20 ಕ್ವಿಂಟಲ್ ತೊಗರಿ ಖರೀದಿಗೆ ನಿರ್ಧಾರ
Team Udayavani, Dec 20, 2020, 3:53 PM IST
ಯಾದಗಿರಿ: ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಕಾಳನ್ನು ಪ್ರತಿ ಕ್ವಿಂಟಲ್‌ಗೆ 6 ಸಾವಿರ ಬೆಂಬಲ ಬೆಲೆಯಲ್ಲಿ ಪ್ರತಿಯೊಬ್ಬ ರೈತರಿಂದ ಪ್ರತಿ ಎಕರೆಗೆ 7.5 ಕ್ವಿಂಟಲ್‌ದಂತೆ ಗರಿಷ್ಠ 20 ಕ್ವಿಂಟಲ್ ತೊಗರಿ ಖರೀದಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಸ್ತುತ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ಕೇಂದ್ರ ಆರಂಭದ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ವತಿಯಿಂದ 28 ಖರೀದಿ ಕೇಂದ್ರಗಳನ್ನು ಹಾಗೂ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ (ತೊಗರಿ ಅಭಿವೃದ್ಧಿ ಮಂಡಳಿ)ವತಿಯಿಂದ 10 ಖರೀದಿ ಕೇಂದ್ರಗಳು ಒಟ್ಟು 38 ಖರೀದಿ ಕೇಂದ್ರಗಳನ್ನು ತೆರೆಯಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.
ರೈತರ ನೋಂದಣಿ ಕಾರ್ಯದ ಕಾಲಾವಧಿ ಯನ್ನು ಡಿ.15 ರಿಂದ ಡಿ.30ರವರೆಗೆ ಹಾಗೂ ಖರೀದಿ ಕಾಲಾವಧಿ ಯನ್ನು2021ರ ಜ. 1ರಿಂದ 30ರವರೆಗೆ ನಿಗದಿಪಡಿಸಲಾಗಿದೆ. ರೈತರು ಕೂಡಲೇ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿಆಧಾರ್ ಕಾರ್ಡ್, ಆಧಾರ್ ಜೋಡಣೆಯ ಬ್ಯಾಂಕ್ ಖಾತೆ ಹೊಂದಿರುವ ಪಾಸ್ ಪುಸ್ತಕ ಝರಾಕ್ಸ್ ಪ್ರತಿ, ಒಂದು ವೇಳೆ ಬೆಳೆ ದರ್ಶಕ ಆ್ಯಪ್‌ನಲ್ಲಿ ಬೆಳೆ ನಮೂದಾಗದೆ ಇದ್ದಲ್ಲಿ ಅಂತಹ ರೈತರು ಕಂದಾಯ ಇಲಾಖೆ ಅಧಿಕಾರಿಗಳು ನೀಡುವ ದೃಢೀಕೃತಪಹಣಿ ಪ್ರತಿಯೊಂದಿಗೆ ನೋಂದಣಿಗೆ ನಿಗ ಪಡಿಸಿದೆ. ಸರತಿ ಸಾಲಿನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ತಿಳಿಸಲಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444