ಸಂಘ-ಸಂಸ್ಥೆಗಳ ಸಹಕಾರ ಅನಿವಾರ್ಯ: ಡಿಸಿ


Team Udayavani, Apr 28, 2020, 6:34 PM IST

yg-tdy-1

ಯಾದಗಿರಿ: ತುರ್ತು ಪರಿಸ್ಥಿತಿ ನಿಭಾಯಿಸಲು ಸರ್ಕಾರದ ಜತೆಗೆ ಎನ್‌ಜಿಒ, ಸಂಘ-ಸಂಸ್ಥೆಗಳ ಸಹಕಾರ ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಂಘ-ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ 19 ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸರ್ಕಾರ ಲಾಕ್‌ಡೌನ್‌ ಜಾರಿ ಮಾಡಿದ್ದು, ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ವೈರಸ್‌ ಪ್ರಕರಣ ಕಂಡು ಬರದಿರುವುದು ಸಮಾಧಾನಕರ ಸಂಗತಿಯಾಗಿದೆ ಎಂದರು.

ಮೇ 3ರವರೆಗೆ ಈಗಾಗಲೇ ಲಾಕ್‌ಡೌನ್‌ ಜಾರಿಯಲ್ಲಿದೆ. ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಇದುವರೆಗೆ ಔಷಧ ಕಂಡು ಹಿಡಿದಿಲ್ಲ. ಆದ್ದರಿಂದ, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಜವಾಬ್ದಾರಿ. ಲಾಕ್‌ಡೌನ್‌ ಸಡಿಲಿಕೆ ಅಥವಾ ಮುಂದಿನ ಯಾವುದೇ ಬದಲಾವಣೆಗಳಿಗೆ ನಾವು ಸಿದ್ಧರಾಗಬೇಕಿದೆ. ಈ ನಿಟ್ಟಿನಲ್ಲಿ ಎನ್‌ಜಿಒ, ಸಂಘ-ಸಂಸ್ಥೆಗಳ ಪ್ರತಿನಿಧಿ ಗಳೊಂದಿಗೆ ಸಭೆ ಕರೆಯಲಾಗಿದೆ ಎಂದು ಹೇಳಿದರು.

ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರು ಸ್ವ-ಇಚ್ಛೆಯಿಂದ ದಾನ ಮಾಡುತ್ತಿರುವುದು, ರೈತರಿಗೆ ನೆರವಾಗುತ್ತಿರುವುದು ಶ್ಲಾಘನೀಯ. ದಾನಿಗಳು ಹೊಲಗಳಿಗೆ ಹೋಗಿ ಹಣ್ಣು ಖರೀದಿಸುತ್ತಿರುವುದರಿಂದ ರೈತರು ನಿಟ್ಟುಸಿರು ಬಿಡುವಂತಾಗಿದೆ. ಮುಂದಿನ ದಿನಗಳಲ್ಲಿ ವೈದ್ಯರು ಮತ್ತು ರೋಗಿಗಳು, ರೈತರು ಮತ್ತು ಮಾರಾಟಗಾರರು, ವ್ಯಾಪಾರಿಗಳು ಮತ್ತು ಗ್ರಾಹಕರ ಮಧ್ಯೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸಂಘ-ಸಂಸ್ಥೆಗಳಿಂದ ಇನ್ನೂ ಹೆಚ್ಚಿನ ನೆರವಿನ ಹಸ್ತ ಬೇಕಿದೆ.

ಈ ನಿಟ್ಟಿನಲ್ಲಿ ವಾಹನ, ಮಾಸ್ಕ್, ಸ್ಯಾನಿಟೈಸರ್‌, ಮಾನವ ಸಂಪನ್ಮೂಲ ಒದಗಿಸುವುದು ಸೇರಿದಂತೆ ಇನ್ನಿತರ ನೆರವು ನೀಡಬಹುದು. ವಾಹನ ವ್ಯವಸ್ಥೆ ಮಾಡಿದರೆ ಜಿಲ್ಲೆಯ ಯಾವುದೇ ಹಳ್ಳಿಗಳಲ್ಲಿ ಜ್ವರ ಬಂದ ಅಥವಾ ಇನ್ನಿತರ ರೋಗಿಗಳನ್ನು ಪ್ರತ್ಯೇಕವಾಗಿ ಆಸ್ಪತ್ರೆಗೆ ಕರೆದೊಯ್ಯಲು, ವಸ್ತುಗಳ ಹೋಮ್‌ ಡೆಲಿವರಿಯಂತಹ ಕಾರ್ಯಗಳಿಗೆ ನೆರವಾಗುತ್ತದೆ ಎಂದು ತಿಳಿಸಿದರು.

ಮಾಹಿತಿಗಾಗಿ ಜಿಲ್ಲಾಡಳಿತದ ಕಂಟ್ರೋಲ್‌ ರೂಂ ಸಹಾಯವಾಣಿ 08473-253950 ಸಂಖ್ಯೆ ಸಂಪರ್ಕಿಸಲು ಕೋರಿದರು. ರೆಡ್‌ಕ್ರಾಸ್‌ ಸಂಸ್ಥೆಯ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರೆಡ್ಡಿ, ಅಜೀಮ್‌ ಪ್ರೇಮ್‌ಜಿ ಫೌಂಡೇಶನ್‌ ಪ್ರತಿನಿಧಿ  ಅನಿಲ, ಕಲಿಕಾ ಟಾಟಾ ಟ್ರಸ್ಟ್‌ನ ಪ್ರತಿನಿ ಧಿ ಧನರಾಜ್‌, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಾಗೂ ತುಮಕೂರು ಸಕ್ಕರೆ ಕಾರ್ಖಾನೆಯ ಪ್ರತಿನಿಧಿಗಳು ಸೇರಿದಂತೆ ಭಾರತೀಯ ಜೈನ್‌ ಸಂಘಟನೆ, ರೋಟರಿ ಕ್ಲಬ್‌ ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಯವರು ಜಿಲ್ಲಾಡಳಿತ ನಡೆಸುತ್ತಿರುವ ಈ ಮಹತ್ವದ ಕಾರ್ಯದಲ್ಲಿ ತಾವು ಕೂಡ ಭಾಗಿಯಾಗುವುದಾಗಿ ತಿಳಿಸಿದರು.

ಜಿಪಂ ಸಿಇಒ ಶಿಲ್ಪಾ ಶರ್ಮಾ, ಸಹಾಯಕ ಆಯುಕ್ತ ಶಂಕರಗೌಡ ಎಸ್‌.ಸೋಮನಾಳ, ಡಾ.ಮಲ್ಲನಗೌಡ ಎಸ್‌.ಪಾಟೀಲ ಇದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.