ರೋಗ ನಿಯಂತ್ರಣಕ್ಕೆ ಸಹಕರಿಸಿ


Team Udayavani, Apr 18, 2021, 8:22 PM IST

ಷ್ಹತಗ್

ಯಾದಗಿರಿ: ಕೊರೊನಾ ಸೋಂಕಿನ ವಿರುದ್ಧ ಹೋರಾಟದಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ, ವಿವಿಧ ಇಲಾಖೆ ಅಧಿಕಾರಿಗಳು ಜಿಲ್ಲಾಡಳಿತದ ಜತೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಮನವಿ ಮಾಡಿದರು.

ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕೋವಿಡ್‌ ಜಿಲ್ಲಾ ಟಾಸ್ಕ್ಫೋರ್ಸ್‌ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಸುಮಾರು 500ಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ಹರಡುವಿಕೆ ನಿಯಂತ್ರಿಸಲು ಎಲ್ಲರ ಸಹಕಾರ ಅಗತ್ಯವಿದೆ. ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾಕ್ಕೆ ಹೆದರದೇ ಸಿಬ್ಬಂದಿ ಸರಿಯಾಗಿ ಚಿಕಿತ್ಸೆ ನೀಡಬೇಕು ಎಂದರು.

ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ಹಾಸಿಗೆಗಳನ್ನು ಸೋಂಕಿತರಿಗೆ ಮೀಸಲಿಡುವಂತೆ ಸರ್ಕಾರ ಆದೇಶಿಸಿರುವುದರಿಂದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಆಯಾ ಆಸ್ಪತ್ರೆ ಮುಖ್ಯಸ್ಥರು ತಮ್ಮ ಸಿಬ್ಬಂದಿಯನ್ನು ಪೂರ್ಣ ಪ್ರಮಾಣದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ನೋಡಿಕೊಳ್ಳಬೇಕು ಎಂದರು. ನಂತರ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ವಿವಿಧ ಸಮಿತಿ ನೇಮಕ ಮಾಡಲಾಯಿತು.

ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆ ಹಂಚುವಿಕೆ, ಹೋಂ ಕ್ವಾರಂಟೈನ್‌, ಕ್ವಾರಂಟೈನ್‌ ಆಪ್‌ ನಿರ್ವಹಣೆ ಸೇರಿದಂತೆ ಇತರೆ ತಂಡ ಮಾಡಿ ಅ ಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ತಹಶೀಲ್ದಾರ್‌ ಸೇರಿದಂತೆ ತಾಲೂಕು ಮಟ್ಟದ ಅ ಧಿಕಾರಿಗಳು ಹಾಗೂ ಗ್ರಾಮ ಮಟ್ಟದಲ್ಲಿ ಪಿಡಿಒ, ಆಶಾ-ಅಂಗನವಾಡಿ ಕಾರ್ಯಕರ್ತೆಯರು ಸಮಿತಿಯಲ್ಲಿ ಕಾರ್ಯ ನಿರ್ವಹಿಸುವರು. ಈ ವೇಳೆ ಜಿಪಂ ಸಿಇಒ ಶಿಲ್ಪಾ ಶರ್ಮಾ, ಹಿರಿಯ ಉಪ ವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಡಿಎಚ್‌ಒ ಡಾ| ಇಂದುಮತಿ ಕಾಮಶೆಟ್ಟಿ, ಅಬಕಾರಿ ಇಲಾಖೆ ಜಿಲ್ಲಾಧಿ ಕಾರಿ ಶಿವನಗೌಡ ಪಾಟೀಲ್‌, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಆರ್‌ಸಿಎಚ್‌ ಡಾ| ಸೂರ್ಯಪ್ರಕಾಶ್‌ ಕಂದಕೂರು, ಕ್ಷಯರೋಗ ನಿರ್ಮೂಲನ ಅಧಿಕಾರಿ ಡಾ| ಲಕ್ಷ್ಮೀಕಾಂತ್‌, ಡಾ| ಸಾಜಿದ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಇತರರು ಇದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.