ಮಕ್ಕಳಿಗೆ ಮಾಹಿತಿ ತಂತ್ರಜ್ಞಾನ ಅರಿವು ಅಗತ್ಯ

Team Udayavani, Jan 26, 2022, 2:34 PM IST

18technology

ಶಹಾಪುರ: ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ತೀವ್ರತರವಾದ ಸ್ಪರ್ಧೆ ಇದ್ದು, ಅಂತಹ ಸ್ಪರ್ಧೆಗಳಲ್ಲಿ ಯಶಸ್ಸು ಸಾಧಿಸಬೇಕಾದರೆ ಮಾಹಿತಿ ತಂತ್ರಜ್ಞಾನದ ಜ್ಞಾನ ಕರಗತ ಮಾಡಿಕೊಳ್ಳಬೇಕೆಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಸಲಹೆ ನೀಡಿದರು.

ರಸ್ತಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜರುಗಿದ ಅಟಲ್‌ ಟಿಂಕರಿಂಗ್‌ ಲ್ಯಾಬ್‌ (ಎಟಿಎಲ್‌) ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಮೂರು ನೂತನ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಲಂ-371ಜೆ ಜಾರಿಯಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಹಲವಾರು ರೀತಿ ಸೌಲಭ್ಯ ದೊರೆತಿವೆ. ಸರ್ಕಾರಿ ನೌಕರಿ ಪಡೆಯುವಲ್ಲಿ ಅನುಕೂಲವಾಗಿದೆ. ಕಲ್ಯಾಣ ಕರ್ನಾಟಕ ಭಾಗದವರು ಕೆಎಎಸ್‌ ಅಧಿಕಾರಿಗಳು, ವೈದ್ಯರು, ಇಂಜಿನಿಯರ್‌, ಉಪನ್ಯಾಸಕರು ಮತ್ತು ಶಿಕ್ಷಕರಾಗಿ ನೇಮಕಗೊಳ್ಳುತ್ತಿದ್ದಾರೆ. ಇನ್ನೂ ಹಲವಾರು ಹುದ್ದೆಗಳು ಖಾಲಿ ಇದ್ದು, ವಿದ್ಯಾರ್ಥಿಗಳು ಈಗಿನಿಂದಲೇ ತಯಾರಿ ನಡೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸನ್ನದ್ಧರಾಗಬೇಕು. ಆ ನಿಟ್ಟಿನಲ್ಲಿ ನಿರಂತರ ಅಭ್ಯಾಸ ಮಾಡಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಾಂತಗೌಡ ಪಾಟೀಲ್‌ ಮಾತನಾಡಿ, ಕಳೆದ ವರ್ಷ ಯಾದಗಿರಿ ಜಿಲ್ಲೆ 112 ಮಹತ್ವಾಕಾಂಕ್ಷಿ ಜಿಲ್ಲೆಗಳ ಪಟ್ಟಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿ ಸಿದಂತೆ 15ನೇ ಶ್ರೇಣಿ ಪಡೆದಿತ್ತು. ಈ ತಿಂಗಳು ನಮ್ಮ ಜಿಲ್ಲೆ ಶೈಕ್ಷಣಿಕ ಗುಣಮಟ್ಟದಲ್ಲಿ 2ನೇ ಶ್ರೇಣಿ ಪಡೆದಿರುವುದು ಖುಷಿಯ ಸಂಗತಿಯಾಗಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶೈಕ್ಷಣಿಕ ಅಭಿವೃದ್ಧಿಗೆ ಸಾಕಷ್ಟು ಅನುದಾನ ಕಲ್ಪಿಸುತ್ತಿವೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ರಸ್ತಾಪುರ ಶಾಲೆ ಮಾದರಿಯಾಗಿದೆ ಎಂದರು. ಮುಖ್ಯಗುರು ಮಲ್ಲನಗೌಡ ಬಿರಾದಾರ ಪ್ರಾಸ್ತಾವಿಕ ಮಾತನಾಡಿದರು.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ ಪಾಟೀಲ್‌, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರಾಯಪ್ಪಗೌಡ ಹುಡೇದ, ಗ್ರಾಪಂ ಅಧ್ಯಕ್ಷ ವಿಶ್ವನಾಥ ರಡ್ಡಿ, ಎಸ್‌ಡಿಎಂಸಿ ಅಧ್ಯಕ್ಷ ಹೊನ್ನಪ್ಪ ಹೊಸ್ಮನಿ, ನಾಗಣ್ಣ ಪೂಜಾರಿ, ಸಣ್ಣನಿಂಗಪ್ಪ ನಾಯ್ಕೋಡಿ, ಶಂಬನಗೌಡ ಮಾಲಿಪಾಟೀಲ್‌, ಶರಬಣ್ಣ ಅಂಗಡಿ, ಅಮರಪ್ಪ ಜೇಗರಿ, ಅಂಬಿಕೇಶ್ವರಸ್ವಾಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

1-sadsad

CHC; ದಿಢೀರ್ ಭೇಟಿ ನೀಡಿ ಸಿಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಕಂದಕೂರ

FSL ವರದಿ ತಡವಾದರೂ, ಕಾನೂನು ಕ್ರಮ ಗ್ಯಾರಂಟಿ: ಸಚಿವ ರಾಮಲಿಂಗರೆಡ್ಡಿ

FSL ವರದಿ ತಡವಾದರೂ, ಕಾನೂನು ಕ್ರಮ ಗ್ಯಾರಂಟಿ: ಸಚಿವ ರಾಮಲಿಂಗಾರೆಡ್ಡಿ

ರಾಜ್ಯ ಸರ್ಕಾರದ ಜಾತಿಗಣತಿ ಅವೈಜ್ಞಾನಿಕ: ಜಯ ಮೃತ್ಯುಂಜಯ ಸ್ವಾಮೀಜಿ

Yadagiri; ರಾಜ್ಯ ಸರ್ಕಾರದ ಜಾತಿಗಣತಿ ಅವೈಜ್ಞಾನಿಕ: ಜಯ ಮೃತ್ಯುಂಜಯ ಸ್ವಾಮೀಜಿ

ರಾಜಾ ವೆಂಕಟ್ಟಪ್ಪ ನಾಯಕರಿಗೆ ಸಕಲ ಸರ್ಕಾರಿ ಗೌರವ; ಸಿಎಂ ಸಿದ್ದರಾಮಯ್ಯ ಭಾಗಿ

Yadagiri; ರಾಜಾ ವೆಂಕಟ್ಟಪ್ಪ ನಾಯಕರಿಗೆ ಸಕಲ ಸರ್ಕಾರಿ ಗೌರವ; ಸಿಎಂ ಸಿದ್ದರಾಮಯ್ಯ ಭಾಗಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.