
ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಡಿಸಿ
Team Udayavani, Dec 2, 2020, 3:33 PM IST

ಯಾದಗಿರಿ: ಕೋವಿಡ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವುದರೊಂದಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೋವಿಡ್-19 ಮುಂಜಾಗ್ರತಾ ಕ್ರಮಗಳ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೋವಿಡ್ ಸೋಂಕು ಕುರಿತು ಎಚ್ಚರಿಕೆ ವಹಿಸಬೇಕು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಜ್ವರ, ತಲೆ ನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯೂಮೋನಿಯಾಹಾಗೂ ಬೇಧಿ ಉಂಟಾದಾಗ ಭಯಪಡುವ ಅಗತ್ಯವಿಲ್ಲ. ಸಾರ್ವಜನಿಕ ಅಥವಾ ಜಿಲ್ಲಾ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುವಂತೆ ಅರಿವು ಮೂಡಿಸಬೇಕು ಎಂದರು.ಜಿಲ್ಲೆಯಲ್ಲಿ ಪ್ರಸ್ತುತ ನಗರ ಪ್ರದೇಶದಲ್ಲಿ 157 ಜನ ಕ್ವಾರಂಟೈನ್‌ನಲ್ಲಿದ್ದಾರೆ. ಯಾದಗಿರಿ ನಗರಸಭೆ ವ್ಯಾಪ್ತಿಯಲ್ಲಿ 57, ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ 4, ಗುರುಮಠಕಲ್ ಪುರಸಭೆ ವ್ಯಾಪ್ತಿಯಲ್ಲಿ 28, ಸುರಪುರ ನಗರಸಭೆ ವ್ಯಾಪ್ತಿಯಲ್ಲಿ 45, ಕಕ್ಕೇರಾ ಪುರಸಭೆ 23 ಜನರು ಹಾಗೂ ಗ್ರಾಮೀಣ ಭಾಗದಲ್ಲಿ ಶಹಾಪುರ ತಾಲೂಕು- 34, ಸುರಪುರ ತಾಲೂಕು- 22, ಯಾದಗಿರಿ ತಾಲೂಕು-13 ಜನರಿದ್ದಾರೆ. ಅವರ ಮನೆಗಳಿಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡುವಂತೆ ಸೂಚಿಸಿದರು.
ಮಾಸ್ಕ್ ಧರಿಸದೇ ಇರುವವರಿಗೆ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಪೊಲೀಸ್ ಇಲಾಖೆಯಿಂದ ಹಾಗೂ ಎಲ್ಲ ಗ್ರಾಪಂ ವತಿಯಿಂದ ಕಳೆದೊಂದು ವಾರದಲ್ಲಿ ಒಟ್ಟು 1,415 ಜನರಿಗೆ ದಂಡ ವಿಧಿ ಸಲಾಗಿದ್ದು, 1,41,500 ರೂ. ಮೊತ್ತ ಸಂಗ್ರಹವಾಗಿದೆ ಎಂದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್, ಸಹಾಯಕ ಆಯುಕ್ತ ಶಂಕರ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri; ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Yadagiri: ಜಿಲ್ಲಾಧಿಕಾರಿಯಿಂದ ಸಾರ್ವಜನಿಕ ಆರೋಗ್ಯ ತಪಾಸಣೆಗೆ ಚಾಲನೆ

Yadagiri; ಟೆಂಡರ್ ವಿಳಂಬ ಸಲ್ಲದು: ಅಧಿಕಾರಿಗಳಿಗೆ ಸಚಿವ ದರ್ಶನಾಪುರ ಎಚ್ಚರಿಕೆ

Yadgir ; 150 ಕೆಜಿ ಶ್ರೀಗಂಧ ಸಹಿತ ಆರೋಪಿ ಬಂಧನ: ಓರ್ವ ಆರೋಪಿ ಪರಾರಿ
MUST WATCH
ಹೊಸ ಸೇರ್ಪಡೆ

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್ ಸಿಂಹ ವಾಗ್ದಾಳಿ

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಅವರ ಪತ್ನಿ ರಾಧಾ ಕಾಮತ್ ನಿಧನ

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್‌ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್ ಆಟಗಾರ