ಕೋವಿಡ್ ಕೇರ್ ಸೆಂಟರ್ ಪರಿಶೀಲಿಸಿದ ಡಿಸಿ
ಕೋವಿಡ್ ಕೇರ್ ಸೆಂಟರ್ ಸುತ್ತಲಿನ ಪರಿಸರವು ಚೆನ್ನಾಗಿರಬೇಕೆಂದು ಹೇಳಿದರು.
Team Udayavani, Apr 20, 2021, 7:06 PM IST
ಯಾದಗಿರಿ: ನಗರದ ಹೊರವಲಯದಲ್ಲಿರುವ ಬಂದಳ್ಳಿ ಏಕಲವ್ಯ ಮಾದರಿ ವಸತಿ ಶಾಲೆ ಕಟ್ಟಡದಲ್ಲಿ ನಿರ್ಮಿಸಲಾಗಿರುವ ಸುಮಾರು 80ಕ್ಕೂ ಹೆಚ್ಚು ಹಾಸಿಗೆಯ ಕೋವಿಡ್ ಕೇರ್ ಸೆಂಟರ್‌ಗೆ ಸೋಮವಾರ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ಭೇಟಿ ನೀಡಿ ಪರಿಶೀಲಿಸಿದರು.
ಸ್ಥಳೀಯ ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯಲು ಬರುವ ಕೋವಿಡ್ ಸೋಂಕಿತರಿಗೆ ಉತ್ತಮ ಚಿಕಿತ್ಸೆ, ಆರೈಕೆ, ಊಟೋಪಹಾರದ ವ್ಯವಸ್ಥೆ, ಶುದ್ಧ ನೀರು, ಬೆಳಕಿನ ವ್ಯವಸ್ಥೆ ಜತೆಗೆ ಕೋವಿಡ್ ಕೇರ್ ಸೆಂಟರ್ ಸುತ್ತಲಿನ ಪರಿಸರವು ಚೆನ್ನಾಗಿರಬೇಕೆಂದು ಹೇಳಿದರು. ಕೋವಿಡ್ ಸೋಂಕಿತರಿಗೆ ಉತ್ತಮ ಆರೈಕೆ ಜತೆಗೆ ಅವರಿಗೆ ಮಾನಸಿಕ ಸ್ಥೈರ್ಯ ತುಂಬುವುದು ಅವಶ್ಯವಾಗಿದ್ದು, ಅ ಧಿಕಾರಿಗಳು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಸೂಚಿಸಿದರು. ಇದೇ ಸಂದರ್ಭದಲ್ಲಿ ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಹಾಗೂ ವಸತಿ ಶಾಲೆ ನಿಲಯಪಾಲಕ ಮತ್ತು ಗ್ರಾಮಲೆಕ್ಕಿಗರು ಸೇರಿದಂತೆ ಇತರರು ಇದ್ದರು.
ಯರಗೋಳ ಚೆಕ್‌ಪೋಸ್ಟ್ ಗೆ ಭೇಟಿ-ಪರಿಶೀಲನೆ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ
ಯರಗೋಳದಲ್ಲಿ ಸ್ಥಾಪಿಸಿರುವ ಕೋವಿಡ್ ಚೆಕ್‌ಪೋಸ್ಟ್‌ಗೆ ಸೋಮವಾರ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ಭೇಟಿ ನೀಡಿ ಪರಿಶೀಲಿಸಿದರು. ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ತೆಗೆದುಕೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲನೆ ಮಾಡುತ್ತಿರುವ ಬಗ್ಗೆ ಜಿಲ್ಲಾ ಧಿಕಾರಿಗಳು ವೀಕ್ಷಿಸಿದರು.
ಚೆಕ್‌ಪೋಸ್ಟ್‌ನಲ್ಲಿ ಬಹು ಹೊತ್ತು ನಿಂತು ವಾಹನಗಳ ಸಂಚಾರ ಹಾಗೂ ವಹಿಸಲಾಗಿರುವ ತಪಾಸಣಾ ಕಾರ್ಯ ಹಾಗೂ ಚೆಕ್‌ಪೋಸ್ಟ್‌ನಲ್ಲಿ ವಾಹನಗಳು ಮತ್ತು ಪ್ರಯಾಣಿಕರ ವಿವರ ದಾಖಲಿಸುತ್ತಿರುವ ಮಾಹಿತಿ ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಮಲೆಕ್ಕಿಗರು, ಪೊಲೀಸ್ ಇಲಾಖೆ ಸಿಬ್ಬಂದಿ ಸೇರಿದಂತೆ ಇತರರು ಇದ್ದರು.