ನಕಲಿ ಮದ್ಯ ಸಂಗ್ರಹ ಘಟಕದ ಮೇಲೆ ದಾಳಿ

Team Udayavani, May 21, 2022, 3:39 PM IST

13arrest

ಶಹಾಪುರ: ನಕಲಿ ಮದ್ಯ ಸಂಗ್ರಹಿಸಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡದ ಮೇಲಿಯೇ 40-50 ಜನರ ಗುಂಪು ಕಲ್ಲು ತೂರಾಟ ನಡೆಸಿ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಚಂದಾಪುರ ಗ್ರಾಮದ ಹೊರ ವಲಯದ ತೋಟವೊಂದರಲ್ಲಿ ನಡೆದಿದೆ.

ಈ ವೇಳೆ ಆರೋಪಿ ಹಣಮಂತ್ರಾಯ ಸದಾಶಿವ ಸಾಹು ಅವರನ್ನು ಅಬಕಾರಿ ಅಧಿಕಾರಿಗಳ ತಂಡ ಬಂಧಿಸಿ ಕರೆದೊಯ್ಯುವಾಗ ಗ್ರಾಮಸ್ಥರು ಹಾಗೂ ಆತನ ಹಿಂಬಾಲಕರು ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಗಾಯಗೊಂಡ ಅಧಿಕಾರಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಚಂದಾಪುರ ಗ್ರಾಮದ ಹೊರ ವಲಯದ ತೋಟವೊಂದರಲ್ಲಿ ಗುರುವಾರ ಸಂಜೆ ದಾಳಿ ನಡೆಸಿದ ಅಧಿಕಾರಿಗಳು 45 ನಕಲಿ ಮದ್ಯದ ಬಾಕ್ಸ್‌ (ಅಂದಾಜು 12 ಲಕ್ಷಕ್ಕೂ ಅಧಿಕ ಮೌಲ್ಯ) ವಶಕ್ಕೆ ಪಡೆದಿದ್ದಾರೆ. ಚಾಮನಾಳ ಮೂಲಕ ಚಂದಾಪುರ ಗ್ರಾಮದ ಕಡೆ ಕಾರೊಂದರಲ್ಲಿ ನಕಲಿ ಮದ್ಯ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪ ನೀರಿಕ್ಷಕ ವಿಜಯಕುಮಾರ ಹಿರೇಮಠ ಹಾಗೂ ತಂಡ ಚಂದಾಪುರ ಮಾರ್ಗದಲ್ಲಿ ತಪಾಸಣೆಗಾಗಿ ನಿಂತ ವೇಳೆ ಕೆಎ 33ಎ 7677 ಸ್ವಿಫ್ಟ್‌ ಡಿಸೈರ್‌ ಕಾರು ಪರಿಶೀಲಿಸಿದಾಗ ಡಿಕ್ಕಿಯಲ್ಲಿ ನಕಲಿ ಮದ್ಯ ಪತ್ತೆಯಾಗಿದೆ.

ಚಾಲಕನನ್ನು ವಿಚಾರಿಸಲಾಗಿ, ಆತ ಹಣಮಂತ್ರಾಯ ತಂದೆ ಸದಾಶಿವ ಸಾಹು ಎಂದು ತಿಳಿದು ಬಂದಿದ್ದು, ಸಮೀಪದ ತೋಟದ ಮನೆಯಲ್ಲಿ ಸಂಗ್ರಹಿಸಲು ತೆಗೆದುಕೊಂಡು ಹೋಗುತ್ತಿರುವೆ ಎಂದು ಬಾಯಿ ಬಿಟ್ಟಿದ್ದಾನೆ. ಆತನ ಜೊತೆ ತೋಟದ ಮನೆಗೆ ಹೋಗಿ ಪರಿಶೀಲಿಸಲಾಗಿ 45 ಬಾಕ್ಸ್‌ ನಕಲಿ ಮದ್ಯ ಪತ್ತೆಯಾಗಿದೆ. ತೋಟದಲ್ಲಿದ್ದ ಇನ್ನೂ ನಾಲ್ವರನ್ನು ಬಂಧಿಸುವಷ್ಟರಲ್ಲಿ ಸುಮಾರು 40-50 ಜನ ಆಗಮಿಸಿ ಕಲ್ಲು ತೂರಾಟ ನಡೆಸಿ ಅಧಿಕಾರಿಗಳನ್ನು ಬಡಿದು ಆರೋಪಿ ಸಮೇತ ಪರಾರಿಯಾದ ಘಟನೆ ನಡೆದಿದೆ.

