ಪ್ರವಾಸಿ ತಾಣವಾದ ಬಸವಸಾಗರ ಜಲಾಶಯ

Team Udayavani, Jul 30, 2018, 2:55 PM IST

yad-1.jpg

ನಾರಾಯಣಪುರ: ಆಲಮಟ್ಟಿ ಜಲಾಶಯದ ಒಳಹರಿವು ತಗ್ಗಿದ್ದರಿಂದ ಇಲ್ಲಿನ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿ ಪಾತ್ರಕ್ಕೆ ನೀರು ಹರಿಸುವ ಪ್ರಮಾಣ ಕಡಿಮೆ ಮಾಡಲಾಗಿದ್ದು, ಕಳೆದ 10 ದಿನಗಳಿಂದ ಮೈದುಂಬಿ ಹರಿಯುತ್ತಿದ ಕೃಷ್ಣಾ ನದಿ ಪ್ರವಾಹ ಪ್ರಮಾಣ ಕಡಿಮೆಯಾಗಿದೆ.

ಕೆಬಿಜೆಎನ್ನೆಲ್‌ ಅಣೆಕಟ್ಟು ಅಧಿಕಾರಿಗಳ ಮಾಹಿತಿಯಂತೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದ್ದರಿಂದ ಆಲಮಟ್ಟಿ ಲಾಲ್‌ ಬಹದ್ಧೂರ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಕಡಿಮೆಯಾಗಿದೆ. ಹೀಗಾಗಿ ಆಲಮಟ್ಟಿಯಿಂದ 30 ಸಾವಿರ ಕ್ಯೂಸೆಕ್‌ ನೀರನ್ನು ಬಸವಸಾಗರ ಜಲಾಶಯಕ್ಕೆ ಹರಿಬಿಡುಲಾಗುತ್ತಿದೆ.

ಶನಿವಾರ ಒಳಹರಿವು ಕಡಿಮೆಯಾಗಿದ್ದು, ರವಿವಾರ ಬೆಳಗ್ಗೆಯಿಂದಲೇ ಜಲಾಶಯದ 2 ಕ್ರಸ್ಟ್‌ಗೇಟ್‌ ಹಾಗೂ ಎಂಪಿಸಿಎಲ್‌ ಜಲವಿದ್ಯುತ್‌ ಸ್ಥಾವರ ಸೇರಿದಂತೆ ಎಡ, ಬಲ ದಂಡೆ ಮುಖ್ಯ ಕಾಲುವೆಗಳ ಮುಖಾಂತರ ಒಟ್ಟು 30 ಸಾವಿರ ಕ್ಯೂಸೆಕ್‌ ನೀರನ್ನು ಜಲಾಶಯದಿಂದ ಹೊರಬಿಡಲಾಗಿದೆ.
 
ಪ್ರಸ್ತುತ ಮುಂಗಾರು ಹಂಗಾಮಿನ ಬೆಳೆಗಳಿಗಾಗಿ ಅಚ್ಚುಕಟ್ಟು ವ್ಯಾಪ್ತಿಯ ಜಮೀನುಗಳಿಗೆ ನೀರಾವರಿ ಸಲಹಾ ಸಮಿತಿ ಸಭೆ ನಿರ್ಣಯದಂತೆ ಜು. 17ರಿಂದ ಎಡ, ಬಲದಂಡೆ ಮುಖ್ಯ ಕಾಲುವೆಗಳಿಗೆ ನೀರು ಹರಿಸಲು ಆರಂಭಿಸಲಾಗಿತ್ತು. ನಂತರದಲ್ಲಿ ಭರ್ತಿಯಾದ ಜಲಾಶಯಕ್ಕೆ ಆಲಮಟ್ಟಿ ಅಣೆಕಟ್ಟಿನಿಂದ ಬರುವ ಒಳಹರಿವು 1 ಲಕ್ಷ ಕ್ಯೂಸೆಕ್‌ಗೂ ಹೆಚ್ಚು ನೀರು ಹರಿಬಿಟ್ಟಿದ್ದರಿಂದ ಬಸವಸಾಗರ ಜಲಾಶಯದಿಂದ ನಿರಂತರ 1 ಲಕ್ಷ ಕ್ಯೂಸೆಕ್‌ ಹೆಚ್ಚು ಪ್ರಮಾಣದ ನೀರನ್ನು ಅಣೆಕಟ್ಟಿನ ಕ್ರಸ್ಟ್‌ಗೇಟ್‌ಗಳ ಮೂಲಕ ಕೃಷ್ಣಾ ನದಿ ಪಾತ್ರಕ್ಕೆ ಹರಿಬಿಡಲಾಗಿತ್ತು. 

ಪ್ರವಾಸಿಗರು ಸಂಭ್ರಮ: ಬಸವಸಾಗರ ಜಲಾಶಯ ವೀಕ್ಷಣೆಗೆ ಸುತ್ತಮುತ್ತಲಿನ ಜಿಲ್ಲೆಗಳ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ತಂಡೋಪ ತಂಡವಾಗಿ ಆಗಮಿಸಿ ಜಲಾಶಯ ಕ್ರಸ್ಟ್‌ಗೇಟ್‌ ಮೂಲಕ ರಭಸದಿಂದ ಬರುವ ಜಲಧಾರೆ ಕಣ್ತುಂಬಿಕೊಂಡು ಸಂಭ್ರಮಿಸುವುದು ಕಂಡು ಬಂತು. ನಂತರದಲ್ಲಿ ಜಲಾಶಯ ಪ್ರದೇಶದ ಮರದ ನೆರಳಿನಲ್ಲಿ ಬಂಧು ಮಿತ್ರರೊಂದಿಗೆ ಭೋಜನ ಸವಿದರು. ಇತರೆ ದಿನಗಳಿಗೆ ಹೋಲಿಸಿದರೆ ಜಲಾಶಯಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ರವಿವಾರ ಹೆಚ್ಚಾಗಿರುತ್ತದೆ ಎಂದು ಅಣೆಕಟ್ಟು ಅಧಿಕಾರಿಗಳು ತಿಳಿಸಿದ್ದಾರೆ.

ತಗ್ಗಿದ ಪ್ರವಾಹ: 1 ಲಕ್ಷ ಕ್ಯೂಸೆಕ್‌ ಹೆಚ್ಚು ಪ್ರಮಾಣದ ನೀರಿನ ಪ್ರವಾಹದಿಂದ ಕೃಷ್ಣಾ ನದಿ ತೀರದಲ್ಲಿ ಬರುವ ಜನ ವಸತಿಗಳಿರುವ ನಡುಗಡ್ಡೆಗಳು ಜಲಾವೃತಗೊಂಡು, ಅಲ್ಲಿನ ಜನತೆ ತೊಂದರೆ ಅನುಭವಿಸಿದನ್ನು ಸ್ಮರಿಸಬಹುದು. ಪ್ರಸ್ತುತ ಒಳಹರಿವು ತಗ್ಗಿದ್ದರಿಂದ ಪ್ರವಾಹ ಭಾದಿತ ಸಂತ್ರಸ್ತರು ನಿರಾಳಾಗಿದ್ದಾರೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.