಲಾ ಸೀಲ್‌ಡೌನ್‌ ಮಾಡಿಸಿ ಬಡಾವಣೆಯಲ್ಲಿ ಸೋಂಕು ನಿವಾರಣಾ ಔಷಧಿ ಸಿಂಪಡಿಸಲು ಸೂಚಿಸಿದರು. ಬಳಿಕ ಅಲ್ಲಿಯ ಜನತೆಗೆ ಧೈರ್ಯ ತುಂಬಿದರು. ಪ್ರಕರಣದಿಂದ ಯಾರು ಭಯಪಡಬಾರದು. ಅನಾವಶ್ಯಕವಾಗಿ ಹೊರಗಡೆ ತಿರುಗಾಡಬಾರದು. ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ತಿಳಿ ಹೇಳಿದರು.

ತಹಶೀಲ್ದಾರ್‌ ನಿಂಗಣ್ಣ ಬಿರಾದಾರ, ಡಿವೈಎಸ್‌ಪಿ ವೆಂಕಟೇಶ ಹೊಗಿಬಂಡಿ, ಟಿಎಚ್‌ಒ ಡಾ| ಆರ್‌.ವಿ.ನಾಯಕ, ಸಿಪಿಐ ಸಾಹೇಬಗೌಡ ಪಾಟೀಲ, ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಇದ್ದರು. ಕ್ವಾರಂಟೈನ್‌ ಕೇಂದ್ರಕ್ಕೆ ಭೇಟಿ: ವಲಸೆ ಕಾರ್ಮಿಕರಿಗೆ ನಗರದ ಸರಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಕ್ವಾರಂಟೈನ್‌ ವ್ಯವಸ್ಥೆ ಮಾಡಲಾಗಿದೆ. ಕ್ವಾರಂಟೈನ್‌ ಕೇಂದ್ರಕ್ಕೆ ಶಾಸಕ ರಾಜುಗೌಡ ಭೇಟಿ ನೀಡಿದರು. ಮಾಸ್ಕ್, ಸಾಮಾಜಿಕ ಅಂತರ, ಸ್ವತ್ಛತೆ ಪಾಲಿಸುವಂತೆ ಮನವಿ ಮಾಡಿದರು.

ಕೋವಿಡ್ ತಡೆಯಲು ಸಿದ್ಧ: ಪತ್ರಕರ್ತರೊಂದಿಗೆ ಮಾತನಾಡಿದ ಶಾಸಕ ರಾಜುಗೌಡ, ಗುಜರಾತಿನ ಅಹ್ಮದಾಬಾದ್‌ನಿಂದ ಬಂದ ಇಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯ ಕೋವಿಡ್‌ ರೂಂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಾಲೂಕಿನ ಜನತೆ ಭಯಪಡುವ ಆತಂಕವಿಲ್ಲ. ಕೋವಿಡ್ ತಡೆಯಲು ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಪೊಲೀಸ್‌ ಇಲಾಖೆ ಸರ್ವ ರೀತಿಯಿಂದಲೂ ಸಿದ್ಧವಾಗಿದೆ ಎಂದರು.

ಟಾಪ್ ನ್ಯೂಸ್

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadagiri news

ಕಾಲುವೆಗೆ ನೀರು ಹರಿಸಿ ಪುಣ್ಯ ಕಟ್ಟಿಕೊಳ್ಳಿ

26

ಪ್ರಶಸ್ತಿಯಿಂದ ಸಾಧಕನ ಜವಾಬ್ದಾರಿ ವೃದ್ದಿ

27

ದೇವಿಕೇರಾದಲ್ಲಿ ನ್ಯಾಯ ನಿಮ್ಮದು, ನೆರವು ನಮ್ಮದು

yadagiri news

ಮಧ್ಯವರ್ತಿಗಳಿಂದ ಮೋಸ ಹೋಗದಿರಿ

16

ಬಂಧಿತ ಕಳ್ಳನಿಂದ 7 ಬೈಕ್‌ಗಳ ಜಪ್ತಿ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.