ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಡಿಸಿ ಭೇಟಿ

Team Udayavani, Nov 11, 2020, 7:48 PM IST

ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಡಿಸಿ ಭೇಟಿ

ಯಾದಗಿರಿ: ನಗರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಕಾರಿ ಡಾ| ರಾಗಪ್ರಿಯಾ ಮಂಗಳವಾರ ನಗರದ ಹೊರ ವಲಯ ಬಬಲಾದ ಗ್ರಾಮದ ಹತ್ತಿರದ ಘನ ತ್ಯಾಜ್ಯ ನಿರ್ವಹಣೆ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಬಬಲಾದ ಗ್ರಾಮದ ಹತ್ತಿರದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ತ್ಯಾಜ್ಯ ನಿರ್ವಹಣಾ ಘಟಕ ಪರಿಶೀಲಿಸಿದ ಅವರು, ತ್ಯಾಜ್ಯ ವಿಲೇವಾರಿ ವೈಜ್ಞಾನಿಕವಾಗಿ ನಿರ್ವಹಿಸಲು ಅನುಕೂಲವಾಗುವಂತೆ ಸ್ಪತ್ಛ ಭಾರತ್‌ ಮಿಷನ್‌ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ತಿಳಿಸಿದರು. ಕಸದಿಂದ ಗೊಬ್ಬರ ತಯಾರಿಕೆ ಹಾಗೂ ಪ್ಲಾಸ್ಟಿಕ್‌ ತ್ಯಾಜ್ಯ ಬೇರ್ಪಡಿಸಿ ಸಿಮೆಂಟ್‌ ಕಂಪನಿಗಳಿಗೆ ಸಾಗಿಸಲು ಕ್ರಮ ಕೈಗೊಳ್ಳಬೇಕು ಮತ್ತು ಈಗಾಗಲೇ ಹಲವಾರು ದಿನಗಳಿಂದ ಸಂಗ್ರಹವಾಗಿರುವ ಪ್ಲಾಸ್ಟಿಕ್‌ ತ್ಯಾಜ್ಯ ಬೇರ್ಪಡಿಸಲು ಹಾಗೂ ತ್ಯಾಜ್ಯ ನಿರ್ವಹಣೆಗೆ ಅಗತ್ಯವಿರುವ ಮಾನವ ಸಂಪನ್ಮೂಲ (ಕಾರ್ಮಿಕರನ್ನು) ನಿಯೋಜಿಸಿಕೊಂಡು ತುರ್ತಾಗಿ ತ್ಯಾಜ್ಯ ವಿಲೇವಾರಿ ಮಾಡುವಂತೆ ನಿರ್ದೇಶನ ನೀಡಿದರು. ಈ ವೇಳೆ ನಗರಸಭೆ ಪೌರಾಯುಕ್ತ ಬಕ್ಕಪ್ಪ ಹೊಸಮನಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಗಂಗಾಧರ ಗೌಡ, ಪರಿಸರ ಇಂಜಿನಿಯರ್‌ ಸಂಗಮೇಶ, ಕಿರಿಯ ಇಂಜಿನಿಯರ್‌ ಲಿಂಗಾರೆಡ್ಡಿ ಇತರರು ಇದ್ದರು.

ಮಧ್ಯವರ್ತಿಗಳ ಹಾವಳಿ ತಡೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ :

ಯಾದಗಿರಿ: ಜಿಲ್ಲೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಕಂದಾಯ ಇಲಾಖೆ, ಭೂಮಾಪನ ಇಲಾಖೆಹಾಗೂ ನೋಂದಣಿ ಸೇರಿದಂತೆ ವಿದ್ಯುತ್‌ ಸರಬರಾಜು ಇಲಾಖೆಗಳನ್ನು ಭ್ರಷ್ಟಾಚಾರ ತಡೆದು ಮಧ್ಯವರ್ತಿಗಳ ಹಾವಳಿ ತಡೆಯಲು ಆಗ್ರಹಿಸಿ ನವ ಕರ್ನಾಟಕ ರೈತ ಸಂಘ ರಾಜ್ಯಪಾಲರಿಗೆ ಬರೆದ ಮನವಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿತು.

ಗ್ರಾಮೀಣ ಭಾಗಗಳಲ್ಲಿ ಫಲವತ್ತಾದ ಭೂಮಿ ಕಂದಾಯ ಇಲಾಖೆಯದಾಖಲೆಯಲ್ಲಿ ಬೆಳೆ ಸಮೀಕ್ಷೆ ನಡೆಯುತ್ತಿದೆ. ಆದರೆ ವಾಸ್ತವಿಕತೆಯೇ ಬೇರೆಯಾಗಿದ್ದು, ಅಲ್ಲಿ ಅಕ್ರಮ ಕಟ್ಟಡ ಕಾನೂನು ಬಾಹಿರವಾಗಿ ಮಾರಾಟ ಮಾಡಿ ಮನೆ ನಿರ್ಮಿಸಿಕೊಳ್ಳಲಾಗುತ್ತಿದೆ. ಇದಕ್ಕೆ ವಿವಿಧ ಇಲಾಖೆ ಅಧಿ  ಕಾರಿಗಳು ಪರವಾನಗಿ ನೀಡುತ್ತಿದ್ದಾರೆ ಎಂದು ಆರೋಪಿಸಿ ಇದರಿಂದ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದು ಸೂಕ್ತ ತನಿಖೆ ನಡೆಸಲು ಒತ್ತಾಯಿಸಿದ್ದಾರೆ.

ಕಂದಾಯ ಇಲಾಖೆ ಗ್ರಾಮ ಸೇವಕರಿಂದ ತಹಶೀಲ್ದಾರ್‌ ವರೆಗೆ ಮಧ್ಯವರ್ತಿ ಸೃಷ್ಟಿ ಮಾಡಿ ರೈತರ ಶೋಷಣೆ ನಡೆಯುತ್ತಿದೆ ಎಂದು ದೂರಿದ್ದಾರೆ. ಭೂಮಾಪನ ಇಲಾಖೆಯಲ್ಲಿ ಲಂಚವಿಲ್ಲದೇ ಕೆಲಸಗಳು ಆಗುತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರದ ಯೋಜನೆಗಳು ನೇರವಾಗಿ ರೈತರು, ಬಡವರಿಗೆ ತಲುಪುವಂತೆ ಮಾಡಿ ಕ್ರಮವಹಿಸಲು ಆಗ್ರಹಿಸಿದ್ದಾರೆ. ರಾಜ್ಯ ಕಾರ್ಯಕಾರಣಿ ಸದಸ್ಯ ಜಿ. ಚನ್ನಾರೆಡ್ಡಿ ಗೌಡ ಮನವಿ ಸಲ್ಲಿಸಿದರು.

ಈ ವೇಳೆ ವೆಂಕೋಬಾ ಕಟ್ಟಿಮನಿ, ಮಹಾದೇವರಡ್ಡಿ, ಮರಿಲಿಂಗಪ್ಪ ತಡಿಬಿಡಿ, ಹಣಮಂತ್ರಾಯ ಗುರುಸಣಿಗಿ ಸೇರಿದಂತೆ ಹಲವು ರೈತರು ಇದ್ದರು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.