ಹೊರಟೂರ ಈಗ ಶಾಂತ; ಪೊಲೀಸ್‌ ಬಂದೋಬಸ್ತ್

Team Udayavani, Feb 23, 2019, 10:10 AM IST

yad-1.jpg

ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದ ಯಲ್ಲಮ್ಮದೇವಿ ಜಾತ್ರೆಯಲ್ಲಿ ಫೆ.20ರಂದು ಹೊರಟೂರ ಗ್ರಾಮದ ಎರಡು ಕೋಮಿನ ಜನರ ಮಧ್ಯೆ ಮಾರಾಮಾರಿ ಘಟನೆ ನಡೆದ ಹಿನ್ನೆಲೆಯಲ್ಲಿ ಹೊರಟೂರದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಡಿವೈಎಸ್ಪಿ ಯು.ಶರಣಪ್ಪ ಹೇಳಿದ್ದಾರೆ.

ಸದ್ಯ ಪರಿಸ್ಥಿತಿ ಶಾಂತವಿದ್ದು, ಗ್ರಾಮದಲ್ಲಿ ಒಬ್ಬ ಪಿಎಸ್‌ಐ, ಬ್ಬರು ಎಎಸ್‌ಐ, ಡಿಆರ್‌ ತುಕುಡಿ ನಿಯೋಜಿಸಿ ಸೂಕ್ತ ಬಂದೋಬಸ್ತ್ ಒದಗಿಸಲಾಗಿದೆ. ಈಗಾಗಲೇ 12 ಜನರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ಶೋಧ ಕಾರ್ಯ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
 
ಸಮಾಜ ಕಲ್ಯಾಣ ಅಧಿಕಾರಿ ಭೇಟಿ: ಹೊರಟೂರ ಗ್ರಾಮಕ್ಕೆ ಶುಕ್ರವಾರ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಅಲ್ಲಾಭಕ್ಷ ಭೇಟಿ ನೀಡಿ ಗ್ರಾಮದ ಜನರಿಂದ ಮಾಹಿತಿ ಪಡೆದರು.

ಗ್ರಾಮದ ದಲಿತರ ಓಣಿಯಲ್ಲಿ ನೀರು, ಶೌಚಾಲಯ ಸೇರಿದಂತೆ ಸಾಕಷ್ಟು ಸಮಸ್ಯೆಗಳಿರುವ ಕುರಿತು ಗ್ರಾಮಸ್ಥರು ಅಲ್ಲಾಭಕ್ಯ ಅವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಮರ್ಪಕ ಸೌಲಭ್ಯ ಒದಗಿಸಲು ಸಂಬಂಧಿಸಿದ ಪಿಡಿಒ ಅವರಿಗೆ ತಿಳಿಸಿರುವುದಾಗಿ ತಿಳಿಸಿದರು.
 
ಘಟನೆ ಹಿನ್ನೆಲೆ: ಜಿಲ್ಲೆಯ ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದ ಯಲ್ಲಮ್ಮದೇವಿ ಜಾತ್ರೆಯಲ್ಲಿ ಫೆ.20ರಂದು ಹೊರಟೂರ ಗ್ರಾಮದ ಎರಡು ಕೋಮಿನ ಜನರ ಮಧ್ಯೆ ಗುರುವಾರ ಸಿನಿಮೀಯ ರೀತಿಯಲ್ಲಿ ನಡೆದ ಮಾರಾಮಾರಿ ನಡೆದಿತ್ತು. ಘಟನೆಯಲ್ಲಿ 5 ಜನರು ಗಾಯಗೊಂಡಿದ್ದರು.

