ಸಂಭ್ರಮದ ವಿಶ್ವಾರಾಧ್ಯರ ರಥೋತ್ಸವ

Team Udayavani, Feb 21, 2018, 4:44 PM IST

yad-3.jpg

ಯಾದಗಿರಿ: ಸುಕ್ಷೇತ್ರ ಅಬ್ಬೆತುಮಕೂರಿನ ಸಿದ್ಧಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ ಲಕ್ಷಾಂತರ ಭಕ್ತರ ಜಯಘೋಷದ ಮಧ್ಯೆ ಸಂಭ್ರಮದಿಂದ ಮಂಗಳವಾರ ಸಂಜೆ ಜರುಗಿತು. ಸುಡು ಬಿಸಿಲಿನಲ್ಲಿಯೂ ಭಕ್ತ ಸಮೂಹ ತಂಡೋಪ ತಂಡವಾಗಿ ಅಬ್ಬೆತುಮಕೂರಿನ ಕಡೆಗೆ ಧಾವಿಸಿ ಬರುತ್ತಿದ್ದರು. ವಾಹನ ಮೂಲಕ ಬರುವರು ಒಂದೆಡೆಯಾದರೆ, ಪಾದಯಾತ್ರೆ ಮೂಲಕ ಭಕ್ತರು ಆಗಮಿಸುವುದು ಕಂಡು ಬಂತು.

ಪೀಠಾಧಿಪತಿ ಶ್ರೀ ಡಾ. ಗಂಗಾಧರ ಮಹಾಸ್ವಾಮಿಗಳು ಸಂಜೆ 6:30 ಗಂಟೆಗೆ ರಥವನ್ನೇರಿ ಚಾಲನೆ ನೀಡುವುದೇ ತಡ, ಭಕ್ತ ವೃಂದ ವಿಶ್ವಾರಾಧ್ಯ ಮಹಾರಾಜ ಕೀ ಜೈ, ಗಂಗಾಧರ ಮಹಾರಾಜ ಕೀ ಜೈ ಎಂಬ ಮುಗಿಲು ಮುಟ್ಟವ ಜಯಘೋಷ ಕೂಗಿ ರಥ ಎಳೆದು ಸಂಭ್ರಮಿಸಿದರು. 

ಜಿಲ್ಲೆಯ ಪ್ರತಿಷ್ಠಿತ ಆಧ್ಯಾತ್ಮಿಕ ಕೇಂದ್ರ ಜಾಗೃತ ಸ್ಥಾನವೆಂದು ಖ್ಯಾತವಾದ ಸಿದ್ಧ ಸಂಸ್ಥಾನದ ಶ್ರೀ ವಿಶ್ವಾರಾಧ್ಯರ ಜಾತ್ರೆಗೆ ನೆರೆಯ ಆಂಧ್ರ, ತೆಲಂಗಾಣ, ಮಹಾರಾಷ್ಟ್ರಗಳಿಂದಲೂ ಅಸಂಖ್ಯಾತ ಭಕ್ತರು ಆಗಮಿಸಿ ಆಶೀರ್ವಾದ ಪಡೆದರು. ಜಾತ್ರಾ ಮಹೋತ್ಸವದಲ್ಲಿ ಭಕ್ತರ ಸಾಮಗ್ರಿ ಖರೀದಿ ಜೋರಾಗಿತ್ತು. ಚಿಕ್ಕ-ಚಿಕ್ಕ ಮಕ್ಕಳು ಆಟಿಕೆ ಸಾಮಗ್ರಿ ಕೊಂಡು ಸಂಭ್ರಮಿಸಿದರು. 

ಆರೋಗ್ಯ ಇಲಾಖೆ ಸಿಬ್ಬಂದಿ ಭಕ್ತರಿಗೆ ಪ್ರಥಮ ಚಿಕಿತ್ಸೆಗಾಗಿ ಸಿದ್ಧತೆ ಮಾಡಿಕೊಂಡಿತ್ತು. ವಾಹನ ನಿಲುಗಡೆ ವ್ಯವಸ್ಥೆಯನ್ನು ಸ್ವಯಂ ಸೇವಕರು ಮಾಡಿದ್ದರು. ಒಟ್ಟಿನಲ್ಲಿ ಇಡೀ ಜಾತ್ರೆ ಶಾಂತಿ ಸುವ್ಯವಸ್ಥೆಯಿಂದ ನಡೆಯುವಂತೆ ಪೀಠಾಧಿ ಪತಿಗಳು ಸ್ವತಃ ಮುತುವರ್ಜಿ ವಹಿಸಿರುವುದು ಕಂಡು ಬಂದಿತು.

ಜಾತ್ರಾ ಮಹೋತ್ಸವದಲ್ಲಿ ಶ್ರೀ ಕಾಶಿ ಜ್ಞಾನ ಸಿಂಹಾಸನಾ ದೀಶ್ವರ, ಶ್ರೀ ಶ್ರೀ ಶ್ರೀ 1008 ಜಗದ್ಗುರು ಡಾ| ಚಂದ್ರ ಶೇಖರ ಮಹಾಸ್ವಾಮಿಗಳು, ಶಾಸಕ ಡಾ| ಎ.ಬಿ. ಮಾಲಕರೆಡ್ಡಿ, ಡಾ| ವೀರಬಸವಂತರೆಡ್ಡಿ ಮುದ್ನಾಳ್‌, ಚೆನ್ನಾರೆಡ್ಡಿ ತುನ್ನೂರು, ನಾಗನಗೌಡ ಕಂದಕೂರ, ಡಾ| ಸುಭಾಶ್ಚಂದ್ರ ಕೌಲಗಿ, ರಾಜಪ್ಪ ಗೌಡ, ಚಲನಚಿತ್ರ ನಿರ್ದೇಶಕ ಓಂ ಸಾಯಿಪ್ರಕಾಶ, ವೆಂಕಟರಡ್ಡಿಗೌಡ  ಬ್ಬೆತುಮಕೂರ, ನರಸಣಗೌಡ ರಾಯಚೂರು, ನಾಗರೆಡ್ಡಿ ಕರದಾಳ್‌, ಮಹೇಶ ಪಾಟೀಲ್‌, ವೆಂಕಟ್‌ರೆಡ್ಡಿ ಮಾಲಿಪಾಟೀಲ, ಜುಮಾಳಿಕೇರಿ ಬಾಂಬೆ, ಚನ್ನಪ್ಪಗೌಡ ಮೊಸಂಬಿ, ವಿಶ್ವಾನಾಥ ಶಿರವಾಳಕರ್‌, ಸಿದ್ದು ಪಾಟೀಲ ಮಳಗಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.