ಕಾರು ಮತ್ತು ನಕಲಿ ಮದ್ಯ ವಶಕ್ಕೆ ಪಡೆಯಲಾಗಿ ಮುಖ್ಯ ಆರೋಪಿ ಸೇರಿ ಐದು ಜನರ ವಿರುದ್ಧ ನಕಲಿ ಮದ್ಯ ಮಾರಾಟ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಅಬಕಾರಿ ಅಧಿಕಾರಿಗಳ ತಂಡ ಜಾಲ ಬೀಸಿದೆ.

40 ಜನ ಮೇಲೆ ಪ್ರಕರಣ: ದಾಳಿ ವೇಳೆ ಅಬಕಾರಿ ಅಧಿಕಾರಿಗಳು ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿದ ಸುಮಾರು 40 ಜನರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಗೋಗಿ ಠಾಣೆಯಲ್ಲಿ ಅಬಕಾರಿ ಉಪ ನಿರೀಕ್ಷಕ ವಿಜಯಕುಮಾರ ಹಿರೇಮಠ ಪ್ರಕರಣ ದಾಖಲಿಸಿದ್ದಾರೆ. ಹಲ್ಲೆಕೋರರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಎಫ್‌ಐಆರ್‌ನಲ್ಲಿ 20 ಜನರ ಹೆಸರು ದಾಖಲಿಸಿದ್ದು, ಇನ್ನುಳಿದ 20 ಜನರ ಹೆಸರು ವಿಳಾಸ ಪತ್ತೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿ ವೇಳೆ ಶಹಾಪುರ ಉಪ ವಿಭಾಗ ಉಪ ಅಧೀಕ್ಷಕ ಶ್ರೀರಾಮ ರಾಠೊಡ ನೇತೃತ್ವದಲ್ಲಿ ಶಹಾಪುರ ಉಪ ನಿರೀಕ್ಷಕ ಧನರಾಜ ಹಳ್ಳಿಖೇಡ, ಉಪ ನಿರೀಕ್ಷಕ ಸಾದಿಕ್‌ ಹುಸೇನ್‌, ಅಬಕಾರಿ ಪೇದೆಗಳು ಸೇರಿದಂತೆ ಆಯುಕ್ತರು ರಚಿಸಿದ ವಿಶೇಷ ತಂಡ ಭಾಗವಹಿಸಿತ್ತು.

ನಕಲಿ ಮದ್ಯದ ಜಾಲ ಆಳವಾಗಿ ವ್ಯಾಪಿಸಿದ್ದು, ಅದರ ನಿರ್ಮೂಲನೆಗೆ ಪಣ ತೊಡಲಾಗಿದೆ. ಅದನ್ನು ಬೇರು ಸಮೇತ ಕಿತ್ತೆಸೆಯುವವರಿಗೆ ಬಿಡುವುದಿಲ್ಲ. ಚಂದಾಪುರದಲ್ಲಿ ನಕಲಿ ಮದ್ಯ ಮಾರಾಟಗಾರ ಆರೋಪಿಯನ್ನು ನಮ್ಮ ಅಧಿಕಾರಿಗಳ ತಂಡ ಬಂಧಿಸಿ ತರುವಾಗ ಗ್ರಾಮಸ್ಥರೇ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಅಂದಾಜು 12 ಲಕ್ಷಕ್ಕೂ ಅಧಿಕ ಮೌಲ್ಯದ 45 ಬಾಕ್ಸ್‌ ನಕಲಿ ಮದ್ಯ ಮತ್ತು ಆರೋಪಿಯ ಸ್ವಿಫ್ಟ್‌ ಡಿಸೈರ್‌ ಕಾರು ವಶಕ್ಕೆ ಪಡೆಯಲಾಗಿದೆ. ಮೋತಿಲಾಲ್‌, ಅಬಕಾರಿ ಆಯುಕ್ತರು. ಯಾದಗಿರಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.