ಸೌಲಭ್ಯ ಕಲ್ಪಿಸಲು ಆಸ್ಪತ್ರೆ ನಿರ್ಮಾಣ

Team Udayavani, Jan 4, 2019, 9:47 AM IST

yad-1.jpg

ಶಹಾಪುರ: ರೋಗಿಗಳಿಗೆ ಮೂಲಭೂತ ಸೌಕರ್ಯ ಹಾಗೂ ಆರೋಗ್ಯಕರ ವಾತಾವರಣ ನೀಡುವ ಸದುದ್ದೇಶಗಳಿಂದ
ಸರ್ಕಾರಿ ಆಸ್ಪತ್ರೆಯಲ್ಲಿ ವಿವಿಧ ವಾರ್ಡ್‌ ಮತ್ತು ಒಳ ರೋಗಿಗಳ ಮತ್ತು ತಪಾಸಣೆ ಸೇರಿದಂತೆ ಇತರೆ ಸೌಲಭ್ಯಗಳಿಗಾಗಿ ಒಟ್ಟು 75 ಲಕ್ಷ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುತ್ತಿದೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ತಿಳಿಸಿದರು.

ನಗರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ನವೀಕರಣ ಕಾಮಗಾರಿ ವೀಕ್ಷಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಸರ್ಕಾರಿ ಆಸ್ಪತ್ರೆ ಗಂಗಾವತಿ ಆಸ್ಪತ್ರೆ ಮಾದರಿಯಲ್ಲಿ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದು, ಅದಕ್ಕೆ ಬೇಕಾದ ಅನುದಾನ ಬಿಡುಗಡೆ ಮಾಡಲಾಗಿದೆ. ಗಂಗಾವತಿ ಆಸ್ಪತ್ರೆಯಂತೆ ಸಕಲ ಸೌಲಭ್ಯ ಶುಚಿಯುತವಾಗಿ ನಿರ್ಮಿಸಲಾಗುವುದು ಎಂದರು.

ಪ್ರತಿ ವಾರ್ಡ್‌ಗಳಲ್ಲಿ ಸಿಸಿ ಟಿವಿ ಮತ್ತು ಎಸಿ ಅಳವಡಿಸುವಂತೆ ಸೂಚನೆ ನೀಡಿದ್ದೇನೆ. ಅಲ್ಲದೇ ಎಚ್‌ಕೆಆರ್‌ಡಿಬಿ ಅನುದಾನದಡಿ 60 ಲಕ್ಷ ರೂ. ವೆಚ್ಚದಲ್ಲಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸಿಸಿ ರಸ್ತೆ ಮತ್ತು ವಾಲ್‌ ಟೈಲ್ಸ್‌, ಕುಡಿಯುವ ನೀರು ಪೂರೈಕೆಗೆ ಹಣ ನೀಡಲಾಗಿದೆ. ಹೆಚ್ಚುವರಿಯಾಗಿ 50 ಲಕ್ಷ ರೂ.ಗಳನ್ನು ಮಂಜೂರಿ ಮಾಡಲಾಗಿದೆ. ರೋಗಬಾಧೆ ನಿವಾರಣೆಗೆ ಆಗಮಿಸುವವರಿಗೆ ಆಸ್ಪತ್ರೆಯಲ್ಲಿ ಯಾವುದೇ ಕೊರತೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಹೇಳಿದರು.

ಈಗಾಗಲೇ ಆಯುರ್ವೇದಿಕ ಆಸ್ಪತ್ರೆ ನಿರ್ಮಾಣಗೊಂಡಿದ್ದು, ಯಾವುದೇ ಸೌಕರ್ಯ ಆರಂಭವಾಗಿಲ್ಲ. ಸಕಾಲದಲ್ಲಿ 50 ಲಕ್ಷ ರೂ.ಬಿಡುಗಡೆ ಮಾಡಲಾಗಿದ್ದು, ಶೀಘ್ರದಲ್ಲಿ ಸಕಲ ವ್ಯವಸ್ಥೆಯೊಂದಿಗೆ ಆಯುರ್ವೇದ ಆಸ್ಪತ್ರೆ ಕಾರ್ಯ ನಿರ್ವಹಿಸಲಿದೆ. ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ| ರಮೇಶ ಗುತ್ತೇದಾರ, ಡಾ| ಜಗದೀಶ ಉಪ್ಪಿನ್‌, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಲಿಂ ಸಂಗ್ರಾಮ, ಹಣಮಂತ್ರಾಯ ಯಕ್ಷಿಂತಿ, ತಿರುಪತಿಗೌಡ ಬಾಣತಿಹಾಳ ಇದ್ದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕ್ರೀಡಾಂಗಣ ನಿರ್ಮಾಣಕ್ಕೆ 2 ಕೋಟಿ ರೂ. ಮಂಜೂರಿ ಯಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಗೊಳ್ಳುವ ಸಕಲ ಸಿದ್ಧತೆಗಳು ಮುಂದುವರೆದಿವೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಬಹುದಿನಗಳ ಬೇಡಿಕೆ ಈಡೇರಿಸುವ ಮೂಲಕ ಕನಸು ನನಸಾಗಲಿದೆ.
  ಶರಣಬಸಪ್ಪಗೌಡ ದರ್ಶನಾಪುರ, ಶಾಸಕ

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.