ಹೊರಟೂರು ಗ್ರಾಮದ ದಲಿತ ಸಮುದಾಯದ ಒಂದೇ ಕುಟುಂಬದ 5 ಜನರ ಮೇಲೆ ಅದೇ ಗ್ರಾಮದ ಕುರುಬ ಸಮುದಾಯ ಜನರು ಜಾತ್ರೆಯಲ್ಲಿ ಕಟ್ಟಿಗೆಗಳಿಂದ ಹೊಡೆದು ಗಾಯಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ 12 ಜನರ ವಿರುದ್ಧ ವಡಗೇರಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಈ ಮಧ್ಯೆ ದಲಿತ ಸಮುದಾಯದ ಜನರಿಗೆ ವಿರೋಧಿಗಳು ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿರುವ ದಲಿತ ಸಮುದಾಯದ 20 ಕುಟುಂಬದ ಮಹಿಳೆಯರು, ಪುರುಷರು ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಜನರು ಭಯದಿಂದ ಯಾದಗಿರಿ ಜಿಲ್ಲಾಸ್ಪತ್ರೆ ಆವರಣದಲ್ಲಿ ರಾತ್ರಿ ಊಟ ನೀರಿಲ್ಲದೆ ಜಾಗರಣೆ ಮಾಡಿದ್ದರು. ಸ್ಥಳಕ್ಕಾಗಮಿಸಿದ ಮಾದಿಗ ದಂಡೋರ ಸಮಿತಿ ಕಾರ್ಯಕರ್ತರು ಜನರನ್ನು ಗ್ರಾಮಕ್ಕೆ ಕಳಿಸಿಕೊಟ್ಟಿದ್ದರು.

ಹಾಲಗೇರಾದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಹೊರಟೂರ ಗ್ರಾಮದ ಸಂತ್ರಸ್ತರಿಗೆ ಸೂಕ್ತ ಬಂದೋಬಸ್ತ್ ಕಲ್ಪಿಸಲು ಪೊಲೀಸರಿಗೆ ಪತ್ರ ಬರೆಯಲಾಗಿದೆ. ಹಲ್ಲೆಗೊಳಗಾದವರಿಗೆ ಇಲಾಖೆಯಿಂದ ನ್ಯಾಯಯುತ ದೊರೆಯುವ ಎಲ್ಲಾ ಸೌಲಭ್ಯ ವಿತರಿಸಲಾಗುವುದು. ಅಲ್ಲದೇ ಶೀಘ್ರದಲ್ಲೇ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ಆಯೋಜಿಸಲಾಗುವುದು.

 ಅಲ್ಲಾಬಕಾಷ್‌, ಸಮಾಜ ಕಲ್ಯಾಣ ಅಧಿಕಾರಿ ಅಸ್ಪೃಶ್ಯತೆ ಇನ್ನೂ ಜೀವಂತ ಇದೆ. ಗ್ರಾಮದಲ್ಲಿನ ಹೋಟೆಲ್‌ನಲ್ಲಿ ಗ್ಲಾಸ್‌, ಕುಡಿಯುವ ನೀರು ಮುಟ್ಟಿದ್ದರೆ ದೂರ ಸರಿ ಎನ್ನುತ್ತಾರೆ. ಗಾಯಗೊಂಡವರ ತಾಯಿ ಗ್ರಾಪಂ ಸದಸ್ಯೆ ಇದ್ದಾರೆ. ಒಳ್ಳೆಯ ಮನೆ ಕಟ್ಟಿಕೊಂಡು ನೆಲೆಸಿದ್ದಾರೆ. ಹಾಗಾಗಿ ಕಣ್ಣು ಕುಕ್ಕುವಂತಾಗಿದೆ. ಸರ್ವರಿಗೆ ಸಮಾನತೆ ಸಿಗಲಿ ಹಾಗೂ ಬಡಾವಣೆ ಅಭಿವೃದ್ಧಿಗೆ ಒತ್ತು ನೀಡಬೇಕು.
 ರಾಜು ದಾಸನಕೇರಿ, ಮಾದಿಗ ದಂಡೋರ ಸಮಿತಿ ಜಿಲ್ಲಾಧ್ಯಕ್ಷ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.