
ನಾಳೆ ಭಾರತ್ ಬಂದ್; ಯಶಸ್ಸಿಗೆ ಮನವಿ
Team Udayavani, Dec 7, 2020, 5:51 PM IST

ಯಾದಗಿರಿ: ಡಿ.8ರಂದು ಅಖೀಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿರುವ ಭಾರತ್ ಬಂದ್‌ನ್ನು ಬೆಂಬಲಿಸಿ ಯಾದಗಿರಿಯಲ್ಲಿ ರೈತ ಕೃಷಿ ಕಾರ್ಮಿಕರ ಸಂಘಟನೆ, ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘಗಳು ಜಂಟಿಯಾಗಿ ಪ್ರತಿಭಟನೆ ನಡೆಸಲು ಸಜ್ಜಾಗಿವೆ ಎಂದು ರೈತ ಕೃಷಿ ಕಾರ್ಮಿಕರ ಸಂಘಟನೆ ಜಿಲ್ಲಾಧ್ಯಕ್ಷ ಶರಣಗೌಡ ಗೂಗಲ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ಪಂಜಾಬ್ ಸೇರಿದಂತೆ ವಿವಿಧ ರಾಜ್ಯದ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಕಾಯ್ದೆಗಳನ್ನು ಜಾರಿಗೆತಂದು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಆರೋಪಿಸಿದರು.
ಸರ್ಕಾರ ಎರಡು ಸುತ್ತಿನ ಮಾತುಕತೆ ನಡೆಸಿ ಕಾಯ್ದೆ ತಿದ್ದುಪಡಿ ಮಾಡುವುದಾಗಿ ಹೇಳುತ್ತಿದ್ದು, ಅದಕ್ಕೆ ನಮ್ಮ ಒಪ್ಪಿಗೆ ಇಲ್ಲ. ರೈತ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಲಾಗಿದೆ. ಆದರೆ, ಸರ್ಕಾರ ಕಾರ್ಪೋರೇಟ್ ಕುಳಗಳಿಗೆ ಮೇವು ಹಾಕಲು ಹೊರಟಿದೆ ಎಂದರು.
ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಚೆನ್ನಪ್ಪ ಆನೆಗುಂದಿ ಮಾತನಾಡಿ, ಡಿ.8ರಂದು ಜಿಲ್ಲಾ ಕೇಂದ್ರ ಬಂದ್ ಮಾಡಲು ನಿರ್ಧರಿಸಲಾಗಿದೆ. ಇದಕ್ಕೆ ಎಲ್ಲಾ ವ್ಯಾಪಾರಸ್ಥರು, ಸಾರಿಗೆ, ಹೋಟೆಲ್ ಸೇರಿದಂತೆ ವಿವಿಧ ಉದ್ಯಮಿಗಳ ಬೆಂಬಲ ಕೇಳಲಾಗುತ್ತದೆ ಎಂದರು. ಈ ವೇಳೆ ರೈತ ಸಂಘದ ಪ್ರಮುಖರಾದ ಭೀಮರಾಯ ಯಡ್ಡಳ್ಳಿ ಇತರರು ಇದ್ದರು.
ಎಐಡಿಎಸ್‌ಒ ಬೆಂಬಲ :
ಯಾದಗಿರಿ: ರೈತ ವಿರೋಧಿ ಕಾನೂನುಗಳ ವಿರುದ್ಧ ಕರೆ ನೀಡಿರುವ ಭಾರತ್ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಜಿಲ್ಲೆಯ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಸಮಿತಿ ಹೇಳಿಕೆ ಬಿಡುಗಡೆಗೊಳಿಸಿದೆ.
ಡಿ.8ರಂದು ಭಾರತ್ ಬಂದ್‌ಗೆ ತಮ್ಮ ಸಂಪೂರ್ಣ ಬೆಂಬಲವಿದ್ದು, ದೇಶದ ಜನರು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಾಗೂ ಮಹಾಮಾರಿ ಕಾಡುತ್ತಿರುವ ಹೊತ್ತಿನಲ್ಲಿ, ಕೇಂದ್ರದ ಬಿಜೆಪಿ ಸರ್ಕಾರವು ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತಂದಿದ್ದು, ಸರ್ಕಾರ ನಿಜವಾಗಿಯೂ ಯಾರ ಹಿತಾಸಕ್ತಿಯನ್ನು ಕಾಪಾಡುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ. ಕರಾಳ ಕಾನೂನುಗಳನ್ನು ಶೀಘ್ರವೇ ಹಿಂಪಡೆಯಬೇಕೆಂದು ಸರ್ಕಾರವನ್ನು ಎಐಡಿಎಸ್‌ಒ ಅಧ್ಯಕ್ಷ ಸೈದಪ್ಪ ಎಚ್.ಪಿ ಹಾಗೂ ಕಾರ್ಯದರ್ಶಿ ಸುಭಾಷಚಂದ್ರ ಬಿ.ಕೆ ಜಂಟಿ ಹೇಳಿಕೆಯಲ್ಲಿ ಒತ್ತಾಯಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಡಿಎಚ್ಓ ಮನೆ ಮೇಲೆ ಲೋಕಾಯುಕ್ತರ ದಾಳಿ

Drought; ರೈತರಿಗೆ ಬರ ಪರಿಹಾರ ನೀಡಲು ಮುಂದಾಗಿ: ಅರವಿಂದ ಬೆಲ್ಲದ

KAE ಪರೀಕ್ಷಾ ಅಕ್ರಮ: ಸರಕಾರ ಪಾರದರ್ಶಕ ತನಿಖೆ ನಡೆಸುತ್ತಿದೆ: ಸಚಿವ ಹೆಚ್.ಕೆ.ಪಾಟೀಲ್

Yadgir: ಐತಿಹಾಸಿಕ ಸ್ಥಳಗಳು ನಮ್ಮ ಸಂಸ್ಕೃತಿಯ ಪ್ರತೀಕ: ಸಚಿವ ಹೆಚ್.ಕೆ.ಪಾಟೀಲ್

Yadagiri; ಪ್ರಜ್ಞಾವಂತ ಸಮಾಜ ಕಟ್ಟಲು ಶಿಕ್ಷಕರ ಪಾತ್ರ ಹಿರಿದು: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ

Politics: ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್,ಅರ್ಜುನ್ ಮುಂಡಾಗೆ ಹೆಚ್ಚುವರಿ ಖಾತೆ

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

China: ದೇಶಕ್ಕೆ ಚೀನ ಸೋಂಕು?- ದಿಲ್ಲಿ ಏಮ್ಸ್‌ನಲ್ಲಿ ಏಳು ಮಾದರಿ ಪಾಸಿಟಿವ್

ಕೆಂಪಣ್ಣ ಹೊಸ ಕಮಿಷನ್ ಬಾಂಬ್ -ಆಗ ರಾಜಕಾರಣಿಗಳು; ಈಗ ಅಧಿಕಾರಿಗಳ ದರಬಾರು ನಡೆಯುತ್ತಿದೆ

Mangaluru: ಅತಿಥಿ ಉಪನ್ಯಾಸಕರ ಖಾಯಮಾತಿ ಆಗ್ರಹಿಸಿ ಪ್ರತಿಭಟನೆ